ಕಲಬುರಗಿ | ಜನಪರ ಕಾಳಜಿಯುಳ್ಳ ಡಾ.ಶರಣಪ್ರಕಾಶ್ ಪಾಟೀಲ್ ಮುಂದಿನ ಸಿಎಂ ಆಗಲಿ : ಮೌನೇಶ್ ವಿಶ್ವಕರ್ಮ

ಕಲಬುರಗಿ : ಸೇಡಂ ಕ್ಷೇತ್ರದಲ್ಲಿ ಮೂಲಭೂತ ಸೌಕರ್ಯದಿಂದ ವಂಚಿತರಾಗದಂತೆ ಪಟ್ಟಣ ಹಾಗೂ ತಾಲೂಕಿನ ಪ್ರತಿಯೊಂದು ಗ್ರಾಮಗಳಲ್ಲಿ ಗಮನ ಹರಿಸಿ ಪ್ರಾಮಾಣಿಕ ಪ್ರಯತ್ನ ಮಾಡುವಲ್ಲಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಅವರು ಮುಂದಾಗಿದ್ದಾರೆ. ಅದೇ ರೀತಿ ಕರ್ನಾಟಕ ರಾಜ್ಯದ ಜನರ ಮನಸಿನಲ್ಲಿ ನೆಲೆಸಿದವರಾಗಿದ್ದಾರೆ. ಹಾಗಾಗಿ ಅವರೇ ಮುಂದಿನ ಮುಖ್ಯಮಂತ್ರಿಗಳಾಗಲಿ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಾರ್ಮಿಕ ವಿಭಾಗದ ತಾಲೂಕು ಕಾರ್ಯದರ್ಶಿ ಹಾಗೂ ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ಪದಾಧಿಕಾರಿ ಮೌನೇಶ್ ವಿಶ್ವಕರ್ಮ ಉಡಗಿ ಹೇಳಿದ್ದಾರೆ.
ಪ್ರಕಟಣೆ ಮೂಲಕ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಡಾ.ಪಾಟೀಲ್ ಅವರು, ಸಾರ್ವಜನಿಕರ ಹಿತಾಸಕ್ತಿ ಕಾಪಾಡುವ ನಿಟ್ಟಿನಲ್ಲಿ ಮತ್ತು ಜನಪರ ಆಡಳಿತ ನೀಡಲು ಪ್ರಮಾಣಿಕ ಪ್ರಯತ್ನಕ್ಕೆ ಹೆಚ್ಚು ಒತ್ತು ನೀಡುತ್ತಿದ್ದಾರೆ, ತಾಲೂಕು ಮಟ್ಟದ ಅಧಿಕಾರಿಗಳು ಜನರ ಸಮಸ್ಯೆಗಳನ್ನು ಸ್ಪಂದಿಸಿ ಕೂಡಲೇ ಪರಿಹಾರ ಒದಗಿಸಲು ತಾಪಂ ಸಭಾಂಗಣದಲ್ಲಿ ಪ್ರತಿ ಟಾಸ್ಕ್ ಫೋರ್ಸ್ ಸಭೆಯಲ್ಲಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿ ಸೂಚನೆ ನೀಡುತ್ತಿದ್ದಾರೆ, ಸೇಡಂ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಪ್ರತಿ ಗ್ರಾಮಗಳಲ್ಲಿ ಸಿಸಿ ರಸ್ತೆ, ಒಳ್ಳ ಚರಂಡಿ, ಕುಡಿಯುವ ನೀರಿನ ಟ್ಯಾಂಕ್ ಪೂರೈಕೆ ಸೇರಿದಂತೆ ಹಲವು ಮೂಲಭೂತ ಸೌಕರ್ಯ ಒದಗಿಸಿದ ಅಭಿವೃದ್ಧಿ ಹರಿಕಾರ ಡಾ.ಶರಣಪ್ರಕಾಶ ಪಾಟೀಲ್ ಅವರು ಸ್ವಾಭಿಮಾನ ಸಂಕೇತ ಎಂದು ಹೇಳಿದ್ದಾರೆ.
ಗ್ರಾಮಗಳಿಂದ ಆಗಮಿಸಿದ ಬಡ ಜನರ ಸಮಸ್ಯೆಗಳನ್ನು ಡಾ.ಶರಣಪ್ರಕಾಶ್ ಆರ್ ಪಾಟೀಲ್ ನಗು ನಗುತ್ತಾ ಮಾತನಾಡಿ, ದೂರವಾಣಿ ಕರೆ ಮಾಡಿ ಸಮಸ್ಯೆಗಳನ್ನು ಪರಿಹರಿಸಿ, ಕೆಲವೊಂದು ಸ್ಥಳದಲ್ಲೇ ಇರುವ ಅಧಿಕಾರಿಗಳಿಗೆ ಸಮಸ್ಯೆ ಬಗೆಹರಿಸಲು ಸೂಚನೆ ನೀಡುವರು ಅವರಾಗಿದ್ದಾರೆ ಎಂದು ಬಣ್ಣಿಸಿದ್ದಾರೆ.







