Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ದೌರ್ಜನ್ಯ ಸಹಿಸದೆ...

Kalaburagi | ದೌರ್ಜನ್ಯ ಸಹಿಸದೆ ಕಾನೂನಿನ ನೆರವು ಪಡೆದು ನ್ಯಾಯ ಪಡೆಯಿರಿ : ನ್ಯಾ.ಸುಮನ ಚಿತ್ತರಗಿ

ಮಾನಸಿಕ ಆರೋಗ್ಯ ದಿನ, ಅಂತರರಾಷ್ಟ್ರೀಯ ಬಾಲಕಿಯರ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ29 Oct 2026 6:09 PM IST
share
Kalaburagi | ದೌರ್ಜನ್ಯ ಸಹಿಸದೆ ಕಾನೂನಿನ ನೆರವು ಪಡೆದು ನ್ಯಾಯ ಪಡೆಯಿರಿ : ನ್ಯಾ.ಸುಮನ ಚಿತ್ತರಗಿ

ಕಲಬುರಗಿ : ಅಪ್ರಾಪ್ತ ಬಾಲಕಿಯರು ದೌರ್ಜನ್ಯವನ್ನು ಸಹಿಸಿಕೊಳ್ಳದೆ ಕಾನೂನಿನ ನೆರವು ಪಡೆದು ನ್ಯಾಯ ಪಡೆಯಬೇಕು. ಉತ್ತಮ ಶಿಕ್ಷಣ ಪಡೆದು ಉನ್ನತ ಗುರಿ ತಲುಪಬೇಕು ಎಂದು ಸಿಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶೆ ಹಾಗೂ ತಾಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿ ಕುಮಾರಿ ಸುಮನ ಚಿತ್ತರಗಿ ಕರೆ ನೀಡಿದರು.

ಆಳಂದ ಪಟ್ಟಣದ ಸರ್ಕಾರಿ ಕನ್ಯಾ ಪ್ರೌಢಶಾಲೆಯಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ, ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಪತ್ರಕರ್ತರ ಸಂಘದ ಆಶ್ರಯದಲ್ಲಿ ಆಯೋಜಿಸಿದ್ದ ಮಾನಸಿಕ ಆರೋಗ್ಯ ದಿನ, ಅಂತರರಾಷ್ಟ್ರೀಯ ಬಾಲಕಿಯರ ದಿನ ಹಾಗೂ ಸುರಕ್ಷಿತ ಬಾಲ್ಯ ಅಭಿಯಾನದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಮಹಿಳೆಯರು ಮತ್ತು ಬಾಲಕಿಯರ ಮೇಲಿನ ದೌರ್ಜನ್ಯ ತಡೆಗೆ ಪೋಕ್ಸೊ ಕಾಯ್ದೆ ಸೇರಿದಂತೆ ವಿವಿಧ ಕಾನೂನುಗಳಿವೆ. ಅವುಗಳ ಕುರಿತು ಅರಿವು ಹೊಂದಿರಬೇಕು. ಅಗತ್ಯವಿದ್ದಾಗ ಕಾನೂನಿನ ನೆರವು ಪಡೆದುಕೊಳ್ಳಬೇಕು ಎಂದು ವಿದ್ಯಾರ್ಥಿನಿಯರಿಗೆ ಕಿವಿಮಾತು ಹೇಳಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಸ್ಥಳೀಯ ಸಾರ್ವಜನಿಕ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ಉಮಾಕಾಂತ ರಾಜಗಿರಿ ಮಾತನಾಡಿ, ಆಸ್ಪತ್ರೆಯಲ್ಲಿ ಪ್ರತಿ ತಿಂಗಳು ಮಂಗಳವಾರದಂದು ರಜಾ ದಿನಗಳನ್ನು ಹೊರತುಪಡಿಸಿ ಮಾನಸಿಕ ಆರೋಗ್ಯ ಸಮಸ್ಯೆಗಳಿಂದ ಬಳಲುವವರಿಗೆ ಚಿಕಿತ್ಸೆ, ಔಷಧಿ, ಸಲಹೆ ಹಾಗೂ ಮಾರ್ಗದರ್ಶನ ನೀಡಲಾಗುತ್ತದೆ. ಸಾರ್ವಜನಿಕರು ಈ ಸೌಲಭ್ಯವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.

ಮಾನಸಿಕ ಆರೋಗ್ಯ ಸಮಸ್ಯೆಗಳಿಂದ ಬಳಲುವವರ ಸಂಖ್ಯೆ ಹೆಚ್ಚುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದ ಅವರು, ಇಂತಹ ಸಮಸ್ಯೆಗಳಿಂದ ದೂರವಿರಲು ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲೆಯ ಮುಖ್ಯಗುರು ಶ್ರೀಮಂತ ಹತ್ತರಕಿ ಮಾತನಾಡಿದರು. ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಪ್ರವೀಣ ಕಮ್ಮಾರ, ನ್ಯಾಯವಾದಿಗಳ ಸಂಘದ ಅಧ್ಯಕ್ಷ ಕಮಲಾಕರ ವಿ. ರಾಠೋಡ, ಸರ್ಕಾರಿ ವಕೀಲ ಇಸ್ಮಾಯಿಲ್ ಪಟೇಲ್ ಹಾಗೂ ಜ್ಯೋತಿ ವಿ. ಸೇರಿದಂತೆ ಮತ್ತಿತರರು ವೇದಿಕೆಯಲ್ಲಿದ್ದರು.

ನ್ಯಾಯವಾದಿ ಎಂ.ವಿ. ಏಕಬೋಟೆ ಅವರು ಮಾನಸಿಕ ಆರೋಗ್ಯ ದಿನ ಹಾಗೂ ಅಂತರರಾಷ್ಟ್ರೀಯ ಬಾಲಕಿಯರ ದಿನದ ಮಹತ್ವದ ಕುರಿತು ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ ಪತ್ರಕರ್ತರಾದ ಮಹೇಶ್ ಸಾಖರೆ ಹಾಗೂ ಅವಿನಾಶ್ ದೇವನೂರ, ಬಸವರಾಜ ಪಾಟೀಲ, ಮಲ್ಲಿನಾಥ ಖಜೂರಿ, ಐಶರಣಮ್ಮ ಪಟ್ಟಣಕರ್, ಶರಣಪ್ಪ ಪೂಜಾರಿ ಸೇರಿದಂತೆ ವಕೀಲರು, ಶಾಲಾ ಸಿಬ್ಬಂದಿ ಹಾಗೂ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

ಶಾಲೆಯ ಸಹಶಿಕ್ಷಕ ದಶರಥ ಕಠಾರೆ ನಿರೂಪಿಸಿದರು. ಶಿಕ್ಷಕ ಮಹಾಂತಪ್ಪ ಭೂಪರೆಡ್ಡಿ ವಂದಿಸಿದರು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X