ಕಲಬುರಗಿ | ಗ್ರಾಮೀಣ ಭಾಗದ ಮೂಲ ಸೌಲಭ್ಯಗಳಿಗೆ ಒತ್ತು : ಶಾಸಕ ಎಂ.ವೈ ಪಾಟೀಲ್

ಕಲಬುರಗಿ: 'ಮುಂಬರುವ ದಿನಗಳಲ್ಲಿ ಅಫಜಲಪುರ ವಿಧಾನಸಭಾ ಕ್ಷೇತ್ರದ ಗ್ರಾಮೀಣ ಭಾಗದ ಮೂಲ ಸೌಲಭ್ಯಗಳಾದ ರಸ್ತೆ, ಕುಡಿಯುವ ನೀರು, ಶಾಲೆ ಮತ್ತು ಶೌಚಾಲಯ ಮುಂತಾದ ಅವಶ್ಯಕ ಸೌಲಭ್ಯಗಳ ಅಭಿವೃದ್ಧಿಗೆ ಗಮನ ಕೊಡಲಾಗುವುದು' ಎಂದು ಶಾಸಕ ಎಂ ವೈ ಪಾಟೀಲ್ ಹೇಳಿದರು.
ಅಫಜಲಪುರ ತಾಲೂಕಿನ ಕೋಗನೂರು ಗ್ರಾಮದಲ್ಲಿ ಸುಮಾರು 1.93 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
'ಅಭಿವೃದ್ಧಿ ಕೆಲಸಗಳಿಗಾಗಿ ನನ್ನ ಮತ ಕ್ಷೇತ್ರಕ್ಕೆ ಸಾಕಷ್ಟು ಅನುದಾನ ತರಲಾಗಿದೆ. ಯಾವುದೇ ಕೆಲಸ ಕಾರ್ಯಗಳಿಗೆ ಅನುದಾನದ ಕೊರತೆ ಇಲ್ಲ. ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿಯೂ ಅಭಿವೃದ್ಧಿ ಕೆಲಸಗಳನ್ನು ನಿರಂತರ ನಡೆಸಿದ್ದೇವೆ' ಎಂದರು.
ಸಮಾರಂಭದಲ್ಲಿ ಕೋಗನೂರು ಗ್ರಾಮ ಪಂಚಾಯತ್ ಅಧ್ಯಕ್ಷ ಮಾಯಾದೇವಿ ಮಾಂಗ್, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಪ್ರಕಾಶ್ ಜಮಾದಾರ್, ಮುಖಂಡರಾದ ಚಂದ್ರಕಾಂತ್ ಪಾಟೀಲ್, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ವೀರಣ್ಣ ಕೌಲಗಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
Next Story





