Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಕಾರ್ಮಿಕರ ಹಕ್ಕುಗಳ...

Kalaburagi | ಕಾರ್ಮಿಕರ ಹಕ್ಕುಗಳ ರಕ್ಷಣೆಗೆ ಕಾನೂನುಗಳ ಪರಿಣಾಮಕಾರಿ ಅನುಷ್ಠಾನ ಅಗತ್ಯ : ಶ್ರೀನಿವಾಸ ನವಲೆ

ವಾರ್ತಾಭಾರತಿವಾರ್ತಾಭಾರತಿ12 Oct 2026 10:05 PM IST
share
Kalaburagi | ಕಾರ್ಮಿಕರ ಹಕ್ಕುಗಳ ರಕ್ಷಣೆಗೆ ಕಾನೂನುಗಳ ಪರಿಣಾಮಕಾರಿ ಅನುಷ್ಠಾನ ಅಗತ್ಯ : ಶ್ರೀನಿವಾಸ ನವಲೆ

ಕಲಬುರಗಿ: ಕಾರ್ಮಿಕರ ಹಕ್ಕುಗಳ ರಕ್ಷಣೆ, ಸಾಮಾಜಿಕ ಭದ್ರತೆ ಹಾಗೂ ಅವರಿಗೆ ನ್ಯಾಯಯುತ ಸೌಲಭ್ಯಗಳನ್ನು ಒದಗಿಸುವುದು ಕಾರ್ಮಿಕ ಕಾನೂನುಗಳ ಪ್ರಮುಖ ಉದ್ದೇಶವಾಗಿದೆ. ಹೊಸ ಕಾರ್ಮಿಕ ಸಂಹಿತೆಗಳು ಮತ್ತು ಕಾನೂನು ತಿದ್ದುಪಡಿಗಳ ಕುರಿತು ಅಧಿಕಾರಿಗಳು ಸಮಗ್ರ ಅರಿವು ಹೊಂದಿ, ಅವುಗಳ ಆಶಯಕ್ಕೆ ಅನುಗುಣವಾಗಿ ಅನುಷ್ಠಾನಗೊಳಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶ್ರೀನಿವಾಸ ನವಲೆ ಹೇಳಿದರು.

ನಗರದ ಜಿಲ್ಲಾ ಪಂಚಾಯಿತಿಯ ಹೊಸ ಸಭಾಂಗಣದಲ್ಲಿ ಸೋಮವಾರ ಕಾರ್ಮಿಕ ಇಲಾಖೆಯ ಕಲಬುರಗಿ ಪ್ರಾದೇಶಿಕ ವ್ಯಾಪ್ತಿಯ ಕಲಬುರಗಿ, ಬೀದರ್, ರಾಯಚೂರು, ಯಾದಗಿರಿ, ಕೊಪ್ಪಳ, ವಿಜಯನಗರ, ಬಳ್ಳಾರಿ, ಚಿತ್ರದುರ್ಗ ಹಾಗೂ ದಾವಣಗೆರೆ ಜಿಲ್ಲೆಗಳ ಕಾರ್ಮಿಕ ಇಲಾಖೆ ಅಧಿಕಾರಿಗಳು, ಹಿರಿಯ ಕಾರ್ಮಿಕ ನಿರೀಕ್ಷಕರು, ಕಾರ್ಮಿಕ ನಿರೀಕ್ಷಕರು ಮತ್ತು ಸಿಬ್ಬಂದಿಗಾಗಿ ಆಯೋಜಿಸಿದ್ದ ಎರಡು ದಿನಗಳ ‘ಕಾರ್ಮಿಕ ಸಂಹಿತೆಗಳ ತರಬೇತಿ ಕಾರ್ಯಾಗಾರ’ ಉದ್ಘಾಟಿಸಿ ಅವರು ಮಾತನಾಡಿದರು.

ಹಿಂದೆ ವಿವಿಧ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಹಲವಾರು ಕಾರ್ಮಿಕ ಕಾಯ್ದೆಗಳು ಜಾರಿಯಲ್ಲಿದ್ದವು. ಕಾಲಾನುಸಾರ ಅವುಗಳಲ್ಲಿ ಬದಲಾವಣೆಗಳನ್ನು ತಂದು ಕಾನೂನುಗಳನ್ನು ಸರಳೀಕರಿಸುವ ಪ್ರಯತ್ನ ಮಾಡಲಾಗಿದೆ. ಹೊಸ ಕಾನೂನುಗಳ ಜಾರಿಯ ಸಂದರ್ಭದಲ್ಲಿ ಕಾರ್ಮಿಕರ ಹಿತಾಸಕ್ತಿ, ಸಂವಿಧಾನದ ಆಶಯಗಳು ಹಾಗೂ ಅವರ ಹಕ್ಕುಗಳಿಗೆ ಆದ್ಯತೆ ನೀಡುವುದು ಅಗತ್ಯವಾಗಿದೆ ಎಂದು ತಿಳಿಸಿದರು.

