ಕಲಬುರಗಿ: ರಾಜ್ಯ ಮಟ್ಟದ ರಾಜ್ಯೋತ್ಸವದ ಪ್ರಶಸ್ತಿಗೆ ಡಾ. ಖಾಜಾವಲಿ ಈಚನಾಳ ಆಯ್ಕೆ

ಕಲಬುರಗಿ : ಕಳೆದ ಎರಡುವರೆ ದಶಕಗಳಿಂದಲೂ ಶಿಕ್ಷಣ ಕ್ಷೇತ್ರದಲ್ಲಿ ಅಧ್ಯಾಪನದಲ್ಲಿ ತೊಡಗಿಸಿಕೊಂಡಿರುವ ಬಂಡಾಯ ಸಾಹಿತಿ, ಸಂಶೋಧಕ, ರಂಗಭೂಮಿಯ ನಟ, ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿರುವ ಜೇವರ್ಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ, ಗುಲ್ಬರ್ಗಾ ವಿಶ್ವ ವಿದ್ಯಾಲಯದ ಪದವಿ ಕಾಲೇಜುಗಳ ಕನ್ನಡ ಅಧ್ಯಾಪಕರ ಸಂಘದ ಅಧ್ಯಕ್ಷ ಡಾ. ಖಾಜಾವಲಿ ಈಚನಾಳ ಅವರನ್ನು ಬೆಂಗಳೂರಿನ ಕುಂಭಮೇಳ ಸಾಂಸ್ಕೃತಿಕ ಅಕಾಡೆಮಿಯಿಂದ ಕೊಡಮಾಡುವ ಪ್ರಸಕ್ತ ಸಾಲಿನ ರಾಜ್ಯ ಮಟ್ಟದ ರಾಜ್ಯೋತ್ಸವದ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಅಕಾಡೆಮಿಯ ಪ್ರಧಾನ ಕಾರ್ಯದರ್ಶಿ ಶಿವರಾಜ ತಿಳಿಸಿದ್ದಾರೆ.
ನ.19 ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ನಯನ ರಂಗಮಂದಿರದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರನ್ನು ಗೌರವಿಸಲಾಗುವುದು. ವಿವಿಧ ರಂಗದ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿರುತ್ತಾರೆಂದು ಅಕಾಡೆಮಿಯ ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





