Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಎಸ್ಐಆರ್ ಪರಿಷ್ಕರಣೆ ಕರಡು...

Kalaburagi | ಎಸ್ಐಆರ್ ಪರಿಷ್ಕರಣೆ ಕರಡು ಮತದಾರರ ಪಟ್ಟಿ ಪ್ರಕಟ : ಗುಲ್ಬರ್ಗಾ ಗ್ರಾಮೀಣದಲ್ಲಿ 2.21 ಲಕ್ಷ ಮತದಾರರು: ಸಾಹಿತ್ಯಾ ಆಲದಕಟ್ಟಿ

ವಾರ್ತಾಭಾರತಿವಾರ್ತಾಭಾರತಿ24 Aug 2026 9:16 PM IST
share
Kalaburagi | ಎಸ್ಐಆರ್ ಪರಿಷ್ಕರಣೆ ಕರಡು ಮತದಾರರ ಪಟ್ಟಿ ಪ್ರಕಟ : ಗುಲ್ಬರ್ಗಾ ಗ್ರಾಮೀಣದಲ್ಲಿ 2.21 ಲಕ್ಷ ಮತದಾರರು: ಸಾಹಿತ್ಯಾ ಆಲದಕಟ್ಟಿ

ಕಲಬುರಗಿ: ವಿಶೇಷ ಸಂಕ್ಷಿಪ್ತ ಮತದಾರರ ಪರಿಷ್ಕರಣೆ–2026ರ (SIR) ಕರಡು ಮತದಾರರ ಪಟ್ಟಿಯನ್ನು ಸೋಮವಾರ ಪ್ರಕಟಿಸಲಾಗಿದ್ದು, ಗುಲ್ಬರ್ಗಾ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 2,21,513 ಮತದಾರರು ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ ಎಂದು ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಹಾಗೂ ಕಲಬುರಗಿ ಉಪ ವಿಭಾಗದ ಹಿರಿಯ ಸಹಾಯಕ ಆಯುಕ್ತೆ ಸಾಹಿತ್ಯಾ ಆಲದಕಟ್ಟಿ ತಿಳಿಸಿದ್ದಾರೆ.

ಕ್ಷೇತ್ರದಲ್ಲಿ ಎಸ್‌ಐಆರ್‌ ಪ್ರಕ್ರಿಯೆಗೂ ಮುನ್ನ 2,74,878 ಮತದಾರರಿದ್ದರು. ಪರಿಷ್ಕರಣೆ ಬಳಿಕ ಪ್ರಕಟವಾದ ಕರಡು ಪಟ್ಟಿಯಲ್ಲಿ 1,14,753 ಪುರುಷರು, 1,06,739 ಮಹಿಳೆಯರು ಹಾಗೂ 21 ಇತರೆ ಮತದಾರರು ಸೇರಿದಂತೆ ಒಟ್ಟು 2,21,513 ಮತದಾರರು ನೋಂದಾಯಿತರಾಗಿದ್ದಾರೆ. ಇವರಲ್ಲಿ 1,595 ಯುವ ಮತದಾರರು, 2,069 ಹಿರಿಯ ನಾಗರಿಕರು ಹಾಗೂ 2,930 ವಿಶೇಷಚೇತನ ಮತದಾರರು ಇದ್ದಾರೆ. ಪ್ರತಿ 1,000 ಪುರುಷ ಮತದಾರರಿಗೆ 930 ಮಹಿಳಾ ಮತದಾರರಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

ಎಸ್‌ಐಆರ್‌ ಪ್ರಕ್ರಿಯೆಯಲ್ಲಿ 53,365 ಮತದಾರರನ್ನು ಎಎಸ್‌ಡಿಡಿ ವರ್ಗದಲ್ಲಿ ಗುರುತಿಸಲಾಗಿದೆ. ಕರಡು ಮತದಾರರ ಪಟ್ಟಿಯನ್ನು ಕ್ಷೇತ್ರ ವ್ಯಾಪ್ತಿಯ ತಹಶೀಲ್ದಾರ್‌ ಕಚೇರಿಗಳು, ಸ್ಥಳೀಯ ಸಂಸ್ಥೆಗಳ ಕಚೇರಿಗಳು ಹಾಗೂ ಮತಗಟ್ಟೆ ಅಧಿಕಾರಿಗಳ ಕಚೇರಿಗಳಲ್ಲಿ ಸಾರ್ವಜನಿಕರ ಪರಿಶೀಲನೆಗಾಗಿ ಪ್ರಕಟಿಸಲಾಗಿದೆ. ಅಲ್ಲದೆ, ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿಯೂ ಪಟ್ಟಿ ಲಭ್ಯವಿದೆ.

ನೋ-ಮ್ಯಾಪಿಂಗ್ ಹಾಗೂ ಅಸಂಗತತೆ ಹೊಂದಿರುವ 10,894 ಮತದಾರರಿಗೆ ಬಿಎಲ್‌ಒಗಳ ಮೂಲಕ ನೋಟಿಸ್ ನೀಡಿ ವಿಚಾರಣೆ ನಡೆಸಲಾಗುವುದು. ಸಾರ್ವಜನಿಕರ ಅನುಕೂಲಕ್ಕಾಗಿ ಆಯಾ ಮತಗಟ್ಟೆ ವ್ಯಾಪ್ತಿಯಲ್ಲಿಯೇ ವಿಚಾರಣೆ ನಡೆಸಲು ಹೆಚ್ಚುವರಿ ಎಇಆರ್‌ಒಗಳನ್ನು ನಿಯೋಜಿಸಲು ಶಿಫಾರಸು ಮಾಡಲಾಗಿದೆ ಎಂದು ಸಾಹಿತ್ಯಾ ಆಲದಕಟ್ಟಿ ತಿಳಿಸಿದರು.

ನೋಟಿಸ್ ಹಾಗೂ ಹಕ್ಕು–ಆಕ್ಷೇಪಣೆಗಳ ವಿಚಾರಣೆ ಪ್ರಕ್ರಿಯೆಯನ್ನು ಅಕ್ಟೋಬರ್ 22ರೊಳಗೆ ಪೂರ್ಣಗೊಳಿಸಲಾಗುವುದು. ಬಳಿಕ ಅಕ್ಟೋಬರ್ 27ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ ಎಂದು ಅವರು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಕಲಬುರಗಿ ತಹಶೀಲ್ದಾರ್ ಕೆ. ಆನಂದಶೀಲ, ಕಮಲಾಪುರ ತಹಶೀಲ್ದಾರ್ ಮೊಹಮ್ಮದ್ ಮೋಸಿನ್ ಹಾಗೂ ಶಹಾಬಾದ್ ತಹಶೀಲ್ದಾರ್ ನೀಲಪ್ರಭಾ ಉಪಸ್ಥಿತರಿದ್ದರು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X