Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಬಿಜೆಪಿಯ ಆತ್ಮವಂಚನೆಯ ಪ್ರತಿಭಟನೆಗಳು...

ಬಿಜೆಪಿಯ ಆತ್ಮವಂಚನೆಯ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಪ್ರಿಯಾಂಕ್ ಖರ್ಗೆ

ವಾರ್ತಾಭಾರತಿವಾರ್ತಾಭಾರತಿ1 Oct 2025 11:10 AM IST
share
ಬಿಜೆಪಿಯ ಆತ್ಮವಂಚನೆಯ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಪ್ರಿಯಾಂಕ್ ಖರ್ಗೆ

ಕಲಬುರಗಿ: ಅಧಿಕಾರದಲ್ಲಿದ್ದಾಗ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ ನಡೆಸುವುದು ಹಾಸ್ಯಸ್ಪದವಾಗಿದೆ. ಬಿಜೆಪಿಯ ಈ ಆತ್ಮವಂಚನೆಯ ಪ್ರತಿಭಟನೆಗಳು ಅಗತ್ಯವಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹರಿಹಾಯ್ದಿದ್ದಾರೆ.

ತಮ್ಮ " ಎಕ್ಸ್ " ಖಾತೆಯಲ್ಲಿ ಈ ಬಗ್ಗೆ ಅಂಕಿ ಅಂಶಗಳ ಸಮೇತ ಬರೆದುಕೊಂಡಿರುವ ಅವರು, ಬಿಜೆಪಿ ಆಡಳಿತವಧಿಯಲ್ಲಿ ಕಲಬುರಗಿ ಜಿಲ್ಲೆಗೆ ಒಂದು ಮಂತ್ರಿ ಸ್ಥಾನವನ್ನು ಕೊಟ್ಟಿರಲಿಲ್ಲ, ಆಗ ಇದ್ದಂತಹ ಉಸ್ತುವಾರಿ ಮಂತ್ರಿಗಳು ಜಿಲ್ಲೆಯ ಕಡೆ ತಲೆ ಹಾಕುತ್ತಿರಲಿಲ್ಲ, ಇಂತಹ ಬಿಜೆಪಿಗೆ ಇಂದು ನಮ್ಮ ಕಡೆ ಬೆರಳು ತೋರಿಸುವುದಕ್ಕೆ ಕನಿಷ್ಠ ಮಟ್ಟದ ನೈತಿಕತೆಯೂ ಇಲ್ಲ ಎಂದು ಟೀಕಿಸಿದ್ದಾರೆ.

ಕಲಬುರಗಿಯ ಜನರ ಸಂಕಷ್ಟಕ್ಕೆ ಬಿಜೆಪಿ ಸರ್ಕಾರ ಹೇಗೆ ನಡೆದುಕೊಂಡಿತ್ತು ಎಂಬುದರ ಬಗ್ಗೆ ಅಂಕಿ ಅಂಶಗಳೇ ಮಾತನಾಡುತ್ತವೆ. ಜಿಲ್ಲೆಯ ರೈತರಿಗೆ ಯಾವ ಸರ್ಕಾರ ಎಷ್ಟು ಅನುಕೂಲ ಮಾಡಿಕೊಟ್ಟಿದೆ ಎನ್ನುವುದನ್ನು ನಾವು ಹೇಳುವುದು ಬೇಕಿಲ್ಲ, ಅಂಕಿ ಅಂಶಗಳೇ ಹೇಳುತ್ತವೆ. ಬಿಜೆಪಿ ಸರ್ಕಾರದ ಅವಧಿಯ ನಾಲ್ಕು ವರ್ಷಗಳಲ್ಲಿ ನೆರೆ, ಬರದ ವಿಷಯದಲ್ಲಿ ಬಿಜೆಪಿ ಪರಿಹಾರ ಒದಗಿಸಿಕೊಟ್ಟಿದ್ದು ನಗಣ್ಯ.

ಬಿಜೆಪಿ ಅವಧಿಯಲ್ಲಿ ರೈತರಿಗೆ ದೊರಕಿದ ಬೆಳೆ ವಿಮೆ ಪರಿಹಾರ

- 2019 -20ನೇ ಸಾಲಿನಲ್ಲಿ 38,248 ರೈತರಿಗೆ ₹16.65 ಕೋಟಿ ಪರಿಹಾರ ಮಾತ್ರ.

- 2020 - 21ನೇ ಸಾಲಿನಲ್ಲಿ 37,145 ರೈತರಿಗೆ ಕೇವಲ ₹22.97 ಕೋಟಿ ಪರಿಹಾರ ಮಾತ್ರ.

