Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಶಿಕ್ಷಣ ಸಂಸ್ಥೆಗಳು...

Kalaburagi | ಶಿಕ್ಷಣ ಸಂಸ್ಥೆಗಳು ಸಂಶೋಧನಾ ಚಟುವಟಿಕೆಗಳಿಗೆ ಆದ್ಯತೆ ನೀಡಲಿ: ಶಶೀಲ್ ಜಿ. ನಮೋಶಿ

ವಾರ್ತಾಭಾರತಿವಾರ್ತಾಭಾರತಿ4 Nov 2026 5:42 PM IST
share
Kalaburagi | ಶಿಕ್ಷಣ ಸಂಸ್ಥೆಗಳು ಸಂಶೋಧನಾ ಚಟುವಟಿಕೆಗಳಿಗೆ ಆದ್ಯತೆ ನೀಡಲಿ: ಶಶೀಲ್ ಜಿ. ನಮೋಶಿ

ಕಲಬುರಗಿ: ಶಿಕ್ಷಣ ಕ್ಷೇತ್ರದಲ್ಲಿ ಶ್ರೇಷ್ಠತೆ ಸಾಧಿಸಲು ಹಾಗೂ ಅಂತರರಾಷ್ಟ್ರೀಯ ಗುಣಮಟ್ಟದ ಶಿಕ್ಷಣದ ಮಾನದಂಡಗಳನ್ನು ತಲುಪಲು ಶಿಕ್ಷಣ ಸಂಸ್ಥೆಗಳು ಸಂಶೋಧನಾ ಚಟುವಟಿಕೆಗಳು ಮತ್ತು ಸಂಶೋಧನಾ ಫಲಿತಾಂಶಗಳಿಗೆ ಹೆಚ್ಚಿನ ಆದ್ಯತೆ ನೀಡುವ ಅಗತ್ಯವಿದೆ ಎಂದು ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ. ನಮೋಶಿ ಪ್ರತಿಪಾದಿಸಿದರು.

ನಗರದ ಶರಣಬಸವ ವಿಶ್ವವಿದ್ಯಾಲಯದ ದೊಡ್ಡಪ್ಪ ಅಪ್ಪ ಸಭಾಮಂಟಪದಲ್ಲಿ ಬುಧವಾರ ಆಯೋಜಿಸಿದ್ದ ಭಾರತೀಯ ಎಲೆಕ್ಟ್ರಾನಿಕ್ಸ್ ಮತ್ತು ಟೆಲಿಕಮ್ಯುನಿಕೇಷನ್ಸ್ ಇಂಜಿನಿಯರಿಂಗ್ ಸಂಸ್ಥೆಯ (ಐಇಟಿಇ) 73ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಈಶಾನ್ಯ ಶಿಕ್ಷಕರ ಕ್ಷೇತ್ರದಿಂದ ದಾಖಲೆಯ ಐದನೇ ಬಾರಿಗೆ ಕರ್ನಾಟಕ ವಿಧಾನ ಪರಿಷತ್ತಿಗೆ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ವಿಶ್ವವಿದ್ಯಾಲಯದ ವತಿಯಿಂದ ಅವರನ್ನು ಸನ್ಮಾನಿಸಲಾಯಿತು.

ಶಿಕ್ಷಣ ಸಂಸ್ಥೆಗಳ ಶ್ರೇಯಾಂಕ ನಿರ್ಧರಿಸುವಲ್ಲಿ ಗುಣಮಟ್ಟದ ಸಂಶೋಧನಾ ಫಲಿತಾಂಶಗಳು ಹಾಗೂ ಉನ್ನತ ಶಿಕ್ಷಣ ಸಂಸ್ಥೆಗಳು ಸಂಶೋಧನಾ ಚಟುವಟಿಕೆಗಳಿಗೆ ನೀಡುವ ಆದ್ಯತೆ ಪ್ರಮುಖ ಪಾತ್ರ ವಹಿಸುತ್ತವೆ ಎಂದು ನಮೋಶಿ ಹೇಳಿದರು.

