Kalaburagi | ಸೆ.19 ರಂದು ಬಿ.ವಿ.ಕಾರಂತರ ಜನ್ಮದಿನ ಅಂಗವಾಗಿ ಸಾಕ್ಷ್ಯಚಿತ್ರ ವೀಕ್ಷಣೆ, ಸಂವಾದ ಕಾರ್ಯಕ್ರಮ

ಕಲಬುರಗಿ : ಕರ್ನಾಟಕ ರಂಗಾಯಣ ಕಲಬುರಗಿ ವತಿಯಿಂದ ರಂಗಭೀಷ್ಮ, ಪದ್ಮಶ್ರೀ ಬಿ.ವಿ. ಕಾರಂತರ ಜನ್ಮದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳಿಗಾಗಿ ಸಾಕ್ಷ್ಯಚಿತ್ರ ವೀಕ್ಷಣೆ ಹಾಗೂ ಸಂವಾದ ಕಾರ್ಯಕ್ರಮವನ್ನು ಸೆಪ್ಟೆಂಬರ್ 19ರಂದು ಬೆಳಿಗ್ಗೆ 11.30 ಗಂಟೆಗೆ ರಂಗಾಯಣ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಕಾರ್ಯಕ್ರಮವನ್ನು ಕಲಬುರಗಿ ವಲಯದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ಬಸವರಾಜ ಹೂಗಾರ ಉದ್ಘಾಟಿಸಲಿದ್ದಾರೆ. ಕರ್ನಾಟಕ ರಂಗಾಯಣದ ನಿರ್ದೇಶಕಿ ಡಾ. ಸ್ಮಜಾತಾ ಜಂಗಮಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ.
ಖ್ಯಾತ ನಾಟಕಕಾರ ಮಹಾಚಿತೇಶ್ ನವಲಕಲ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಿದ್ದಾರೆ.
ಬಿ.ವಿ. ಕಾರಂತರ ರಂಗಭೂಮಿ, ಸಂಗೀತ ಮತ್ತು ಕನ್ನಡ ನಾಟಕ ಕ್ಷೇತ್ರಕ್ಕೆ ನೀಡಿದ ಅಪಾರ ಕೊಡುಗೆಯನ್ನು ಪರಿಚಯಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಕರ್ನಾಟಕ ರಂಗಾಯಣ ಪ್ರಕಟಣೆಯಲ್ಲಿ ತಿಳಿಸಿದೆ.
Next Story