ಹೊಸ ಕಾಯ್ದೆಗಳು ಮತ್ತು ತಿದ್ದುಪಡಿಗಳ ಕುರಿತು ವಕೀಲರು, ನ್ಯಾಯಾಧೀಶರು ಹಾಗೂ ಕಾರ್ಮಿಕ ಇಲಾಖೆ ಅಧಿಕಾರಿಗಳು ಸಮಗ್ರ ಜ್ಞಾನ ಹೊಂದಿರಬೇಕು. ಕಾನೂನಿನ ಸರಿಯಾದ ಅರ್ಥ ಮತ್ತು ಅದರ ಹಿಂದಿನ ಉದ್ದೇಶವನ್ನು ಅರಿತುಕೊಳ್ಳುವುದು ಮುಖ್ಯ. ಕೇವಲ ಕಾನೂನುಗಳನ್ನು ಜಾರಿಗೊಳಿಸುವುದಷ್ಟೇ ಸಾಕಾಗುವುದಿಲ್ಲ; ಅವುಗಳ ಪರಿಣಾಮಕಾರಿ ಅನುಷ್ಠಾನದ ಮೂಲಕ ಕಾರ್ಮಿಕರಿಗೆ ನ್ಯಾಯ ದೊರಕುವಂತೆ ಮಾಡಬೇಕು ಎಂದು ಹೇಳಿದರು.

ಕಲಬುರಗಿ ಪ್ರಾದೇಶಿಕ ಉಪ ಕಾರ್ಮಿಕ ಆಯುಕ್ತ ಡಾ. ವೆಂಕಟೇಶ ಶಿಂದಿಹಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿ, ಕೇಂದ್ರ ಸರ್ಕಾರವು ಹಳೆಯ ಕಾರ್ಮಿಕ ಕಾನೂನುಗಳನ್ನು ಸರಳೀಕರಿಸಿ ನಾಲ್ಕು ಪ್ರಮುಖ ಕಾರ್ಮಿಕ ಸಂಹಿತೆಗಳ ರೂಪದಲ್ಲಿ ಕ್ರೋಡೀಕರಿಸುವ ಕ್ರಮ ಕೈಗೊಂಡಿದೆ ಎಂದು ತಿಳಿಸಿದರು.

ಹೈಕೋರ್ಟ್‌ನ ಹಿರಿಯ ನ್ಯಾಯವಾದಿ ಪಿ. ವಿಲಾಸಕುಮಾರ ಮಾತನಾಡಿ, ನ್ಯಾಯಾಂಗದ ಕಾರ್ಯಕಲಾಪಗಳಲ್ಲಿ ಕನ್ನಡದಂತಹ ಪ್ರಾದೇಶಿಕ ಭಾಷೆಗಳಿಗೆ ಆದ್ಯತೆ ನೀಡುವುದು ಹಾಗೂ ಮಾತೃಭಾಷೆಯಲ್ಲಿ ನ್ಯಾಯ ದೊರೆಯುವ ವಾತಾವರಣ ನಿರ್ಮಿಸುವುದು ಅಗತ್ಯವಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕಲಬುರಗಿ ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತ ಮೊಹಮ್ಮದ್ ಬಷೀರ್ ಅನ್ಸಾರಿ, ದಾವಣಗೆರೆ ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತ ಡಾ. ಅವಿನಾಶ ನಾಯ್ಕ, ಕಲಬುರಗಿ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ನರಸಿಂಹ ಮೆಂಡನ್, ಕಲಬುರಗಿ ಕಟ್ಟಡ ಕಾರ್ಮಿಕರ ಜಂಟಿ ಸಮನ್ವಯ ಸಮಿತಿ ಅಧ್ಯಕ್ಷ ಪ್ರಭು ಯಳಸಂಗಿ ಹಾಗೂ ಕಲಬುರಗಿ ಸಿಐಟಿಯು ಅಧ್ಯಕ್ಷ ಶ್ರೀಮಂತ ಜಮಾದಾರ ಸೇರಿದಂತೆ ವಿವಿಧ ಜಿಲ್ಲೆಗಳ ಕಾರ್ಮಿಕ ಇಲಾಖೆ ಅಧಿಕಾರಿಗಳು, ಹಿರಿಯ ಕಾರ್ಮಿಕ ನಿರೀಕ್ಷಕರು, ಕಾರ್ಮಿಕ ನಿರೀಕ್ಷಕರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

ಕಲಬುರಗಿ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ನಿರ್ದೇಶಕ ಸಂತೋಷ್ ಕುಲಕರ್ಣಿ ಕಾರ್ಯಕ್ರಮ ನಿರೂಪಿಸಿದರು. ಹರಿದಾಸ್ ದೇಶಪಾಂಡೆ ಸ್ವಾಗತಿಸಿದರು. ಹಿರಿಯ ಕಾರ್ಮಿಕ ನಿರ್ದೇಶಕ ರವೀಂದ್ರ ಬಲ್ಲೂರ ವಂದಿಸಿದರು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X