Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಎಐ ಮೇಲೆ ಅತಿಯಾದ ಅವಲಂಬನೆ...

Kalaburagi | ಎಐ ಮೇಲೆ ಅತಿಯಾದ ಅವಲಂಬನೆ ಬೇಡ: ಪ್ರೊ.ಬಟ್ಟುಸತ್ಯನಾರಾಯಣ

ವಾರ್ತಾಭಾರತಿವಾರ್ತಾಭಾರತಿ27 July 2026 3:44 PM IST
share
Kalaburagi | ಎಐ ಮೇಲೆ ಅತಿಯಾದ ಅವಲಂಬನೆ ಬೇಡ: ಪ್ರೊ.ಬಟ್ಟುಸತ್ಯನಾರಾಯಣ
ಹೊಸ ಬೋಧನಾ ಸಿಬ್ಬಂದಿಗೆ ಗ್ರಂಥಾಲಯ ಇ-ಸಂಪನ್ಮೂಲಗಳ ಬಳಕೆ ಕುರಿತು ಜಾಗೃತಿ ಕಾರ್ಯಕ್ರಮ

ಕಲಬುರಗಿ: ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ (ಸಿಯುಕೆ) ಕ್ಯಾಂಪಸ್‌ನಲ್ಲಿ ಹೊಸದಾಗಿ ಸೇರ್ಪಡೆಗೊಂಡ ಬೋಧನಾ ಸಿಬ್ಬಂದಿಗಾಗಿ ಗ್ರಂಥಾಲಯದ ಡಾ. ಎಸ್.ಆರ್. ರಂಗನಾಥನ್ ಸೆಮಿನಾರ್ ಹಾಲ್‌ನಲ್ಲಿ “ಗ್ರಂಥಾಲಯ ಇ-ಸಂಪನ್ಮೂಲಗಳ ಬಳಕೆ ಕುರಿತು ಜಾಗೃತಿ ಕಾರ್ಯಕ್ರಮ” ಆಯೋಜಿಸಲಾಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಿಯುಕೆ ಕುಲಪತಿ ಪ್ರೊ. ಬಟ್ಟು ಸತ್ಯನಾರಾಯಣ, ಶಿಕ್ಷಕರು ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವನ್ನು ಜವಾಬ್ದಾರಿಯುತವಾಗಿ ಬಳಸಬೇಕು. ಆದರೆ ಶೈಕ್ಷಣಿಕ ಬರವಣಿಗೆ ಮತ್ತು ಸಂಶೋಧನೆಗಾಗಿ ಎಐ ಮೇಲೆ ಅತಿಯಾದ ಅವಲಂಬನೆ ಹೊಂದಬಾರದು ಎಂದು ಸಲಹೆ ನೀಡಿದರು.

ಗ್ರಂಥಾಲಯ, ಓದುವಿಕೆ ಹಾಗೂ ಮೂಲ ಸಂಶೋಧನೆಯ ಮೂಲಕ ಜ್ಞಾನವನ್ನು ವೃದ್ಧಿಸಿಕೊಳ್ಳಬೇಕು. ಎಐ ಮೇಲಿನ ಅತಿಯಾದ ಅವಲಂಬನೆಯು ಸ್ವತಂತ್ರ ಚಿಂತನೆ, ವಿಶ್ಲೇಷಣಾತ್ಮಕ ಸಾಮರ್ಥ್ಯ ಮತ್ತು ಸೃಜನಶೀಲತೆಯನ್ನು ಕುಗ್ಗಿಸುವ ಸಾಧ್ಯತೆ ಇದೆ. ಶಿಕ್ಷಕರ ಜ್ಞಾನ, ಸೃಜನಶೀಲತೆ ಹಾಗೂ ಶೈಕ್ಷಣಿಕ ಪ್ರಾಮಾಣಿಕತೆಯೇ ಗುಣಮಟ್ಟದ ಶಿಕ್ಷಣದ ಅಡಿಪಾಯವಾಗಿದೆ ಎಂದು ಹೇಳಿದರು.