- 2021 - 22ನೇ ಸಾಲಿನಲ್ಲಿ 66,234 ರೈತರಿಗೆ ₹57.95 ಕೋಟಿ ಪರಿಹಾರ ಮಾತ್ರ.

- 2022 - 23ನೇ ಸಾಲಿನಲ್ಲಿ 1,88,600 ರೈತರಿಗೆ ಒದಗಿಸಿದ್ದು ₹108.6 ಕೋಟಿ ಪರಿಹಾರ ಮಾತ್ರ.

- ನಾಲ್ಕು ವರ್ಷದಲ್ಲಿ ಒಟ್ಟು ₹206.17 ಕೋಟಿ ಪರಿಹಾರ ಮಾತ್ರ ನೀಡಲಾಗಿದೆ.

ನಮ್ಮ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಎರಡೇ ವರ್ಷದಲ್ಲಿ ಅತಿ ಹೆಚ್ಚು ಬೆಳೆ ವಿಮೆ ಪರಿಹಾರ ಒದಗಿಸುವಲ್ಲಿ ಯಶಸ್ವಿಯಾಗಿದೆ.

- 2023 - 24ನೇ ಸಾಲಿನಲ್ಲಿ 1,59,622 ರೈತರಿಗೆ ₹189.40 ಕೋಟಿ ಪರಿಹಾರ ನೀಡಿದ್ದೇವೆ.

- 2024-25 ನೇ ಸಾಲಿನಲ್ಲಿ 2,03,746 ರೈತರಿಗೆ ₹656.63 ಕೋಟಿ ಪರಿಹಾರ ಒದಗಿಸಿದ್ದೇವೆ.

- ಒಟ್ಟು 3,63,368 ರೈತರಿಗೆ ₹846.03 ಕೋಟಿ ಪರಿಹಾರವನ್ನು ಎರಡೇ ವರ್ಷದಲ್ಲಿ ಒದಗಿಸಿದ್ದೇವೆ.

- ತೊಗರಿಯ ನೆಟೆ ರೋಗದ ಬಗ್ಗೆ ಬಿಜೆಪಿ ತಲೆ ಕೆಡಿಸಿಕೊಂಡಿರಲೇ ಇಲ್ಲ, ನಮ್ಮ ಸರ್ಕಾರವು 2023-24ನೇ ಸಾಲಿನಲ್ಲಿ 1,78,354 ರೈತರಿಗೆ ₹181.86 ಕೋಟಿ ನೆಟೆ ರೋಗದ ಪರಿಹಾರ ಒದಗಿಸಿದೆ. ಹಾಗೆಯೇ, ಹೆಚ್ಚು ಇನ್ ಪುಟ್ ಸಬ್ಸಿಡಿಯನ್ನು ಒದಗಿಸಿಕೊಡುವ ಮೂಲಕ ರೈತರ ನೆರವಿಗೆ ನಿಂತಿದೆ ನಮ್ಮ ಸರ್ಕಾರ, ಎರಡು ವರ್ಷಗಳಲ್ಲಿ 3,49,555 ರೈತರಿಗೆ ₹389.14 ಕೋಟಿ ಸಬ್ಸಿಡಿ ಒದಗಿಸಲಾಗಿದೆ. ಎರಡೇ ವರ್ಷದ ಅವಧಿಯಲ್ಲಿ ಒಟ್ಟು 8,91,277 ರೈತರು ಫಲಾನುಭವಿಗಳಾಗಿದ್ದಾರೆ, ₹1,417.02 ಕೋಟಿ ಹಣ ರೈತರ ಕೈ ಸೇರಿದೆ. ಬಿಜೆಪಿ ಸರ್ಕಾರ ಕಲಬುರಗಿ ರೈತರಿಗೆ ನಾಲ್ಕು ವರ್ಷಗಳಲ್ಲಿ ಕೊಟ್ಟಿರುವ ಮೊತ್ತದ ಏಳು ಪಟ್ಟು ಹೆಚ್ಚು ಹಣವನ್ನು ನಮ್ಮ ಸರ್ಕಾರ ಎರಡೇ ವರ್ಷದಲ್ಲಿ ಒದಗಿಸಿದೆ ಎಂದು ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ.

ಕಲಬುರಗಿಯಲ್ಲಿ ಈಗಾಗಲೇ ನೆರೆ ಪರಿಸ್ಥಿತಿ ಇದೆ, ಬಿಜೆಪಿಯವರ ನಕಲಿ ಮೊಸಳೆ ಕಣ್ಣೀರಿನಿಂದ ಪ್ರವಾಹ ಹೆಚ್ಚಾಗಬಹುದು, ಹಾಗಾಗಿ ಅವರ ನಕಲಿ ಕಣ್ಣೀರು, ಆತ್ಮವಂಚಕತನದ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X