Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಜಿಲ್ಲಾ 23ನೇ ಕನ್ನಡ...

Kalaburagi | ಜಿಲ್ಲಾ 23ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಡಾ.ನಾಗೇಂದ್ರ ಮಸೂತಿ ಆಯ್ಕೆ

ವಾರ್ತಾಭಾರತಿವಾರ್ತಾಭಾರತಿ15 Oct 2026 5:52 PM IST
share
Kalaburagi | ಜಿಲ್ಲಾ 23ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಡಾ.ನಾಗೇಂದ್ರ ಮಸೂತಿ ಆಯ್ಕೆ

ಕಲಬುರಗಿ: ಅಕ್ಟೋಬರ್ ಮಾಸಾಂತ್ಯದಲ್ಲಿ ನಗರದಲ್ಲಿ ಆಯೋಜಿಸಲು ನಿರ್ಧರಿಸಿರುವ ಎರಡು ದಿನಗಳ ಕಲಬುರಗಿ ಜಿಲ್ಲಾ 23ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಸಾಹಿತಿ ಹಾಗೂ ಕನ್ನಡ ವಿದ್ವಾಂಸ ಡಾ. ನಾಗೇಂದ್ರ ಮಸೂತಿ ಆಯ್ಕೆಯಾಗಿದ್ದಾರೆ ಎಂದು ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿದ ತೇಗಲತಿಪ್ಪಿ ಅವರು, ಕನ್ನಡ ಸಾಹಿತ್ಯ ಸಂಶೋಧನೆ, ವಿಮರ್ಶೆ, ಭಾಷಾವಿಜ್ಞಾನ, ಗ್ರಂಥ ಸಂಪಾದನೆ, ಆಧುನಿಕ ವಚನ ಹಾಗೂ ಆಧ್ಯಾತ್ಮಿಕ ಕ್ಷೇತ್ರಗಳಲ್ಲಿ ತಮ್ಮದೇ ಆದ ಕೊಡುಗೆ ನೀಡಿರುವ ಡಾ. ನಾಗೇಂದ್ರ ಮಸೂತಿ ಅವರ ಅಧ್ಯಕ್ಷತೆಯಲ್ಲಿ ಎರಡು ದಿನಗಳ ಸಾಹಿತ್ಯ ಸಮ್ಮೇಳನ ನಡೆಯಲಿದೆ ಎಂದರು.

ಡಾ. ನಾಗೇಂದ್ರ ಮಸೂತಿ ಅವರು ಪ್ರಾಥಮಿಕ ಶಾಲಾ ಶಿಕ್ಷಕರಾಗಿ, ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸಿದ್ದು, ನಂತರ ಉನ್ನತ ಶಿಕ್ಷಣ ಪಡೆದು ಕನ್ನಡ ಪ್ರಾಧ್ಯಾಪಕರಾಗಿ ಹಾಗೂ ಪ್ರಾಂಶುಪಾಲರಾಗಿ ಪ್ರತಿಷ್ಠಿತ ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಿದ್ದಾರೆ.

‘ಮುತ್ತಿನ ಮಳೆ’, ‘ಕಿರುಗೆಜ್ಜೆ’, ‘ಸಓನೆಮಳೆ’, ‘ಕಿರುಭಾಮಿನಿ’, ‘ಶ್ರೀ ಶಾಂತವೀರ ಶಿವಾಚಾರ್ಯರ ದರ್ಶನಂ’, ‘ಕರಿಬಸವೇಶ್ವರ ಶಿವಾಚಾರ್ಯರ ಚರಿತೆ’, ‘ಉರಿವ ಕೆಂಡವ ಹೊತ್ತು’, ‘ಬೂದಿಗರ್ಭದ ಕೆಂಡ’, ‘ಕೆಂಡ ಮಲ್ಲಿಗೆ’, ‘ಬಯಲ ಬೆಳಗು’, ‘ಶಬ್ದ ಚಿತ್ರ’, ‘ಒಡಲ ನುಡಿ’, ‘ನೀ ಬೆರೆಸಿದ ಬೇಧ’, ‘ನುಡಿ ಬೆಳಗು’ ಹಾಗೂ ‘ಸಿದ್ಧಾಂತ ಶಿಖಾಮಣಿ’ ಸೇರಿದಂತೆ ಅನೇಕ ಮೌಲಿಕ ಕೃತಿಗಳನ್ನು ರಚಿಸಿದ್ದಾರೆ.

ಇವರ ಸಾಹಿತ್ಯಿಕ ಸಾಧನೆಗೆ ಡಿವಿಜಿ ಪ್ರಶಸ್ತಿ, ರಾಷ್ಟ್ರಕವಿ ಕುವೆಂಪು ಪ್ರಶಸ್ತಿ, ಮಹಾಶರಣೆ ಮಹಾದೇವಿಯಕ್ಕ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ರತ್ನ ದೇವನಾಂಪ್ರಿಯ ಪ್ರಶಸ್ತಿ, ಕಲಬುರಗಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಗೌರವ ಹಾಗೂ ಕರ್ನಾಟಕ ರಾಜ್ಯೋತ್ಸವ ಗೌರವ ಪುರಸ್ಕಾರ ಸೇರಿದಂತೆ ಹಲವು ಪ್ರಶಸ್ತಿ-ಪುರಸ್ಕಾರಗಳು ಲಭಿಸಿವೆ. ಶ್ರೀ ಶಾಂತವೀರ ಶಿವಾಚಾರ್ಯ ಪ್ರಶಸ್ತಿ ಹಾಗೂ ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಕೃತಿಗಳಿಗೆ ರಾಜ್ಯೋತ್ಸವ ಗೌರವ ಪುರಸ್ಕಾರವೂ ದೊರೆತಿದೆ. ನಾಡಿನ ಅನೇಕ ಮಠ-ಮಾನ್ಯಗಳು ಹಾಗೂ ಸಂಘ-ಸಂಸ್ಥೆಗಳು ಇವರ ಸಾಧನೆಯನ್ನು ಗುರುತಿಸಿ ಗೌರವಿಸಿವೆ.

ಸಮ್ಮೇಳನದ ಸರ್ವಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ ಡಾ. ಶ್ರೀನಿವಾಸ ಸಿರನೂರಕರ್, ಎ.ಕೆ. ರಾಮೇಶ್ವರ, ಡಾ. ಶರಣಪ್ಪ ಮಾಳಗೆ, ಡಾ. ಮಲ್ಲಿಕಾರ್ಜುನ ಕಡಕೋಳ ಹಾಗೂ ಡಾ. ನೀಲಾಂಬಿಕಾ ಪೊಲೀಸ್ ಪಾಟೀಲ ಸೇರಿದಂತೆ ಅನೇಕ ಸಾಹಿತಿಗಳ ಹೆಸರುಗಳು ಪ್ರಸ್ತಾಪಗೊಂಡಿದ್ದವು. ಕೊನೆಗೆ ಜಿಲ್ಲಾ ಕಸಾಪದ ಶಿವರಾಜ ಅಂಡಗಿ, ಧರ್ಮಣ್ಣ ಎಚ್. ಧನ್ನಿ ಹಾಗೂ ಶರಣರಾಜ ಛಪ್ಪರಬಂದಿ ನೇತೃತ್ವದ ಸಮಿತಿಯು ಡಾ. ನಾಗೇಂದ್ರ ಮಸೂತಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಿತು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X