Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಬೆಂಬಲ ಬೆಲೆ ಯೋಜನೆಯಡಿ ತೊಗರಿ...

ಕಲಬುರಗಿ | ಬೆಂಬಲ ಬೆಲೆ ಯೋಜನೆಯಡಿ ತೊಗರಿ ಖರೀದಿಗೆ ಜಿಲ್ಲಾ ಟಾಸ್ಕ್‌ ಫೋರ್ಸ್ ಸಭೆಯಲ್ಲಿ ಒಪ್ಪಿಗೆ

ವಾರ್ತಾಭಾರತಿವಾರ್ತಾಭಾರತಿ19 Dec 2025 11:42 AM IST
share
ಕಲಬುರಗಿ | ಬೆಂಬಲ ಬೆಲೆ ಯೋಜನೆಯಡಿ ತೊಗರಿ ಖರೀದಿಗೆ ಜಿಲ್ಲಾ ಟಾಸ್ಕ್‌ ಫೋರ್ಸ್ ಸಭೆಯಲ್ಲಿ ಒಪ್ಪಿಗೆ

ಕಲಬುರಗಿ: ಪ್ರಸಕ್ತ 2025-26ನೇ ಸಾಲಿನ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ತೊಗರಿ ಖರೀದಿಗೆ ರಾಜ್ಯ ಸರ್ಕಾರ ಆದೇಶಿಸಿರುವುದರಿಂದ ಗುರುವಾರ ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಜಿಲ್ಲಾ ಮಟ್ಟದ ಟಾಸ್ಕ್ ಫೋರ್ಸ ಸಭೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ತೊಗರಿ ಖರೀದಿಗೆ ಸಭೆ ಒಪ್ಪಿಗೆ ಸೂಚಿಸಿದೆ.

ಪ್ರತಿ ಕ್ವಿಂಟಾಲಗೆ 8,000 ರೂ. ಮತ್ತು ಪ್ರತಿ ಎಕರೆಗೆ 4 ಕ್ವಿಂಟಲ್ ನಂತೆ FRUITS ತಂತ್ರಾಂಶದಲ್ಲಿ ಲಭ್ಯವಾಗುವ ರೈತರು ತೊಗರಿ ಬೆಳೆದ ಜಮೀನಿನ ವಿಸ್ತೀರ್ಣಕ್ಕೆ ಅನುಗುಣವಾದ ಪ್ರಮಾಣದಲ್ಲಿ ತೊಗರಿಯನ್ನು ಖರೀದಿಸಲು ಸಭೆ ಅನುಮತಿ ನೀಡಿದೆ.

ಈ ಸಂದರ್ಭದಲ್ಲಿ ಡಿ.ಸಿ ಬಿ.ಫೌಝಿಯಾ ತರನ್ನುಮ್ ಮಾತನಾಡಿ, ನಫೆಡ್ ಸಂಸ್ಥೆಯು ನೊಂದಾಯಿತ ರೈತರಿಂದ ಬೆಂಬಲ ಬೆಲೆ ದರಕ್ಕಿಂತ ಹೆಚ್ಚಿನ ಮಾರುಕಟ್ಟೆ ಧಾರಣೆ ಇದ್ದಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಇ-ಆಕ್ಷನ್‌ ಪೋರ್ಟಲ್ ಹಾಗೂ ಮುಕ್ತ ಮಾರುಕಟ್ಟೆಯಲ್ಲಿ ಬಫರ್ ಸ್ಟಾಕ್‌ ಉದ್ದೇಶಕ್ಕಾಗಿ ಬೆಂಬಲ ಬೆಲೆಗಿಂತ ಹೆಚ್ಚಿನ ದರದಲ್ಲಿ ಖರೀದಿ ಕೈಗೊಳ್ಳುತ್ತಾರೆ ಎಂದರು.

ಇನ್ನು ಕಲಬುರಗಿ ಜಿಲ್ಲೆಗೆ ತೊಗರಿ ಖರೀದಿಸಲು ಕರ್ನಾಟಕ ರಾಜ್ಯ ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿ ಕಲಬುರಗಿ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳಿ ಕಲಬುರಗಿ ಸಂಸ್ಥೆಯನ್ನು ರಾಜ್ಯ ಖರೀದಿ ಸಂಸ್ಥೆಗಳಾಗಿ ನೇಮಿಸಲಾಗಿದ್ದು, ಜಿಲ್ಲೆಯಲ್ಲಿ ಒಟ್ಟು 141 ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳು ಹಾಗೂ ಎಫ್.ಪಿ.ಓ ಗಳ ಮೂಲಕ ತೊಗರಿ ಖರೀದಿ ಮಾಡಲಾಗುತ್ತದೆ. ಖರೀದಿ ಕೇಂದ್ರಗಳಲ್ಲಿ ಪಿ.ಓ.ಎಸ್. ಯಂತ್ರದ ಮೂಲಕ ರೈತರ ನೋಂದಣಿ ಹಾಗೂ ಖರೀದಿ ಪ್ರಕ್ರಿಯೆಯಲ್ಲಿ ಆಧಾರ್ ಬಯೋ ಮೆಟ್ರಿಕ್ ಪಡೆಯುವುದು ಕಡ್ಡಾಯವಾಗಿದ್ದು, ರೈತರು ಸಹಕರಿಸಬೇಕೆಂದು ಡಿ.ಸಿ ಮನವಿ ಮಾಡಿದ್ದಾರೆ.

