Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಸಿದ್ದರಾಮಯ್ಯರ ಮೂರ್ತಿ...

Kalaburagi | ಸಿದ್ದರಾಮಯ್ಯರ ಮೂರ್ತಿ ಸ್ಥಾಪನೆಗೆ ಅವಕಾಶ ನೀಡಬೇಡಿ : ಅವ್ವಣ್ಣ ಮ್ಯಾಕೇರಿ

ಅ.16ರಂದು ಚಲೋ ಕಾರ್ಪೊರೇಷನ್ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ1 Oct 2026 8:37 PM IST
share
Kalaburagi | ಸಿದ್ದರಾಮಯ್ಯರ ಮೂರ್ತಿ ಸ್ಥಾಪನೆಗೆ ಅವಕಾಶ ನೀಡಬೇಡಿ : ಅವ್ವಣ್ಣ ಮ್ಯಾಕೇರಿ

ಕಲಬುರಗಿ: ಅಹಿಂದ ನಾಯಕ ಹಾಗೂ ಹೋರಾಟಗಾರ ದಿ. ವಿಠಲ ಹೇರೂರ ಅವರ ಹೆಸರಿನಲ್ಲಿರುವ ವೃತ್ತದಲ್ಲಿ ಅವರದ್ದೇ ಮೂರ್ತಿಯನ್ನು ಸ್ಥಾಪಿಸಲು ಅವಕಾಶ ನೀಡಬೇಕು. ಅದೇ ಸ್ಥಳದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೂರ್ತಿ ಸ್ಥಾಪನೆಗೆ ಅವಕಾಶ ನೀಡಬಾರದು ಎಂದು ಸ್ವಾಭಿಮಾನಿ ವಿಠಲ ಹೇರೂರ ಅಭಿಮಾನಿಗಳ ಸಂಘದ ಸದಸ್ಯ ಹಾಗೂ ಕೋಲಿ ಸಮಾಜದ ಮುಖಂಡ ಅವ್ವಣ್ಣ ಮ್ಯಾಕೇರಿ ಆಗ್ರಹಿಸಿದರು.

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಠಲ ಹೇರೂರ ವೃತ್ತದಲ್ಲಿ ಕೆಲವರು ರಾತ್ರಿ ವೇಳೆ ಸಿದ್ದರಾಮಯ್ಯ ಅವರ ಮೂರ್ತಿ ಸ್ಥಾಪಿಸಲು ಮುಂದಾಗಿರುವುದು ತಮ್ಮ ಸಂಘಟನೆಗೆ ಆಕ್ಷೇಪವಿದೆ. ಈಗಾಗಲೇ ವಿಠಲ ಹೇರೂರ ಅವರ ಹೆಸರಿನಲ್ಲಿ ಗುರುತಿಸಲ್ಪಟ್ಟಿರುವ ವೃತ್ತದಲ್ಲಿ ಅವರ ಮೂರ್ತಿ ಸ್ಥಾಪನೆಗೆ ಆಡಳಿತವು ಅವಕಾಶ ನೀಡಬೇಕು ಎಂದು ಒತ್ತಾಯಿಸಿದರು.

ವಿಠಲ ಹೇರೂರ ಅವರ ಮೂರ್ತಿ ಸ್ಥಾಪನೆಗೆ ಒತ್ತಾಯಿಸಿ ಅ.16ರಂದು ‘ಚಲೋ ಕಾರ್ಪೊರೇಷನ್’ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದ ಅವರು, ಪಾಲಿಕೆ ಹಾಗೂ ಜಿಲ್ಲಾಡಳಿತವು ಎರಡೂ ಸಮುದಾಯಗಳ ಭಾವನೆಗಳನ್ನು ಪರಿಗಣಿಸಿ, ಯಾವುದೇ ರೀತಿಯ ಗೊಂದಲಕ್ಕೆ ಅವಕಾಶವಾಗದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಹಾಲುಮತ ಮತ್ತು ಗಂಗಾಮತ ಸಮುದಾಯಗಳು ಪರಸ್ಪರ ಸಹೋದರ ಸಮುದಾಯಗಳಾಗಿವೆ. ಕೆಲವರ ನಡೆ ಎರಡೂ ಸಮುದಾಯಗಳ ನಡುವಿನ ಸಾಮರಸ್ಯಕ್ಕೆ ಧಕ್ಕೆ ತರುವ ಸಾಧ್ಯತೆಯಿದೆ ಎಂದು ಮ್ಯಾಕೇರಿ ಆರೋಪಿಸಿದರು. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಿ ಎರಡೂ ಸಮುದಾಯಗಳ ನಡುವೆ ಸೌಹಾರ್ದತೆ ಕಾಪಾಡಬೇಕು ಎಂದು ಮನವಿ ಮಾಡಿದರು.

