Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ವಿಠ್ಠಲ ಹೇರೂರ...

Kalaburagi | ವಿಠ್ಠಲ ಹೇರೂರ ವೃತ್ತದಲ್ಲಿ ಸಿದ್ದರಾಮಯ್ಯ ಮೂರ್ತಿಗೆ ಅವಕಾಶ ನೀಡಬೇಡಿ: ಅವ್ವಣ್ಣ ಮ್ಯಾಕೇರಿ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ23 Sept 2026 6:05 PM IST
share
Kalaburagi | ವಿಠ್ಠಲ ಹೇರೂರ ವೃತ್ತದಲ್ಲಿ ಸಿದ್ದರಾಮಯ್ಯ ಮೂರ್ತಿಗೆ ಅವಕಾಶ ನೀಡಬೇಡಿ: ಅವ್ವಣ್ಣ ಮ್ಯಾಕೇರಿ ಆಗ್ರಹ

ಕಲಬುರಗಿ: ನಗರದ ಹೈಕೋರ್ಟ್ ಕ್ರಾಸ್‌ನಲ್ಲಿರುವ ದಿವಂಗತ ವಿಠ್ಠಲ ಹೇರೂರ ವೃತ್ತದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೂರ್ತಿ ಸ್ಥಾಪನೆಗೆ ಅವಕಾಶ ನೀಡಬಾರದು. ಬದಲಾಗಿ ವಿಠ್ಠಲ ಹೇರೂರ ಅವರ ಮೂರ್ತಿ ಸ್ಥಾಪನೆಗೆ ಜಿಲ್ಲಾಡಳಿತ ಸಹಕರಿಸಬೇಕು ಎಂದು ಸ್ವಾಭಿಮಾನಿ ವಿಠ್ಠಲ ಹೇರೂರ ಅಭಿಮಾನಿಗಳ ಸಂಘದ ಮುಖಂಡ ಅವ್ವಣ್ಣ ಮ್ಯಾಕೇರಿ ಆಗ್ರಹಿಸಿದರು.

ನಗರದ ಪತ್ರಿಕಾ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾಲುಮತ ಹಾಗೂ ಗಂಗಾಮತ ಸಮುದಾಯಗಳು ಸಹೋದರ ಸಮುದಾಯಗಳಾಗಿದ್ದು, ಕೆಲವರು ಅನಗತ್ಯ ಗೊಂದಲ ಸೃಷ್ಟಿಸಿ ಎರಡೂ ಸಮುದಾಯಗಳ ನಡುವಿನ ಸೌಹಾರ್ದ ಹದಗೆಡಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮುನ್ನೆಚ್ಚರಿಕೆ ವಹಿಸಿ ಯಾವುದೇ ರೀತಿಯ ಸಂಘರ್ಷಕ್ಕೆ ಅವಕಾಶ ನೀಡಬಾರದು ಎಂದು ಮನವಿ ಮಾಡಿದರು.

ವಿಠ್ಠಲ ಹೇರೂರ ಅವರು ಅಹಿಂದ ಹಾಗೂ ಶೋಷಿತ ವರ್ಗಗಳ ಧ್ವನಿಯಾಗಿ ರಾಜ್ಯಾದ್ಯಂತ ಸಮಾಜದಲ್ಲಿ ಜಾಗೃತಿ ಮೂಡಿಸಿದ ನಾಯಕರು ಎಂದು ಹೇಳಿದ ಅವರು, 2015ರ ಡಿಸೆಂಬರ್‌ನಲ್ಲಿ ಅವರ ಭಾವಚಿತ್ರ ಅಳವಡಿಸಿ ಹೈಕೋರ್ಟ್ ಕ್ರಾಸ್‌ನಲ್ಲಿ ವೃತ್ತ ನಿರ್ಮಿಸಲಾಗಿತ್ತು. ಅಂದಿನಿಂದ ಪ್ರತಿವರ್ಷ ಪುಣ್ಯಸ್ಮರಣೆ, ಜನ್ಮದಿನಾಚರಣೆ, ಬಡವರಿಗೆ ಪ್ರಸಾದ ವಿತರಣೆ, ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಗಿಡ ನೆಡುವಂತಹ ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದರು.

2023ರಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಕಲಬುರಗಿಗೆ ಭೇಟಿ ನೀಡಿದ್ದ ವೇಳೆ ಅವರ ಭಾವಚಿತ್ರವಿರುವ ಫಲಕವನ್ನು ವಿಠ್ಠಲ ಹೇರೂರ ವೃತ್ತದ ಸಮೀಪ ಅಳವಡಿಸಲಾಗಿತ್ತು. ಆಗ ಕಾರ್ಯಕ್ರಮ ಮುಗಿದ ಬಳಿಕ ಫಲಕ ತೆರವುಗೊಳಿಸುವುದಾಗಿ ಸಂಬಂಧಪಟ್ಟವರು ತಿಳಿಸಿದ್ದರು. ಆದರೆ ಸೆಪ್ಟೆಂಬರ್ 17ರಂದು ಕಲ್ಯಾಣ ಕರ್ನಾಟಕ ಉತ್ಸವದ ಸಂದರ್ಭದಲ್ಲಿ ರಾತ್ರೋರಾತ್ರಿ ಸಿದ್ದರಾಮಯ್ಯ ಅವರ ಬೃಹತ್ ಮೂರ್ತಿ ಸ್ಥಾಪಿಸಲಾಗಿದೆ ಎಂದು ಮ್ಯಾಕೇರಿ ಆರೋಪಿಸಿದರು.

ಮುಖಂಡ ಶರಣಪ್ಪ ತಳವಾರ ಮಾತನಾಡಿ, 2015ರಿಂದ ವಿಠ್ಠಲ ಹೇರೂರ ವೃತ್ತ ಅಸ್ತಿತ್ವದಲ್ಲಿದೆ. ಇದೀಗ ಯಾರೋ ಕಿಡಿಗೇಡಿಗಳು ಸಿದ್ದರಾಮಯ್ಯ ಅವರ ಮೂರ್ತಿಯನ್ನು ಅಳವಡಿಸಿರುವುದು ಖಂಡನೀಯ. ಇದರ ಹಿಂದೆ ಯಾರು ಇದ್ದಾರೆ ಎಂಬುದನ್ನು ತನಿಖೆ ಮೂಲಕ ಪತ್ತೆಹಚ್ಚಬೇಕು. ಇಂತಹ ಕೃತ್ಯದಿಂದ ಸಿದ್ದರಾಮಯ್ಯ ಅವರಿಗೂ ಕೆಟ್ಟ ಹೆಸರು ಬರುತ್ತಿದೆ ಎಂದು ಹೇಳಿದರು.

ಮುಖಂಡ ಲಚ್ಚಪ್ಪ ಜಮಾದಾರ ಮಾತನಾಡಿದರು.

ಸುದ್ದಿಗೋಷ್ಠಿಯಲ್ಲಿ ಪೂಜ್ಯ ರಾಜು ಗುರುಸ್ವಾಮಿ, ಅಪ್ಪಣಗೌಡ ಪಾಟೀಲ, ಬಸವರಾಜ ಹರವಾಳ, ಗುರುನಾಥ ಹೇರೂರ, ರವಿ ಡೊಂಗರಗಾoವ್, ಸುಭಾಷ ಯಳಸಂಗಿ, ಶಿವ ಧಣಿ ಉಪಸ್ಥಿತರಿದ್ದರು.

Tags

SiddaramaiahKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X