ಡಿಜಿಟಲ್ ಯುಗದಲ್ಲಿ ಗುಣಮಟ್ಟದ ಶೈಕ್ಷಣಿಕ ಸಂಪನ್ಮೂಲಗಳು ಸುಲಭವಾಗಿ ಲಭ್ಯವಾಗುತ್ತಿದ್ದು, ಅವುಗಳನ್ನು ಬೋಧನೆ, ಸಂಶೋಧನೆ ಮತ್ತು ನಾವೀನ್ಯತೆಗೆ ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು. ಸಂಶೋಧನೆಯಲ್ಲಿ ಕೃತಿಚೌರ್ಯವನ್ನು ಸಂಪೂರ್ಣವಾಗಿ ತಪ್ಪಿಸಿ, ಸ್ವಂತ ಸಂಶೋಧನಾ ಬರವಣಿಗೆಯ ಶೈಲಿಯನ್ನು ಬೆಳೆಸಿಕೊಳ್ಳುವಂತೆ ಅವರು ಕರೆ ನೀಡಿದರು.

ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ ವಾಣಿಜ್ಯ ವಿಭಾಗದ ಮುಖ್ಯಸ್ಥ ಹಾಗೂ ವ್ಯವಹಾರ ಅಧ್ಯಯನ ನಿಕಾಯದ ಡೀನ್ ಪ್ರೊ. ಪಾಂಡುರಂಗ ವಿ., ಡಿಜಿಟಲ್ ಸಂಪನ್ಮೂಲಗಳಿಂದ ಸಂಶೋಧನಾ ಕಾರ್ಯ ಹಿಂದೆಂದಿಗಿಂತ ಸುಲಭವಾಗಿದೆ ಎಂದು ಹೇಳಿದರು.

ವಿಶ್ವವಿದ್ಯಾಲಯದ ಗ್ರಂಥಪಾಲಕ ಡಾ. ಪಿ.ಎಸ್. ಕಟ್ಟಿಮನಿ ಸ್ವಾಗತಿಸಿ, ಕೇಂದ್ರ ಗ್ರಂಥಾಲಯದ ಇ-ಜರ್ನಲ್‌ಗಳು, ಆನ್‌ಲೈನ್ ಡೇಟಾಬೇಸ್‌ಗಳು, ಕೃತಿಚೌರ್ಯ ಪತ್ತೆ ತಂತ್ರಾಂಶ, ವ್ಯಾಕರಣ ಪರಿಷ್ಕರಣೆ ತಂತ್ರಾಂಶ ಸೇರಿದಂತೆ ವಿವಿಧ ಡಿಜಿಟಲ್ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು.

ಕಾರ್ಯಾಗಾರದ ಅಂಗವಾಗಿ ಗ್ರಂಥಾಲಯ ಇ-ಸಂಪನ್ಮೂಲಗಳು, ONOS, ಕೃತಿಚೌರ್ಯ ಪತ್ತೆ ಪರಿಕರಗಳು ಹಾಗೂ ವಿವಿಧ ಡಿಜಿಟಲ್ ಸಂಶೋಧನಾ ಸೇವೆಗಳ ಪರಿಣಾಮಕಾರಿ ಬಳಕೆಯ ಕುರಿತು ತಾಂತ್ರಿಕ ಅವಧಿಗಳನ್ನು ನಡೆಸಲಾಯಿತು.

ಕಾರ್ಯಕ್ರಮದಲ್ಲಿ ವಿಶ್ವವಿದ್ಯಾಲಯದ ವಿವಿಧ ವಿಭಾಗಗಳಿಂದ ಹೊಸದಾಗಿ ಸೇರ್ಪಡೆಗೊಂಡ ಅಧ್ಯಾಪಕರು ಭಾಗವಹಿಸಿದ್ದರು. ಗ್ರಂಥಾಲಯದ ಅಧಿಕಾರಿಗಳಾದ ಡಾ. ಸತೀಶ್ ವಿ. ತೋಟರ್, ಡಾ. ಜಿ. ಜೆ. ಪಿ. ದೀಕ್ಷಿತ್ ಹಾಗೂ ಸಿಬ್ಬಂದಿಗಳಾದ ರಾಜ್‌ಕುಮಾರ್ ಕಲ್ಯಾಣಿ, ರಾಜೇಶ್ ಸಿ. ದಾಸ್, ಬಸವರಾಜ್ ಯಾದವಾಡ, ನಿಂಗಣ್ಣ ಎಂ. ಜಿ., ಪ್ರಕಾಶ ಎಸ್. ಎನ್., ಸಾಗರ್ ಕಬಾಡೆ, ಸತೀಶ್ ಕುಮಾರ್ ಮತ್ತು ಶಿವಕುಮಾರ್ ಜಿ. ಉಪಸ್ಥಿತರಿದ್ದರು.

Tags

Prof.BattusatyanarayanaAIKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X