ವಿಠಲ ಹೇರೂರ ಅವರು ಹಿಂದುಳಿದ ಹಾಗೂ ಶೋಷಿತ ಸಮುದಾಯಗಳ ಪರವಾಗಿ ಹೋರಾಟ ನಡೆಸಿದ ನಾಯಕರು. ಅವರ ಹೆಸರಿನಲ್ಲಿಯೇ ವೃತ್ತವಿರುವುದರಿಂದ ಅದೇ ಸ್ಥಳದಲ್ಲಿ ಅವರ ಮೂರ್ತಿ ಸ್ಥಾಪನೆಗೆ ಅವಕಾಶ ಕಲ್ಪಿಸುವುದು ಸೂಕ್ತವಾಗಿದೆ ಎಂದು ಅವರು ಹೇಳಿದರು.

ಸಿದ್ದರಾಮಯ್ಯ ಅವರ ಮೂರ್ತಿ ಸ್ಥಾಪನೆಗೆ ಸಂಘಟನೆಯ ವಿರೋಧವಿದೆ ಎಂದು ತಿಳಿಸಿದ ಅವರು, ನಗರದಲ್ಲಿ ಕುರುಬ ಸಮುದಾಯಕ್ಕೆ ಮೂರು ಎಕರೆ ಜಾಗ ನೀಡಲಾಗಿದೆ ಎಂಬ ಮಾಹಿತಿ ಇದೆ. ಸಂಬಂಧಪಟ್ಟವರು ಸೂಕ್ತ ಸ್ಥಳದಲ್ಲಿ ಸಿದ್ದರಾಮಯ್ಯ ಅವರ ಮೂರ್ತಿ ಸ್ಥಾಪಿಸುವ ಕುರಿತು ಪರಿಶೀಲಿಸಬಹುದು ಎಂದು ಸಲಹೆ ನೀಡಿದರು.

ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಈ ಕುರಿತು ಸಮಗ್ರ ಚರ್ಚೆ ನಡೆಸಿ, ಎಲ್ಲರ ಅಭಿಪ್ರಾಯಗಳನ್ನು ಪರಿಗಣಿಸಿ ನಿರ್ಧಾರ ಕೈಗೊಳ್ಳಬೇಕು. ಯಾವುದೇ ಸಮುದಾಯಗಳ ನಡುವೆ ಸಂಘರ್ಷಕ್ಕೆ ಕಾರಣವಾಗದಂತೆ ಆಡಳಿತ ವರ್ಗವು ಕ್ರಮ ವಹಿಸಬೇಕು. ವಿಠಲ ಹೇರೂರ ಅಭಿಮಾನಿಗಳ ಬೇಡಿಕೆಯನ್ನು ಪರಿಗಣಿಸಿ ಅವರ ಮೂರ್ತಿ ಸ್ಥಾಪನೆಗೆ ಅಗತ್ಯ ಅನುಮತಿ ನೀಡಬೇಕು ಎಂದು ಮ್ಯಾಕೇರಿ ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಬ್ರಹ್ಮಶ್ರೀ ರಾಜಗುರು ಸ್ವಾಮೀಜಿ, ಶಾಂತಪ್ಪ ಕೂಡಿ, ಬಸವರಾಜ ಬೂದಿಹಾಳ, ಬಸವರಾಜ ಹರವಾಳ, ರಮೇಶ್ ನಾಟಿಕಾರ, ಪಿಡ್ಡಪ್ಪ ಜಾಲಗಾರ, ಅವ್ವಣ್ಣಗೌಡ ಪಾಟೀಲ, ರವಿಗೌಡಗಾಂವ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags

SiddaramaiahKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X