Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಕೃಷಿ ಕ್ಷೇತ್ರದ ಪ್ರಗತಿಗೆ...

Kalaburagi | ಕೃಷಿ ಕ್ಷೇತ್ರದ ಪ್ರಗತಿಗೆ ಮಹಿಳೆಯರ ಸಬಲೀಕರಣ ಅಗತ್ಯ: ಡಾ.ಬಿ.ಎಂ.ದೊಡ್ಮನಿ

ವಾರ್ತಾಭಾರತಿವಾರ್ತಾಭಾರತಿ16 Oct 2026 6:38 PM IST
share
Kalaburagi | ಕೃಷಿ ಕ್ಷೇತ್ರದ ಪ್ರಗತಿಗೆ ಮಹಿಳೆಯರ ಸಬಲೀಕರಣ ಅಗತ್ಯ: ಡಾ.ಬಿ.ಎಂ.ದೊಡ್ಮನಿ

ಕಲಬುರಗಿ: ಬೀಜ ಬಿತ್ತನೆಯಿಂದ ಹಿಡಿದು ಕೊಯ್ಲಿನವರೆಗೆ ಕೃಷಿಯ ಪ್ರತಿಯೊಂದು ಹಂತದಲ್ಲೂ ಮಹಿಳೆಯರ ಪಾತ್ರ ಬಹುಮುಖ್ಯವಾಗಿದೆ. ಕೃಷಿ ಕ್ಷೇತ್ರದಲ್ಲಿ ಮಹಿಳೆಯರನ್ನು ನವೀನ ತಂತ್ರಜ್ಞಾನಗಳ ಮೂಲಕ ಸಬಲೀಕರಣಗೊಳಿಸುವುದು ಕೃಷಿಯ ಪ್ರಗತಿಗೆ ಪೂರಕವಾಗಿದೆ ಎಂದು ಐಸಿಎಆರ್‌-ಕೃಷಿ ವಿಜ್ಞಾನ ಕೇಂದ್ರದ ಕಲಬುರಗಿಯ ಡೀನ್ ಡಾ. ಬಿ.ಎಂ. ದೊಡ್ಮನಿ ಹೇಳಿದರು.

ನಗರದ ಐಸಿಎಆರ್‌-ಕೃಷಿ ವಿಜ್ಞಾನ ಕೇಂದ್ರದಲ್ಲಿ ಆಯೋಜಿಸಿದ್ದ ಕೃಷಿನಿರತ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕೃಷಿ ವಿಜ್ಞಾನ ಕೇಂದ್ರದ ಸಹ ವಿಸ್ತರಣಾ ನಿರ್ದೇಶಕ ಹಾಗೂ ಮುಖ್ಯಸ್ಥ ಡಾ. ರಾಜು ಜಿ. ತೆಗ್ಗಳ್ಳಿ ಮಾತನಾಡಿ, ರೈತ ಮಹಿಳೆಯರು ಕೃಷಿ ಚಟುವಟಿಕೆಗಳ ಜೊತೆಗೆ ಕೃಷಿ ಕೌಶಲಗಳನ್ನು ಬೆಳೆಸಿಕೊಳ್ಳಬೇಕು. ಇಂತಹ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ, ಲಭ್ಯವಿರುವ ಮಾಹಿತಿಯನ್ನು ಸದುಪಯೋಗಪಡಿಸಿಕೊಳ್ಳಬೇಕು. ಸುಸ್ಥಿರ ಕೃಷಿ ಪದ್ಧತಿಗಳನ್ನು ಅಳವಡಿಸಿಕೊಳ್ಳುವ ಮೂಲಕ ಆರ್ಥಿಕವಾಗಿ ಸದೃಢರಾಗಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡಿದ ಐವರು ಮಹಿಳೆಯರನ್ನು ಗೌರವಿಸಿ ಸನ್ಮಾನಿಸಲಾಯಿತು. ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ರಾಯಚೂರಿನಿಂದ ಶ್ರೇಷ್ಠ ಕೃಷಿ ಮಹಿಳೆ ಪ್ರಶಸ್ತಿ ಪಡೆದ ಆಳಂದ ತಾಲೂಕಿನ ದರ್ಗಾಶಿರೂರ ಗ್ರಾಮದ ಶಾಣಮ್ಮ, ಜಿಲ್ಲಾ ಮಟ್ಟದ ಉತ್ತಮ ಕೃಷಿಸಖಿ ಪ್ರಶಸ್ತಿ ಪಡೆದ ಮಾದನಹಿಪ್ಪರಗಾದ ಕನ್ಯಾಕುಮಾರಿ, ತರಕಾರಿ ಬೇಸಾಯದಲ್ಲಿ ಸಾಧನೆ ಮಾಡುತ್ತಿರುವ ಅಂಬಿಕಾ, ಕೃಷಿಸಖಿಯಾಗಿ ಕಾರ್ಯನಿರ್ವಹಿಸುವುದರ ಜೊತೆಗೆ ಸ್ವತಃ ಕೃಷಿಯಲ್ಲಿಯೂ ತೊಡಗಿಸಿಕೊಂಡಿರುವ ವಿಜಯಲಕ್ಷ್ಮಿ ಹಾಗೂ ಮೊಳಕೆಕಾಳುಗಳ ಮಾರುಕಟ್ಟೆಯಲ್ಲಿ ಯಶಸ್ಸು ಸಾಧಿಸಿರುವ ಕಲಬುರಗಿಯ ಅರ್ಚನಾ ಹಲಚೇರಾ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳಾದ ಡಾ. ಯುಸುಫ್ ಅಲಿ ನಿಂಬರಗಿ, ಡಾ. ಶ್ರೀನಿವಾಸ ಬಿ.ವಿ., ಡಾ. ರಾಹುಲ್ ಹಾಗೂ ಎಂ.ಸಿ. ಪಾಟೀಲ್ ಸೇರಿದಂತೆ ಸಿಬ್ಬಂದಿ ವರ್ಗದವರಾದ ನಾಗಣ್ಣ, ಶಶಿಕಲಾ, ನಾಗೀಂದ್ರ ಬಡದಾಳಿ, ಗಣೇಶ್ ಭೋಲೆ, ನಿರಂಜನ್ ಧನ್ನಿ, ಸೈದಪ್ಪ ನಾಟಿಕಾರ್, ಉಮಾಕಾಂತ್, ಮಹೇಶ್ ಹೂಗಾರ್, ವಿಜಯಕುಮಾರ್, ಸ್ವಾಮಿ ಹಾಗೂ ಉಷಾ ಉಪಸ್ಥಿತರಿದ್ದರು. ಕೃಷಿ ಮಹಾವಿದ್ಯಾಲಯ, ರಾಯಚೂರಿನ ಅಂತಿಮ ವರ್ಷದ ಬಿ.ಎಸ್ಸಿ. ವಿದ್ಯಾರ್ಥಿಗಳು ಮತ್ತು ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X