ಪಿ.ಡಿ.ಎ. ಇಂಜಿನಿಯರಿಂಗ್ ಕಾಲೇಜು ಸೇರಿದಂತೆ ಹಲವು ಶಿಕ್ಷಣ ಸಂಸ್ಥೆಗಳನ್ನು ನಡೆಸುತ್ತಿರುವ ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷರೂ ಆಗಿರುವ ನಮೋಶಿ, ಪಿ.ಡಿ.ಎ. ಇಂಜಿನಿಯರಿಂಗ್ ಕಾಲೇಜಿನ 35 ಸಾವಿರ ಚದರ ಅಡಿ ಪ್ರದೇಶದಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಉದ್ಯಾನವನ (ಟೆಕ್ ಪಾರ್ಕ್) ಸ್ಥಾಪಿಸುವ ಪ್ರಸ್ತಾವನೆಗೆ ಅನುಮೋದನೆ ದೊರೆತಿದ್ದು, ಶೀಘ್ರದಲ್ಲಿಯೇ ಕಾಮಗಾರಿ ಆರಂಭವಾಗಲಿದೆ ಎಂದು ತಿಳಿಸಿದರು.

ಪ್ರಸ್ತಾವಿತ ಟೆಕ್ ಪಾರ್ಕ್ ವಿದ್ಯಾರ್ಥಿಗಳು ಹಾಗೂ ಸಂಶೋಧನಾ ವಿದ್ಯಾರ್ಥಿಗಳಿಗೆ ತಮ್ಮ ಹೊಸ ಆಲೋಚನೆಗಳನ್ನು ಅನ್ವೇಷಿಸಲು ಮತ್ತು ರೂಪಿಸಿದ ಯೋಜನೆಗಳ ಮೇಲೆ ಕಾರ್ಯನಿರ್ವಹಿಸಲು ಉತ್ತಮ ವೇದಿಕೆ ಒದಗಿಸಲಿದೆ. ಆರಂಭದಲ್ಲಿ ಎಲ್ಲ ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳ ವಿದ್ಯಾರ್ಥಿಗಳಿಗೆ ಈ ಟೆಕ್ ಪಾರ್ಕ್‌ನ ಸೌಲಭ್ಯಗಳನ್ನು ಬಳಸಿಕೊಳ್ಳಲು ಅವಕಾಶ ನೀಡಲಾಗುವುದು. ನಂತರ ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳ ವಿದ್ಯಾರ್ಥಿಗಳಿಗೂ ಅವಕಾಶ ಕಲ್ಪಿಸುವ ಕುರಿತು ಪರಿಶೀಲಿಸಲಾಗುವುದು ಎಂದು ವಿವರಿಸಿದರು.

ಸಂಶೋಧನಾ ಚಟುವಟಿಕೆಗಳನ್ನು ಉತ್ತೇಜಿಸಲು ಹಾಗೂ ಮೂಲಸೌಕರ್ಯ ಸೌಲಭ್ಯಗಳನ್ನು ಸುಧಾರಿಸಲು ಎಐಸಿಟಿಇ, ಯುಜಿಸಿ ಮತ್ತು ಇತರ ಕೇಂದ್ರ ಮಟ್ಟದ ಪ್ರಮುಖ ಸಂಸ್ಥೆಗಳಲ್ಲಿ ಲಭ್ಯವಿರುವ ಅನುದಾನವನ್ನು ಸದ್ಬಳಕೆ ಮಾಡಿಕೊಳ್ಳಲು ಖಾಸಗಿ ಶಿಕ್ಷಣ ಸಂಸ್ಥೆಗಳು ಪರಸ್ಪರ ಕೈಜೋಡಿಸಬೇಕು ಎಂದು ನಮೋಶಿ ಅಭಿಪ್ರಾಯಪಟ್ಟರು. ಇಂತಹ ಅನುದಾನವನ್ನು ಬಳಸಿಕೊಳ್ಳುವಲ್ಲಿ ಕರ್ನಾಟಕ ಹಿಂದುಳಿದಿದ್ದು, ಅನುದಾನವನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಕೆಲವೇ ರಾಜ್ಯಗಳಲ್ಲಿ ಒಂದಾಗಿರುವ ತಮಿಳುನಾಡಿನ ಮಾದರಿಯನ್ನು ಕರ್ನಾಟಕ ಅನುಸರಿಸಬೇಕು ಎಂದರು.

