Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಬರ ಪರಿಸ್ಥಿತಿ ಗಂಭೀರ,...

Kalaburagi | ಬರ ಪರಿಸ್ಥಿತಿ ಗಂಭೀರ, ಜನರ ಸಮಸ್ಯೆ ಆಲಿಸದ ಸರಕಾರ : ಎನ್.ರವಿಕುಮಾರ ಟೀಕೆ

"ಕುಡಿಯುವ ನೀರು, ಮೇವು ಪೂರೈಕೆಗಾಗಿ ನ.23ರಿಂದ 3 ದಿನ ಬಿಜೆಪಿ ರಾಜ್ಯಾದ್ಯಂತ ಹೋರಾಟ"

ಸಾಜಿದ್‌ ಅಲಿ/ವಾರ್ತಾಭಾರತಿಸಾಜಿದ್‌ ಅಲಿ/ವಾರ್ತಾಭಾರತಿ18 Nov 2026 7:41 PM IST
share
Kalaburagi | ಬರ ಪರಿಸ್ಥಿತಿ ಗಂಭೀರ, ಜನರ ಸಮಸ್ಯೆ ಆಲಿಸದ ಸರಕಾರ : ಎನ್.ರವಿಕುಮಾರ ಟೀಕೆ

ಕಲಬುರಗಿ: ರಾಜ್ಯದಲ್ಲಿ ಬರ ಪರಿಸ್ಥಿತಿ ತೀವ್ರಗೊಂಡಿದ್ದು, ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಜಾನುವಾರುಗಳನ್ನು ರೈತರು ಮಾರಾಟ ಮಾಡುತ್ತಿದ್ದಾರೆ. ರೈತರು ಸಂಕಷ್ಟದಲ್ಲಿದ್ದರೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಸಚಿವರು ರಾಜ್ಯದಲ್ಲಿ ಪ್ರವಾಸ ಮಾಡಿ ಜನರ ಸಮಸ್ಯೆ ಆಲಿಸುವ ಬದಲು ದೆಹಲಿ ಪ್ರವಾಸದಲ್ಲಿ ನಿರತರಾಗಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ನಗರದ ಐವಾನ್-ಎ-ಶಾಹಿ ಅತಿಥಿಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ, ಸಚಿವರು ಹಾಗೂ ಶಾಸಕರು ಬೆಂಗಳೂರು-ದೆಹಲಿ, ದೆಹಲಿ-ಬೆಂಗಳೂರು ಪ್ರವಾಸದಲ್ಲೇ ಕಾಲ ಕಳೆಯುತ್ತಿದ್ದಾರೆ. ಸಂಕಷ್ಟದಲ್ಲಿರುವ ಜನರಿಗೆ ಸಚಿವರು ಮತ್ತು ಶಾಸಕರು ಸಿಗುತ್ತಿಲ್ಲ. ರೈತರ ಹಿತ ಕಾಪಾಡಬೇಕಾದ ಕಾಂಗ್ರೆಸ್ ಸರ್ಕಾರ ಅವರ ಬೆನ್ನಿಗೆ ಚೂರಿ ಹಾಕುತ್ತಿದೆ ಎಂದು ಆರೋಪಿಸಿದರು.

ಸರ್ಕಾರದ ಜನವಿರೋಧಿ ನೀತಿಯನ್ನು ಖಂಡಿಸಿ ಬಿಜೆಪಿ ರಾಜ್ಯಾದ್ಯಂತ ಹೋರಾಟಕ್ಕೆ ಮುಂದಾಗಿದೆ. ನವೆಂಬರ್ 23, 24 ಮತ್ತು 25ರಂದು ಮೂರು ದಿನಗಳ ಕಾಲ ಪ್ರತಿಭಟನೆ ನಡೆಸಲಾಗುವುದು. ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಪೂರೈಕೆ ಹಾಗೂ ಜನರಿಗೆ ಉದ್ಯೋಗ ಕಲ್ಪಿಸುವಂತೆ ಒತ್ತಾಯಿಸಿ ಹೋರಾಟ ನಡೆಸಲಾಗುವುದು ಎಂದು ತಿಳಿಸಿದರು.

ಬರದಿಂದ ತತ್ತರಿಸಿರುವ ರೈತರಿಗೆ ಮಧ್ಯಂತರ ಪರಿಹಾರ ನೀಡುವುದಾಗಿ ಸರ್ಕಾರ ಹೇಳುತ್ತಿದೆ. ಆದರೆ, ಪರಿಹಾರ ನೀಡದೆ ಸುಳ್ಳು ಭರವಸೆಗಳ ಮೂಲಕ ರೈತರನ್ನು ವಂಚಿಸುತ್ತಿದೆ ಎಂದು ದೂರಿದರು.

