Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಅ.18 ರಂದು ಕಲಬುರಗಿ ವಿಭಾಗ ದಾಸ ಸಾಹಿತ್ಯ...

ಅ.18 ರಂದು ಕಲಬುರಗಿ ವಿಭಾಗ ದಾಸ ಸಾಹಿತ್ಯ ಸಮ್ಮೇಳನ: ರವಿಕುಮಾರ ಶಹಾಪೂರಕರ್

ವಾರ್ತಾಭಾರತಿವಾರ್ತಾಭಾರತಿ14 Oct 2025 8:08 PM IST
share
ಅ.18 ರಂದು ಕಲಬುರಗಿ ವಿಭಾಗ ದಾಸ ಸಾಹಿತ್ಯ ಸಮ್ಮೇಳನ: ರವಿಕುಮಾರ ಶಹಾಪೂರಕರ್

ಕಲಬುರಗಿ: ಕನ್ನಡ ಸಾಹಿತ್ಯ ಪರಿಷತ್ ದಕ್ಷಿಣ ವಲಯದ ವತಿಯಿಂದ ಹಿರಿಯ ಸಾಹಿತಿ-ಪತ್ರಕರ್ತ ಡಾ.ಶ್ರೀನಿವಾಸ ಸಿರನೂರಕರ್ ಅವರ ಸರ್ವಾಧ್ಯಕ್ಷತೆಯಲ್ಲಿ ಒಂದು ದಿನದ ಕಲಬುರಗಿ ವಿಭಾಗ ದಾಸ ಸಾಹಿತ್ಯ ಸಮ್ಮೇಳನವನ್ನು ಇದೇ 18 ರಂದು ನಗರದ ಕನ್ನಡ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕಸಾಪ ದಕ್ಷಿಣ ವಲಯದ ಅಧ್ಯಕ್ಷ ರವಿಕುಮಾರ ಶಹಾಪೂರಕರ್ ತಿಳಿಸಿದ್ದಾರೆ.

ಸಮಾಜ ಪರಿವರ್ತನೆಯಲ್ಲಿ ದಾಸ ಸಾಹಿತ್ಯ ಪ್ರಮುಖ ಪಾತ್ರ ವಹಿಸಿದೆ. ದಾಸರು ತಮ್ಮ ಕೀರ್ತನೆಗಳು ಮತ್ತು ಪ್ರಖರವಾದ ಚಿಂತನೆಗಳ ಮೂಲಕ ಅಂದಿನ ಸಮಾಜದಲ್ಲಿನ ಜಾತಿ ತಾರತಮ್ಯ, ಅಸ್ಪೃಶ್ಯತೆ ಮತ್ತು ಇತರೆ ಅನಿಷ್ಠ ಪದ್ಧತಿಗಳನ್ನು ಖಂಡಿಸಿದ್ದಾರೆ. ಅವರು ಸಾಮಾಜಿಕ ಸಮಾನತೆ, ಮಾನವೀಯತೆ ಮತ್ತು ಭಕ್ತಿ ಕೇಂದ್ರಿತ ಜೀವನವನ್ನು ನಡೆಸಿದ್ದರು. ಇಂಥ ಶ್ರೇಷ್ಠ ಚಿಂತನೆಗಳ ಮೇಲೆ ಬೆಳಕು ಚೆಲ್ಲುವ ಕಾರ್ಯ ಈ ಸಮ್ಮೇಳನ ಮಾಡಲಿದೆ ಎಂದು ಅವರು ವಿವರಿಸಿದರು.

