Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಇಂಧನ ದರ ಏರಿಕೆ ವಿರುದ್ಧ...

Kalaburagi | ಇಂಧನ ದರ ಏರಿಕೆ ವಿರುದ್ಧ ಡಿವೈಎಫ್ಐ ಖಂಡನೆ: ತಕ್ಷಣ ದರ ಇಳಿಕೆಗೆ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ25 May 2026 10:13 PM IST
share
Kalaburagi | ಇಂಧನ ದರ ಏರಿಕೆ ವಿರುದ್ಧ ಡಿವೈಎಫ್ಐ ಖಂಡನೆ: ತಕ್ಷಣ ದರ ಇಳಿಕೆಗೆ ಒತ್ತಾಯ

ಕಲಬುರಗಿ : ಪಶ್ಚಿಮ ಏಷ್ಯಾ ಸಂಘರ್ಷವನ್ನು ಕಾರಣವಾಗಿ ಮುಂದಿಟ್ಟು ದೇಶದಲ್ಲಿ ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ (ಎಲ್‌ಪಿಜಿ) ದರಗಳನ್ನು ನಿರಂತರವಾಗಿ ಹೆಚ್ಚಿಸಲಾಗುತ್ತಿರುವುದು ಜನಸಾಮಾನ್ಯರ ಬದುಕಿನ ಮೇಲೆ ಗಂಭೀರ ಹೊರೆ ಉಂಟುಮಾಡಿದೆ ಎಂದು ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (ಡಿವೈಎಫ್ಐ) ಖಂಡನೆ ವ್ಯಕ್ತಪಡಿಸಿದೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಸಂಘಟನೆಯ ರಾಜ್ಯಾಧ್ಯಕ್ಷೆ ಲವಿತ್ರ ವಸ್ತ್ರದ್, ಕೇಂದ್ರ ಸರ್ಕಾರ ತಕ್ಷಣವೇ ತೈಲ ಹಾಗೂ ಅನಿಲ ದರಗಳನ್ನು ಇಳಿಸಿ ಜನರ ಸಂಕಷ್ಟಕ್ಕೆ ಸ್ಪಂದಿಸಬೇಕು ಎಂದು ಆಗ್ರಹಿಸಿದರು.

ಸೋಮವಾರ ಪೆಟ್ರೋಲ್ ಮತ್ತು ಡೀಸೆಲ್ ದರಗಳು ಕ್ರಮವಾಗಿ 2.61 ರೂ. ಮತ್ತು 2.71 ರೂ. ಹೆಚ್ಚಳಗೊಂಡಿದ್ದು, ಕೇವಲ ಎರಡು ವಾರಗಳಲ್ಲೇ ಲೀಟರ್‌ಗೆ ಸುಮಾರು 7.5 ರೂ. ಏರಿಕೆಯಾಗಿದೆ ಎಂದು ಡಿವೈಎಫ್ಐ ಆರೋಪಿಸಿದೆ. ಇದರಿಂದ ಪೆಟ್ರೋಲ್ ದರ 110 ರೂ. ಹಾಗೂ ಡೀಸೆಲ್ ದರ 95 ರೂ. ಗೆ ಏರಿಕೆಯಾಗಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಬೆಲೆ ಏರಿಕೆಯಾಗುವ ಆತಂಕ ಜನರಲ್ಲಿ ಮೂಡಿದೆ ಎಂದು ತಿಳಿಸಿದೆ.

ಇಂಧನ ದರ ಏರಿಕೆಯ ಪರಿಣಾಮ ಸಾರಿಗೆ ವೆಚ್ಚ ಹೆಚ್ಚಾಗಿ ಅಗತ್ಯ ವಸ್ತುಗಳ ಬೆಲೆಗಳು ಕೂಡ ಗಗನಕ್ಕೇರಿವೆ. ಈಗಾಗಲೇ ಬೆಲೆ ಏರಿಕೆಯಿಂದ ಸಂಕಷ್ಟದಲ್ಲಿರುವ ಬಡ ಹಾಗೂ ಮಧ್ಯಮ ವರ್ಗದ ಜನರು ಮತ್ತಷ್ಟು ಆರ್ಥಿಕ ಒತ್ತಡಕ್ಕೆ ಒಳಗಾಗುತ್ತಿದ್ದಾರೆ ಎಂದು ಸಂಘಟನೆ ಅಭಿಪ್ರಾಯಪಟ್ಟಿದೆ.

ಅಡುಗೆ ಅನಿಲದ ಬೆಲೆ ಏರಿಕೆಯಿಂದ ಸಾಮಾನ್ಯ ಕುಟುಂಬಗಳ ಜೀವನ ದುಸ್ತರವಾಗುತ್ತಿದ್ದು, ಪೆಟ್ರೋಲ್, ಡೀಸೆಲ್ ಹಾಗೂ ಗ್ಯಾಸ್ ಲಭ್ಯತೆಯಲ್ಲಿಯೂ ಅನಿಶ್ಚಿತತೆ ಉಂಟಾಗುತ್ತಿದೆ ಎಂದು ಡಿವೈಎಫ್ಐ ಆರೋಪಿಸಿದೆ.

ತೈಲ ಕಂಪನಿಗಳು ಅಂತಾರಾಷ್ಟ್ರೀಯ ಮಾರುಕಟ್ಟೆಯ ಬೆಲೆ ಏರಿಕೆಯನ್ನು ನೇರವಾಗಿ ಗ್ರಾಹಕರ ಮೇಲೆ ಹೊರೆ ಹಾಕುತ್ತಿದ್ದು, ಇದನ್ನು ನಿಯಂತ್ರಿಸಲು ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಟೀಕಿಸಿದೆ.

ಸಾಮಾನ್ಯ ಜನರ ಮೇಲಿನ ತೆರಿಗೆ ಭಾರವನ್ನು ತಕ್ಷಣ ಹಿಂಪಡೆಯಬೇಕು ಹಾಗೂ ಪೆಟ್ರೋಲ್, ಡೀಸೆಲ್ ಮತ್ತು ಗ್ಯಾಸ್ ಸಿಲಿಂಡರ್ ದರಗಳನ್ನು ಕಡಿಮೆ ಮಾಡಬೇಕು. ಇಲ್ಲದಿದ್ದರೆ ತೀವ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಡಿವೈಎಫ್ಐ ಎಚ್ಚರಿಸಿದೆ.

ಈ ಸಂದರ್ಭದಲ್ಲಿ ಜಿಲ್ಲಾ ಸಂಚಾಲಕರಾದ ಪ್ರಮೋದ ಪಾಂಚಾಳ, ಸಲ್ಮಾನ್ ಖಾನ್, ಶಾಂತಕುಮಾರ್ ಗುಡುಬಾ, ಗಿಡ್ಡಮ್ಮ, ಸಾನಿಯಾ ಇದ್ದರು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X