Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಡಿ.ಕೆ.ಶಿವಕುಮಾರ್...

Kalaburagi | ಡಿ.ಕೆ.ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡಬೇಕು: ಕಾಂಗ್ರೆಸ್ ಹೈಕಮಾಂಡ್‌ಗೆ ಪಿಡ್ಡಪ್ಪ ಜಾಲಗಾರ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ14 May 2026 7:45 PM IST
share
Kalaburagi | ಡಿ.ಕೆ.ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡಬೇಕು: ಕಾಂಗ್ರೆಸ್ ಹೈಕಮಾಂಡ್‌ಗೆ ಪಿಡ್ಡಪ್ಪ ಜಾಲಗಾರ ಒತ್ತಾಯ

ಕಲಬುರಗಿ: ಕರ್ನಾಟಕ ರಾಜಕಾರಣದಲ್ಲಿ ಅಪಾರ ಅನುಭವ ಹೊಂದಿರುವ ಹಾಗೂ “ಟ್ರಬಲ್ ಶೂಟರ್” ಎಂದೇ ಖ್ಯಾತರಾಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ರಾಜ್ಯದ ಮುಖ್ಯಮಂತ್ರಿಯಾಗಿ ನೇಮಕ ಮಾಡಬೇಕು ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಇತರೆ ಹಿಂದುಳಿದ ವರ್ಗಗಳ ವಿಭಾಗದ ಉಪಾಧ್ಯಕ್ಷ ಪಿಡ್ಡಪ್ಪ ಜಾಲಗಾರ ಸುರಪೂರ ಕಾಂಗ್ರೆಸ್ ಹೈಕಮಾಂಡ್‌ಗೆ ಒತ್ತಾಯಿಸಿದರು.

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿ ಅವರಿಗೆ ಮನವಿ ಸಲ್ಲಿಸಿರುವುದಾಗಿ ತಿಳಿಸಿದರು.

2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಪಡೆಯಲು ಡಿ.ಕೆ. ಶಿವಕುಮಾರ್ ಅವರ ಸಂಘಟನಾ ಚಾತುರ್ಯ ಮತ್ತು ನಾಯಕತ್ವ ಪ್ರಮುಖ ಕಾರಣವಾಗಿದೆ. ಅವರ ನಿರಂತರ ಪರಿಶ್ರಮದಿಂದ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ ಎಂದು ಹೇಳಿದರು.

ಕೇವಲ ಕರ್ನಾಟಕದಲ್ಲಷ್ಟೇ ಅಲ್ಲದೆ ಮಹಾರಾಷ್ಟ್ರ, ಗುಜರಾತ್, ಅಸ್ಸಾಂ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಪಕ್ಷ ಸಂಕಷ್ಟಕ್ಕೆ ಸಿಲುಕಿದಾಗ ಸಮಸ್ಯೆ ಬಗೆಹರಿಸಿದ ಕೀರ್ತಿ ಡಿ.ಕೆ. ಶಿವಕುಮಾರ್ ಅವರಿಗೆ ಸಲ್ಲುತ್ತದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಪ್ರಸ್ತುತ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ಚರ್ಚೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ, ದಿಟ್ಟ ನಾಯಕತ್ವ ಹೊಂದಿರುವ ಡಿ.ಕೆ. ಶಿವಕುಮಾರ್ ಅವರಿಗೆ ಒಂದು ಅವಕಾಶ ನೀಡಬೇಕು ಎಂಬುದು ಜನಸಾಮಾನ್ಯರು ಹಾಗೂ ಕಾರ್ಯಕರ್ತರ ಬಲವಾದ ಅಭಿಪ್ರಾಯವಾಗಿದೆ ಎಂದು ಹೇಳಿದರು.

ಮೇ 15ರಂದು ಡಿ.ಕೆ. ಶಿವಕುಮಾರ್ ಅವರ ಜನ್ಮದಿನ ಇರುವುದರಿಂದ, ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡುವ ಮೂಲಕ ಕಾಂಗ್ರೆಸ್ ಹೈಕಮಾಂಡ್ ವಿಶೇಷ ಗೌರವ ಸಲ್ಲಿಸಬೇಕು ಎಂದು ಪಿಡ್ಡಪ್ಪ ಜಾಲಗಾರ ಆಗ್ರಹಿಸಿದರು.

Tags

D.K.ShivakumarKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X