ಸಮ್ಮೇಳನದ ಯಶಸ್ವಿಗೆ ಪೂರಕವಾಗಿ ರಚಿಸಲ್ಪಟ್ಟ ಸ್ವಾಗತ ಸಮಿತಿಗೆ ಮಾಜಿ ಶಾಸಕ ದತ್ತಾತ್ರೇಯ ಪಾಟೀಲ ರೇವೂರ, ಗೌರವಾಧ್ಯಕ್ಷ ಮಲ್ಲಣ್ಣ ಮಡಿವಾಳ, ಕಾರ್ಯಾಧ್ಯಕ್ಷ ಕೃಷ್ಣಾಜಿ ಕುಲಕರ್ಣಿ, ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ, ವಲಯ ಅಧ್ಯಕ್ಷ ರವಿಕುಮಾರ ಶಹಾಪೂರಕರ್ ಅವರುಗಳು ಅರ್ಥಪೂರ್ಣ ಸಮ್ಮೇಳನ ನಡೆಸಲು ಈಗಾಗಲೇ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಅಂದು ಬೆಳಗ್ಗೆ 9.30 ಕ್ಕೆ ನಗರದ ಮಿನಿ ವಿಧಾನ ಸೌಧದಿಂದ ಕನ್ನಡ ಭವನದ ವರೆಗೆ ಸಮ್ಮೇಳನಾಧ್ಯಕ್ಷರ ಸಾಂಸ್ಕೃತಿಕ ಮೆರವಣಿಗೆ ಜರುಗಲಿದ್ದು, ಕೇಂದ್ರ ಕಸಾಪ ಪ್ರತಿನಿಧಿ ಸೈಯದ್ ನಜಿರುದ್ದೀನ್ ಮುತ್ತವಲ್ಲಿ ಮೆರವಣಿಗೆಗೆ ಚಾಲನೆ ನೀಡಲಿದ್ದು, ಕೆ.ಎಸ್.ಆರ್.ಪಿ. ಸಹಾಯಕ ಕಮಾಂಡೆಂಟ್ ಗುರುನಾಥ ಎಸ್ ಅವರು ನೇತೃತ್ವ ವಹಿಸಲಿದ್ದಾರೆ.

ಮಾಜಿ ಸೈನಿಕ ಶರಣಬಸಪ್ಪ ಆರ್. ಓಗಿ ವೇದಿಕೆಯಡಿಯಲ್ಲಿ ಬೆಳಗ್ಗೆ 11.15 ಕ್ಕೆ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಗುಲಬರ್ಗಾ ವಿ.ವಿ. ಕುಲಪತಿ ಡಾ.ಶಶಿಕಾಂತ ಉಡಿಕೇರಿ ಸಮ್ಮೇಳನ ಉದ್ಘಾಟಿಸಲಿದ್ದು, ಕಸಾಪ ರಾಜ್ಯಾಧ್ಯಕ್ಷ ನಾಡೋಜ ಡಾ.ಮಹೇಶ ಜೋಶಿ, ಸಮ್ಮೇಳನಾಧ್ಯಕ್ಷ ಡಾ.ಶ್ರೀನಿವಾಸ ಸಿರನೂರಕರ್, ನಿಕಟಪೂರ್ವ ಸಮ್ಮೇಳನಾಧ್ಯಕ್ಷ ಡಾ.ವಾಸುದೇವ ಅಗ್ನಿಹೋತ್ರಿ, ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ, ಮಾಜಿ ಶಾಸಕ ದತ್ತಾತ್ರೇಯ ಪಾಟೀಲ ರೇವೂರ, ಹಿರಿಯ ಸಾಹಿತಿ ಡಾ.ಸ್ವಾಮಿರಾವ ಕುಲಕರ್ಣಿ ಸೇರಿ ಅನೇಕ ಭಾಗವಹಿಸಲಿದ್ದಾರೆ.

