Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಅತಿಥಿ ಉಪನ್ಯಾಸಕರ...

Kalaburagi | ಅತಿಥಿ ಉಪನ್ಯಾಸಕರ ಗೌರವಧನದ ಟಿಡಿಎಸ್ ಕಡಿತ ನಿರ್ಧಾರ ಕೈಬಿಡಿ: ಶಶೀಲ್ ಜಿ.ನಮೋಶಿ

ವಾರ್ತಾಭಾರತಿವಾರ್ತಾಭಾರತಿ6 Nov 2026 6:33 PM IST
share
Kalaburagi | ಅತಿಥಿ ಉಪನ್ಯಾಸಕರ ಗೌರವಧನದ ಟಿಡಿಎಸ್ ಕಡಿತ ನಿರ್ಧಾರ ಕೈಬಿಡಿ: ಶಶೀಲ್ ಜಿ.ನಮೋಶಿ

ಕಲಬುರಗಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಹಲವು ವರ್ಷಗಳಿಂದ ಕಡಿಮೆ ಗೌರವಧನಕ್ಕೆ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರ ಗೌರವಧನದಲ್ಲಿ ಟಿಡಿಎಸ್ (ಮೂಲದಲ್ಲಿಯೇ ತೆರಿಗೆ ಕಡಿತ) ವಿಧಿಸುವ ನಿರ್ಧಾರವನ್ನು ಸರ್ಕಾರ ತಕ್ಷಣ ಮರುಪರಿಶೀಲಿಸಿ ಕೈಬಿಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ.ನಮೋಶಿ ಒತ್ತಾಯಿಸಿದ್ದಾರೆ.

ಅತಿಥಿ ಉಪನ್ಯಾಸಕರಿಗೆ ಆರ್ಥಿಕ ಭದ್ರತೆ ಒದಗಿಸಬೇಕಾದ ಸರ್ಕಾರವೇ ಅವರ ಮೇಲೆ ಹೆಚ್ಚುವರಿ ತೆರಿಗೆ ಹೊರೆ ಹೇರುವುದು ಎಷ್ಟು ಸರಿ ಎಂದು ಪ್ರಶ್ನಿಸಿರುವ ಅವರು, ಈಗಾಗಲೇ ಅಲ್ಪ ಗೌರವಧನದಲ್ಲಿ ಕುಟುಂಬ ನಿರ್ವಹಣೆ, ಮಕ್ಕಳ ಶಿಕ್ಷಣ, ಮನೆ ಬಾಡಿಗೆ ಸೇರಿದಂತೆ ದೈನಂದಿನ ಅಗತ್ಯಗಳನ್ನು ಪೂರೈಸಲು ಪರದಾಡುತ್ತಿರುವ ಉಪನ್ಯಾಸಕರಿಗೆ ಟಿಡಿಎಸ್ ಕಡಿತ ಮತ್ತಷ್ಟು ಸಂಕಷ್ಟ ಉಂಟುಮಾಡಲಿದೆ ಎಂದು ತಿಳಿಸಿದ್ದಾರೆ.

