Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ವಿದ್ಯಾರ್ಥಿ ಜೀವನದಲ್ಲಿ...

Kalaburagi | ವಿದ್ಯಾರ್ಥಿ ಜೀವನದಲ್ಲಿ ಶಿಕ್ಷಣವೆಂಬುದು ತಪಸ್ಸು: ಡಿ.ಜಿ.ಸಾಗರ್

ಸಾಹಿತ್ಯ ಚಟುವಟಿಕೆಗಳ ಸಮಾರೋಪ, ಹಿರಿಯ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ

ವಾರ್ತಾಭಾರತಿವಾರ್ತಾಭಾರತಿ23 Sept 2026 5:38 PM IST
share
Kalaburagi | ವಿದ್ಯಾರ್ಥಿ ಜೀವನದಲ್ಲಿ ಶಿಕ್ಷಣವೆಂಬುದು ತಪಸ್ಸು: ಡಿ.ಜಿ.ಸಾಗರ್

ಕಲಬುರಗಿ: ಶಿಕ್ಷಣವೆಂಬುದು ಒಂದು ತಪಸ್ಸು. ವಿದ್ಯಾರ್ಥಿ ಜೀವನದಲ್ಲಿ ಶಿಕ್ಷಣ ಪಡೆಯುವುದು ವ್ಯಕ್ತಿತ್ವ ವಿಕಸನ ಮತ್ತು ಗುರಿ ಸಾಧನೆಯ ಮಹತ್ವದ ಘಟ್ಟವಾಗಿದ್ದು, ಗುರುವಿನ ಮಾರ್ಗದರ್ಶನದೊಂದಿಗೆ ಸ್ಪರ್ಧಾತ್ಮಕ ಮನೋಭಾವ, ಸ್ವಸಾಮರ್ಥ್ಯ ಮತ್ತು ಬದ್ಧತೆಯನ್ನು ಮೈಗೂಡಿಸಿಕೊಂಡರೆ ಉತ್ತಮ ಸಾಧನೆ ಸಾಧ್ಯ ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಹಾಗೂ ಹೋರಾಟಗಾರ ಡಿ.ಜಿ.ಸಾಗರ್ ಹೇಳಿದರು.

ಗುಲ್ಬರ್ಗಾ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಸ್ಥೆಯ ಹರಿಹರ ಸಭಾಂಗಣದಲ್ಲಿ ಆಯೋಜಿಸಿದ್ದ ಸಾಹಿತ್ಯ ಚಟುವಟಿಕೆಗಳ ಸಮಾರೋಪ ಹಾಗೂ ಹಿರಿಯ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭವನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ಶಿಕ್ಷಣ ಪಡೆಯುವುದು ಎಂದರೆ ಕೇವಲ ಅಂಕ ಗಳಿಸುವುದಲ್ಲ; ಜವಾಬ್ದಾರಿಯನ್ನು ಕಲಿಯುವುದೂ ಆಗಿದೆ. ವಿದ್ಯಾರ್ಥಿಗಳು ರಾಷ್ಟ್ರ ನಿರ್ಮಾಣ, ಸಮಾಜ ಸುಧಾರಣೆ ಮತ್ತು ಶೋಷಣೆ ನಿವಾರಣೆಯಂತಹ ಮೌಲ್ಯಗಳನ್ನು ಅಳವಡಿಸಿಕೊಂಡು ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆಗೆ ಕೊಡುಗೆ ನೀಡಬೇಕು ಎಂದು ಹೇಳಿದರು.

ಸಮಾಜದಲ್ಲಿ ಎದುರಾಗುವ ಸವಾಲುಗಳಿಗೆ ಆತ್ಮವಿಶ್ವಾಸದಿಂದ ಎದುರಿಸಿ, ‘ಅಸಾಧ್ಯ’ ಎಂಬ ಮನೋಭಾವವನ್ನು ತೊರೆದು ಹೊಸ ಸಾಧನೆಗಳ ಮೂಲಕ ಕಲ್ಯಾಣ ಕರ್ನಾಟಕ ಭಾಗದ ಕೀರ್ತಿಯನ್ನು ಹೆಚ್ಚಿಸಬೇಕು. ಕಲಿಸಿದ ಗುರುಗಳನ್ನು ಮತ್ತು ಶಿಕ್ಷಣ ನೀಡಿದ ಸಂಸ್ಥೆಯನ್ನು ಸದಾ ಸ್ಮರಿಸಿ ಆದರ್ಶ ವ್ಯಕ್ತಿಗಳಾಗಬೇಕು ಎಂದು ಸಲಹೆ ನೀಡಿದರು.