ಮಧ್ಯಾಹ್ನ 12.45 ಕ್ಕೆ ಹಿರಿಯ ಪತ್ರಕರ್ತ ವಾದಿರಾಜ ವ್ಯಾಸಮುದ್ರ ಅಧ್ಯಕ್ಷತೆಯಲ್ಲಿ ನಡೆಯುವ ದಾಸ ಚಿಂತನೆ ಗೋಷ್ಠಿಯಲ್ಲಿ ದಾಸ ಸಾಹಿತ್ಯಕ್ಕೆ ಬ್ರಾಹ್ಮಣೇತರರ ಕೊಡುಗೆ ಕುರಿತು ಡಾ.ಜಗನ್ನಾಥ ತರನಳ್ಳಿ, ದಾಸ ಸಾಹಿತ್ಯ-ಸಾಮಾಜಿಕ ಕಾಳಜಿ ಕುರಿತು ಡಾ.ಶೈಲಜಾ ಕೊಪ್ಪರ, ಸಮ್ಮೇಳನಾಧ್ಯಕ್ಷರ ಬದುಕು-ಬರಹದ ಕುರಿತು ಶೇಷಮೂರ್ತಿ ಅವಧಾನಿ ಮಾತನಾಡಲಿದ್ದಾರೆ. ಪ್ರೊ.ಎಸ್.ಎಲ್.ಪಾಟೀಲ, ಸುರೇಶ ಗೌರೆ, ಚಂದ್ರಕಾಂತ ಏರಿ, ಜಗನ್ನಾಥ ಸೂರ್ಯವಂಶಿ ಉಪಸ್ಥಿತರಿರುವರು.

ಮಧ್ಯಾಹ್ನ 2.15 ಕ್ಕೆ ಗೀತ, ನೃತ್ಯ, ಭಜನಾ ಸಂಭ್ರಮ ಜರುಗಲಿದ್ದು, ಡಾ.ಶುಭಾಂಗಿ ಸುಧೀಂದ್ರ ಸಾರಥ್ಯದ ಓಂಕಾರ ನೃತ್ಯ ಸಾಧನಾ ಕಲಾ ತಂಡ, ಡಾ.ಸುನಂದಾ ಸಾಲವಾಡಗಿ ಸಾರಥ್ಯದ ಶಾರದಾ ಸಂಗೀತ ವಿದ್ಯಾಲಯ, ಮಹಾಲಕ್ಷ್ಮೀ ಭಜನಾ ಮಂಡಳಿ, ಕಲ್ಪವೃಕ್ಷ ಶಿಕ್ಷಣ ಸಂಸ್ಥೆಯ ಮಕ್ಕಳು, ರಂಗವಿಠಲ ಭಜನಾ ಮಂಡಳಿ ವತಿಯಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.

ಇಳಿಹೊತ್ತು 4.15 ಕ್ಕೆ ಸಮಾರೋಪ ಮತ್ತು ಸತ್ಕಾರ ಸಂಭ್ರಮ ಜರುಗಲಿದ್ದು, ಗುಲಬರ್ಗಾ ವಿ.ವಿ. ನಿವೃತ್ತ ಕುಲಪತಿ ಡಾ.ಪರಿಮಳಾ ಅಂಬೇಕರ್ ಸಮಾರೋಪ ನುಡಿಗಳನ್ನಾಡಲಿದ್ದು, ಶಾಸಕ ಅಲ್ಲಮಪ್ರಭು ಪಾಟೀಲ್‌, ಮಹಾಪೌರರಾದ ವರ್ಷಾ ರಾಜೀವ ಜಾನೆ, ಉಪ ಮಹಾಪೌರರಾದ ತೃಪ್ತಿ ಶ್ರೀನಿವಾಸ ಲಾಖೆ, ಪಾಲಿಕೆಯ ವಿರೋಧ ಪಕ್ಷದ ನಾಯಕಿ ಶೋಭಾ ಜಿ ದೇಸಾಯಿ ಅವರು ವಿಶೇಷ ಅತಿಥಿಗಳಾಗಿ ಆಗಮಿಸಲಿದ್ದಾರೆ. ಡಾ.ಸಂತೋಷ ಹೊಸಮನಿ, ಸುರೇಶ ಮಾಳೇಗಾಂವ, ಡಾ.ಪ್ರೇಮಚಂದ ಚವ್ಹಾಣ, ಜೆ.ಮಲ್ಲಪ್ಪ ಉಪಸ್ಥಿತರಿರುವರು. ಕಲಬುರಗಿ ವಿಭಾಗದ ವಿವಿಧ ಜಿಲ್ಲೆಗಳ ವಿವಿಧ ಕ್ಷೇತ್ರದ ಸುಮಾರು 20 ಕ್ಕೂ ಹೆಚ್ಚು ಸಾಧಕರನ್ನು ಸತ್ಕರಿಸಲಾಗುವುದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X