ಅತಿಥಿ ಉಪನ್ಯಾಸಕರು ತಮ್ಮ ಜ್ಞಾನ, ಅನುಭವ ಮತ್ತು ಪರಿಶ್ರಮದ ಮೂಲಕ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಮಹತ್ವದ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ. ಆದರೆ, ಅವರ ಸೇವೆಗೆ ತಕ್ಕ ಗೌರವ, ಸಮರ್ಪಕ ವೇತನ ಹಾಗೂ ಉದ್ಯೋಗ ಭದ್ರತೆ ಒದಗಿಸುವಲ್ಲಿ ಸರ್ಕಾರಗಳು ನಿರ್ಲಕ್ಷ್ಯ ತೋರಿವೆ. ಇಂತಹ ಸಂದರ್ಭದಲ್ಲಿ ಅವರ ಅಲ್ಪ ಗೌರವಧನದಲ್ಲಿಯೇ ಟಿಡಿಎಸ್ ಕಡಿತಗೊಳಿಸುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅತಿಥಿ ಉಪನ್ಯಾಸಕರಿಗೆ ಕಾಯಂ ಉದ್ಯೋಗದ ಭದ್ರತೆ, ಸೇವಾ ಭದ್ರತೆ ಹಾಗೂ ನಿವೃತ್ತಿ ಸೌಲಭ್ಯಗಳಿಲ್ಲ. ಪ್ರತಿವರ್ಷ ನೇಮಕಾತಿ ಮತ್ತು ಸೇವೆ ಮುಂದುವರಿಯುವ ಕುರಿತು ಅನಿಶ್ಚಿತತೆಯಲ್ಲಿಯೇ ಅವರು ಬದುಕುತ್ತಿದ್ದಾರೆ. ಸರ್ಕಾರ ಮಾನವೀಯ ದೃಷ್ಟಿಯಿಂದ ಅವರ ಸಮಸ್ಯೆಗಳಿಗೆ ಸ್ಪಂದಿಸಬೇಕು. ಅಲ್ಲದೆ, ಟಿಡಿಎಸ್ ಕಡಿತದಿಂದ ಬಿಪಿಎಲ್ ಪಡಿತರ ಚೀಟಿಯ ಅರ್ಹತೆಯ ಮೇಲೆ ಪರಿಣಾಮ ಬೀರುತ್ತದೆಯೇ ಎಂಬ ಆತಂಕಕ್ಕೆ ಸರ್ಕಾರ ಅಧಿಕೃತ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಅತಿಥಿ ಉಪನ್ಯಾಸಕರ ಗೌರವಧನದಲ್ಲಿ ಟಿಡಿಎಸ್ ಕಡಿತಗೊಳಿಸುವ ಕ್ರಮವನ್ನು ಮರುಪರಿಶೀಲಿಸಬೇಕು. ಅವರಿಗೆ ಕನಿಷ್ಠ ಗೌರವಯುತ ವೇತನ, ಸೇವಾ ಭದ್ರತೆ ಹಾಗೂ ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕು. ಉಪನ್ಯಾಸಕರ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಅತಿಥಿ ಉಪನ್ಯಾಸಕರು ಸರ್ಕಾರದ ಮೇಲಿನ ಹೊರೆ ಅಲ್ಲ; ರಾಜ್ಯದ ಉನ್ನತ ಶಿಕ್ಷಣ ವ್ಯವಸ್ಥೆಯ ಅವಿಭಾಜ್ಯ ಅಂಗವಾಗಿದ್ದಾರೆ. ಅವರ ಪರಿಶ್ರಮದಿಂದ ಸಾವಿರಾರು ವಿದ್ಯಾರ್ಥಿಗಳ ಬದುಕು ರೂಪುಗೊಳ್ಳುತ್ತಿದೆ. ಅಂತಹ ಶಿಕ್ಷಕರ ಬದುಕಿಗೆ ಮತ್ತಷ್ಟು ಸಂಕಷ್ಟ ತಂದೊಡ್ಡುವ ಕ್ರಮವನ್ನು ಸಹಿಸಲು ಸಾಧ್ಯವಿಲ್ಲ. ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ ಅವರ ಹಿತ ಕಾಪಾಡಬೇಕು. ಇಲ್ಲವಾದಲ್ಲಿ ಶಿಕ್ಷಕ ಸಮುದಾಯದ ಪರವಾಗಿ ಸದನದ ಒಳಗೂ ಹೊರಗೂ ಧ್ವನಿ ಎತ್ತಲಾಗುವುದು ಎಂದು ಶಶೀಲ್ ಜಿ. ನಮೋಶಿ ಎಚ್ಚರಿಸಿದ್ದಾರೆ.

Tags

Shashil G.NamoshiKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X