ಈಶಾನ್ಯ ಶಿಕ್ಷಕರ ಕ್ಷೇತ್ರದ ಶಿಕ್ಷಕ ಸಮುದಾಯವು ಅಪಾರ ಬೆಂಬಲ ನೀಡಿ ದಾಖಲೆಯ ಐದನೇ ಬಾರಿಗೆ ತಮ್ಮನ್ನು ಆಯ್ಕೆ ಮಾಡಿದ್ದಕ್ಕಾಗಿ ಕೃತಜ್ಞತೆ ಸಲ್ಲಿಸಿದ ಅವರು, ಖಾಸಗಿ ಶಿಕ್ಷಣ ಸಂಸ್ಥೆಗಳು ಎದುರಿಸುತ್ತಿರುವ ಸಮಸ್ಯೆಗಳು ಹಾಗೂ ಆಯಾ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರ ಬೇಡಿಕೆಗಳನ್ನು ಈಡೇರಿಸಲು ಆದ್ಯತೆ ನೀಡುವುದಾಗಿ ಭರವಸೆ ನೀಡಿದರು.

ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ಮಾತನಾಡಿ, ಚುನಾವಣೆಯಲ್ಲಿ ಯಶಸ್ಸು ಸಾಧಿಸಿದ ನಮೋಶಿ ಅವರನ್ನು ಅಭಿನಂದಿಸಿದರು. ಇದೇ ಸಂದರ್ಭದಲ್ಲಿ ನಮೋಶಿ ಅವರ ಅನುಭವ ಹಾಗೂ ಸೇವೆಯನ್ನು ಪರಿಗಣಿಸಿ, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಲ್ಲಿ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಪಕ್ಷದ ವರಿಷ್ಠರನ್ನು ವೇದಿಕೆಯ ಮೂಲಕ ಒತ್ತಾಯಿಸಿದರು.

ಇತ್ತೀಚೆಗೆ ಐಇಟಿಇ ಸಂಸ್ಥೆಯ ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ಪ್ರೊ. ಬಸವರಾಜ ಗದಗೆ ಹಾಗೂ ನವದೆಹಲಿಯ ಐಇಟಿಇ ಆಡಳಿತ ಮಂಡಳಿಗೆ ಆಯ್ಕೆಯಾಗಿರುವ ವಿಟಿಯು ಕಲಬುರಗಿ ಪ್ರಾದೇಶಿಕ ಕೇಂದ್ರದ ಪ್ರಾದೇಶಿಕ ನಿರ್ದೇಶಕಿ ಡಾ. ಶುಭಾಂಗಿ ಅವರನ್ನು ಅವರ ಸಾಧನೆಗಾಗಿ ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಡಾ. ಶುಭಾಂಗಿ ಅವರು 15ನೇ ಪ್ರೊ. ಎಸ್. ನಾರಾಯಣ ದತ್ತಿ ಉಪನ್ಯಾಸ ನೀಡಿದರು. ಪ್ರೊ. ಬಸವರಾಜ ಗದಗೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಶರಣಬಸವ ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ. ಅನಿಲಕುಮಾರ ಬಿಡವೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಿಶ್ವವಿದ್ಯಾಲಯದ ಸಂಶೋಧನಾ ವಿಭಾಗದ ಡೀನ್ ಹಾಗೂ ಐಇಟಿಇ ಕಲಬುರಗಿ ಘಟಕದ ಅಧ್ಯಕ್ಷೆ ಡಾ. ಸುಜಾತಾ ಮಲ್ಲಾಪುರ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಎಸ್. ಶ್ರೀದೇವಿ ವಂದನಾರ್ಪಣೆ ಸಲ್ಲಿಸಿದರು.

Tags

Shashil G.NamoshiEducationalKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X