ಮಾ.6ರ ವರೆಗೆ ನೋಂದಣಿ, ಮಾ.16ರವರೆಗೆ ಮಾರಾಟಕ್ಕೆ ಅವಕಾಶ :

ಬೆಂಬಲ ಬೆಲೆ ಯೋಜನೆಯಡಿ ತೊಗರಿ ಖರೀದಿಗೆ ಸರ್ಕಾರ ಅವಧಿ ನಿಗಧಿ ಮಾಡಿದ್ದು, ರೈತರ ನೊಂದಣಿ ಕಾರ್ಯ ಮಾ.6ರ ವರೆಗೆ ನಡೆಯಲಿದೆ. ಇನ್ನು ನೋಂದಣಿಯಾದ ರೈತರಿಂದ ತೊಗರಿ ಪ್ರಕ್ರಿಯೆ ಮಾ.16ರ ವರೆಗೆ ಸಾಗಲಿದೆ. ರೈತರಿಂದ ಖರೀದಿಸಿದ ಉತ್ಪನ್ನದ ಮೌಲ್ಯವನ್ನು ಡಿ.ಬಿ.ಟಿ ಪೋರ್ಟಲ್ ಮೂಲಕ ರೈತರ ಬ್ಯಾಂಕ್ ಖಾತೆಗೆ ಪಾವತಿಸಲಾಗುವುದು ಎಂದು ಡಿ.ಸಿ. ಬಿ.ಫೌಝಿಯಾ ತರನ್ನುಮ್ ತಿಳಿಸಿದ್ದಾರೆ

ಜಿಲ್ಲೆಯ ರೈತ ಭಾಂದವರು ಸಮೀಪದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ, ಎಫ್.ಪಿ.ಓ ಗಳಿಗೆ ಹಾಗೂ ಎ.ಪಿ.ಎಂ.ಸಿ ಯಲ್ಲಿನ ತೊಗರಿ ಖರೀದಿ ಕೇಂದ್ರಗಳಿಗೆ ಭೇಟಿ ನೀಡಿ ಬೆಳೆದ ತೊಗರಿ ನಿಗದಿತ ಅವಧಿಯಲ್ಲಿ ಮಾರಾಟಕ್ಕೆ ನೊಂದಾಯಿಸಿಕೊಂಡು ಮಾರಾಟ ಮಾಡುವ ಮೂಲಕ ಯೋಜನೆಯ ಲಾಭ ಪಡೆಯುವಂತೆ ಟಾಸ್ಕ್ ಪೋರ್ಸ್ ಸಮಿತಿಯ ಅಧ್ಯಕ್ಷರಾಗಿರುವ ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ.

ಇನ್ನು ಖರೀದಿ ಮತ್ತು ನೋಂದಣಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗೆ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳಿ ಕಲಬುರಗಿ ಮೊ.ನಂ. 9449864446 ಮತ್ತು ಕರ್ನಾಟಕ ರಾಜ್ಯ ದ್ವಿದಳ ಧಾನ್ಯ ಅಭಿವೃದ್ದಿ ಮಂಡಳಿ ಕಲಬುರಗಿ ಮೊ.ನಂ. 9964474444 ಸಂಪರ್ಕಿಸಬಹುದಾಗಿದೆ ತಿಳಿಸಿದ್ದಾರೆ.

ಸಭೆಯಲ್ಲಿ ಜಂಟಿ ಕೃಷಿ ನಿರ್ದೇಶಕ ಸಮದ್ ಪಟೇಲ್, ಸಹಕಾರ ಸಂಘದ ಉಪನಿಬಂಧಕ ಕಿಶೋರ ಪಾಟೀಲ, ಕೃಷಿ ಉತ್ಪನ್ನ ಮಾರುಕಟ್ಟೆ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಸೇರಿದಂತೆ ತೊಗರಿ ಅಭಿವೃದ್ಧಿ ಮಂಡಲಿ, ಖರೀದಿ ಎಜೆನ್ಸಿಗಳ ಅಧಿಕಾರಿಗಳು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X