ಸಿದ್ದರಾಮಯ್ಯಗೆ ಅವಮಾನ: ರಾಹುಲ್ ಗಾಂಧಿ ಕ್ಷಮೆಯಾಚಿಸಲಿ :

ಸೋನಿಯಾ ಗಾಂಧಿ ಅವರ ಆತ್ಮಕಥೆ ಬಿಡುಗಡೆ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಿಂದಿನ ಸಾಲಿನಲ್ಲಿ ಆಸನ ಕಲ್ಪಿಸುವ ಮೂಲಕ ಅವಮಾನಿಸಲಾಗಿದೆ ಎಂದು ರವಿಕುಮಾರ ಆರೋಪಿಸಿದರು.

ರಾಜ್ಯದ ಮುಖ್ಯಮಂತ್ರಿಯಾಗಿ ಉತ್ತಮ ಆಡಳಿತ ನೀಡಿದ್ದ ಸಿದ್ದರಾಮಯ್ಯ ಅವರನ್ನು ಐದನೇ ಅಥವಾ ಆರನೇ ಸಾಲಿನಲ್ಲಿ ಕೂರಿಸಿರುವುದು ಸರಿಯಲ್ಲ. ಇದರಿಂದ ರಾಜ್ಯದ ಕುರುಬ ಸಮುದಾಯಕ್ಕೆ ಯಾವ ಸಂದೇಶ ನೀಡಿದಂತಾಗಿದೆ? ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ ಅವರಿಗೆ ಗೌರವವೇ ಇಲ್ಲದಂತಾಗಿದೆ. ಇಂತಹ ಅವಮಾನಕ್ಕೆ ರಾಹುಲ್ ಗಾಂಧಿ ಅವರೇ ಹೊಣೆಗಾರರಾಗಿದ್ದು, ಕೂಡಲೇ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.

ಎನ್‌ಡಿಎ ಅಭ್ಯರ್ಥಿ ಗೆಲುವು ನಿಶ್ಚಿತ :

ವಿಧಾನ ಪರಿಷತ್ತಿನ ನಾಲ್ಕು ಕ್ಷೇತ್ರಗಳ ಚುನಾವಣೆಯಲ್ಲಿ ಎನ್‌ಡಿಎ ಹೇಗೆ ಗೆಲುವು ಸಾಧಿಸಿದೆಯೋ, ಅದೇ ರೀತಿ ಮುಂದಿನ ಚುನಾವಣೆಯಲ್ಲೂ ಎನ್‌ಡಿಎ ಅಭ್ಯರ್ಥಿ ಗೆಲುವು ಸಾಧಿಸುವುದು ನಿಶ್ಚಿತ ಎಂದರು.

ಹಿರಿಯೂರು ಟಿಕೆಟ್ ಹಂಚಿಕೆ ವಿಚಾರವಾಗಿ ಮಾತನಾಡಿದ ಅವರು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು ಎನ್‌ಡಿಎ ನಾಯಕರ ಅಭಿಪ್ರಾಯ ಆಲಿಸಿ ಅಭ್ಯರ್ಥಿಯನ್ನು ಅಂತಿಮಗೊಳಿಸಲಿದ್ದಾರೆ. ಬಿಜೆಪಿ ಅಥವಾ ಜೆಡಿಎಸ್‌ನ ಯಾರಿಗೇ ಟಿಕೆಟ್ ನೀಡಿದರೂ ಒಗ್ಗಟ್ಟಿನಿಂದ ಕೆಲಸ ಮಾಡುತ್ತೇವೆ ಎಂದು ಹೇಳಿದರು.

Tags

KalaburagiDroughtgovernmentN.Ravikumar
share
ಸಾಜಿದ್‌ ಅಲಿ/ವಾರ್ತಾಭಾರತಿ
ಸಾಜಿದ್‌ ಅಲಿ/ವಾರ್ತಾಭಾರತಿ

ಸಾಜಿದ್ ಅಲಿ ಅವರು 12 ವರ್ಷಗಳ ಪತ್ರಿಕೋದ್ಯಮ ಅನುಭವ ಹೊಂದಿದ್ದಾರೆ. ವಾರ್ತಾಭಾರತಿ ಮಂಗಳೂರು ಡೆಸ್ಕ್ ಸೇರಿದಂತೆ ವಿವಿಧ ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸಿರುವ ಇವರು, ಕಳೆದ ಏಳು ವರ್ಷಗಳಿಂದ ವಾರ್ತಾಭಾರತಿ ಡಿಜಿಟಲ್ ವೆಬ್‌ಸೈಟ್‌ನ ಕಲಬುರಗಿ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ಜಿಲ್ಲಾ ವರದಿಗಾರರಾಗಿ ಹಾಗೂ ಕಲ್ಯಾಣ ಕರ್ನಾಟಕ ವಿಭಾಗದ ಕೋಆರ್ಡಿನೇಟರ್ ಆಗಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ

Next Story
X