ಗುಲ್ಬರ್ಗಾ ವಿಶ್ವವಿದ್ಯಾಲಯದ ವಿಶೇಷಾಧಿಕಾರಿ ಪ್ರೊ. ರಮೇಶ್ ರಾಥೋಡ್ ಮಾತನಾಡಿ, ಕನ್ನಡ ಹೃದಯದ ಭಾಷೆಯಾಗಿದ್ದು, ಐಕ್ಯತೆ ಮತ್ತು ಸದ್ಭಾವನೆಯನ್ನು ಬೆಳೆಸುವ ಶಕ್ತಿಯನ್ನು ಹೊಂದಿದೆ. ಜಾತಿ-ಮತ, ಮೇಲು-ಕೀಳು ಭೇದಗಳನ್ನು ಮರೆತು ಸಮಾನತೆಯ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಲಾನಿಕಾಯದ ಡೀನ್ ಹಾಗೂ ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕ ಪ್ರೊ. ಎಚ್.ಟಿ. ಪೋತೆ ಮಾತನಾಡಿ, ಕನ್ನಡ ವಿದ್ಯಾರ್ಥಿಗಳು ಸಂಸ್ಕೃತಿ ಮತ್ತು ಸಂಸ್ಕಾರವನ್ನು ಅಳವಡಿಸಿಕೊಳ್ಳಬೇಕು. ವಿದ್ಯಾರ್ಥಿ ಜೀವನದಲ್ಲಿ ಗಳಿಸಿದ ಜ್ಞಾನವು ಬದುಕಿನ ಸವಾಲುಗಳನ್ನು ಎದುರಿಸಲು ಪ್ರೇರಣೆಯಾಗಬೇಕು. ಕುವೆಂಪು, ಬೇಂದ್ರೆ, ಕಾರಂತ, ಮಾಸ್ತಿ ಹಾಗೂ ಚಂದ್ರಶೇಖರ ಕಂಬಾರ ಅವರ ಕೃತಿಗಳನ್ನು ಓದುವ ಮೂಲಕ ಕನ್ನಡ ಸಾಹಿತ್ಯದ ಆಳವನ್ನು ಅರಿಯಬೇಕು ಎಂದು ಸಲಹೆ ನೀಡಿದರು.

ಸಂದರ್ಶಕ ಪ್ರಾಧ್ಯಾಪಕ ಡಾ. ಸೂರ್ಯಕಾಂತ ಎಸ್.ಸುಜ್ಯಾತ್ ಮಾತನಾಡಿದರು. ವಿದ್ಯಾರ್ಥಿ ಪ್ರತಿನಿಧಿಗಳಾದ ರಾಹುಲ್, ಐಶ್ವರ್ಯ ಮತ್ತು ಆಶಿಪ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಜಯಭೀಮ್ ರಾವುರ್ ಮತ್ತು ರಾಜು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.

ಕಾರ್ಯಕ್ರಮದಲ್ಲಿ ಕನ್ನಡ ಸಂಶೋಧನಾ ಸಂಘ ಮತ್ತು ಕನ್ನಡ ಸಾಹಿತ್ಯ ಸಂಘದ ಪದಾಧಿಕಾರಿಗಳು, ಅತಿಥಿ ಉಪನ್ಯಾಸಕರು, ಬೋಧಕೇತರ ಸಿಬ್ಬಂದಿ, ಸಂಶೋಧನಾ ವಿದ್ಯಾರ್ಥಿಗಳು ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಅಶ್ವಿನಿ ಬಟಾವಲ್ ಪ್ರಾರ್ಥಿಸಿದರು. ರೇಷ್ಮಾ ಸ್ವಾಗತಿಸಿದರು. ಸಚಿನ್ ಮತ್ತು ಲಕ್ಷ್ಮೀ ಚೌಡಾಪುರ ಕಾರ್ಯಕ್ರಮ ನಿರ್ವಹಿಸಿದರು. ಶಿವರಾಜ್ ವಂದಿಸಿದರು.

Tags

studentEducationKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X