Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಪರಿಸರ ಸಂರಕ್ಷಣೆ ಎಲ್ಲರ...

Kalaburagi | ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ; ಸುಸ್ಥಿರ ಅಭಿವೃದ್ಧಿಗೆ ಸಾಮೂಹಿಕ ಪ್ರಯತ್ನ ಅಗತ್ಯ: ಪ್ರೊ.ಕೆ.ಪುರುಷೋತ್ತಮ್ ರೆಡ್ಡಿ

‘ಪರಿಸರ ಮತ್ತು ಸುಸ್ಥಿರ ಅಭಿವೃದ್ಧಿ’ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ22 Sept 2026 6:28 PM IST
share
Kalaburagi | ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ; ಸುಸ್ಥಿರ ಅಭಿವೃದ್ಧಿಗೆ ಸಾಮೂಹಿಕ ಪ್ರಯತ್ನ ಅಗತ್ಯ: ಪ್ರೊ.ಕೆ.ಪುರುಷೋತ್ತಮ್ ರೆಡ್ಡಿ

ಕಲಬುರಗಿ: ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದ್ದು, ಮುಂದಿನ ಪೀಳಿಗೆಗಾಗಿ ನೈಸರ್ಗಿಕ ಸಂಪನ್ಮೂಲಗಳನ್ನು ಉಳಿಸಿ ಬೆಳೆಸಲು ಸಾಮೂಹಿಕ ಪ್ರಯತ್ನ ಅಗತ್ಯವಾಗಿದೆ ಎಂದು ಹೈದರಾಬಾದ್‌ನ ಉಸ್ಮಾನಿಯಾ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಪ್ರೊ.ಕೆ.ಪುರುಷೋತ್ತಮ್ ರೆಡ್ಡಿ ಹೇಳಿದರು.

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ (ಸಿಯುಕೆ) ವತಿಯಿಂದ ‘ಸ್ವಚ್ಛತಾ ಹೀ ಸೇವಾ–2026’ ಅಭಿಯಾನದ ಅಂಗವಾಗಿ ಆಯೋಜಿಸಿದ್ದ ‘ಪರಿಸರ ಮತ್ತು ಸುಸ್ಥಿರ ಅಭಿವೃದ್ಧಿ’ ಕುರಿತ ವಿಶೇಷ ಉಪನ್ಯಾಸದಲ್ಲಿ ಅವರು ಮಾತನಾಡಿದರು.

ಹವಾಮಾನ ಬದಲಾವಣೆ, ಹೆಚ್ಚುತ್ತಿರುವ ತಾಪಮಾನ ಮತ್ತು ಆರ್ದ್ರತೆ, ಜೀವವೈವಿಧ್ಯದ ನಷ್ಟ ಹಾಗೂ ಹೆಚ್ಚುತ್ತಿರುವ ಮಾಲಿನ್ಯ ಇಂದಿನ ಗಂಭೀರ ಪರಿಸರ ಸವಾಲುಗಳಾಗಿವೆ ಎಂದು ಅವರು ಹೇಳಿದರು. ವಿಶೇಷವಾಗಿ ನಗರ ಪ್ರದೇಶಗಳಲ್ಲಿ ಪರಿಸರ ಮಾಲಿನ್ಯ ಹೆಚ್ಚುತ್ತಿರುವುದು ಮಾನವನ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಎಚ್ಚರಿಸಿದರು.

ಪರಿಸರ ಸಂರಕ್ಷಣೆ ಮತ್ತು ಸುಸ್ಥಿರ ಅಭಿವೃದ್ಧಿಗಾಗಿ ಹಸಿರು ಕಟ್ಟಡಗಳು, ಹಸಿರು ವಾಸ್ತುಶಿಲ್ಪ, ಮರುಬಳಕೆ, ಪುನರ್ಬಳಕೆ ಹಾಗೂ ಸುಸ್ಥಿರ ತಂತ್ರಜ್ಞಾನಗಳ ಅಳವಡಿಕೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಅವರು ಸಲಹೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಿಯುಕೆ ಕುಲಪತಿ ಪ್ರೊ. ಬಟ್ಟು ಸತ್ಯನಾರಾಯಣ ಮಾತನಾಡಿ, ವಿದ್ಯಾರ್ಥಿಗಳು ಕೇವಲ ಶೈಕ್ಷಣಿಕ ಚಟುವಟಿಕೆಗಳಿಗೆ ಸೀಮಿತವಾಗದೆ ಪರಿಸರ ಸಂರಕ್ಷಣೆ ಹಾಗೂ ಸುಸ್ಥಿರ ಅಭಿವೃದ್ಧಿಗೆ ಸಕ್ರಿಯವಾಗಿ ಕೊಡುಗೆ ನೀಡಬೇಕು ಎಂದು ಕರೆ ನೀಡಿದರು.

ನೀರು, ಅರಣ್ಯ, ಗಾಳಿ ಮತ್ತು ಮಣ್ಣು ಮಾನವ ಚಟುವಟಿಕೆಗಳಿಂದ ತೀವ್ರವಾಗಿ ಬಾಧಿತವಾಗುತ್ತಿವೆ. “ಇಂದು ನಾವು ಕುಡಿಯುವ ನೀರನ್ನು ಖರೀದಿಸುತ್ತಿದ್ದೇವೆ. ಜವಾಬ್ದಾರಿಯುತವಾಗಿ ವರ್ತಿಸಲು ವಿಫಲವಾದರೆ ಮುಂದೊಂದು ದಿನ ಆಮ್ಲಜನಕವನ್ನೂ ಖರೀದಿಸಬೇಕಾದ ಪರಿಸ್ಥಿತಿ ಎದುರಾಗಬಹುದು,” ಎಂದು ಅವರು ಎಚ್ಚರಿಸಿದರು.

‘ಸ್ವಚ್ಛತಾ ಹೀ ಸೇವಾ’ ಕಾರ್ಯಕ್ರಮದ ಸಂಯೋಜಕರು ಹಾಗೂ ನೋಡಲ್ ಅಧಿಕಾರಿ ಡಾ. ಗಣಪತಿ ಬಿ. ಸಿನ್ನೂರು ಸ್ವಾಗತಿಸಿದರು. ಡಾ. ವೈಷ್ಣವಿ ನಾರಾಯಣಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಪ್ರೊ. ಬಸವರಾಜ ಕುಬಕಡ್ಡಿ, ಪ್ರೊ. ಪಾಂಡುರಂಗ ಪತ್ತಿ, ಪ್ರೊ.ಮುಹಮ್ಮದ್ ಅಸ್ಲಂ, ಪ್ರೊ. ಪ್ರಶಾಂತ್, ಪ್ರೊ. ದೇವರಾಜಪ್ಪ, ಡಾ. ರಂಗನಾಥ್ ಜಿ., ಡಾ. ಗೋವಿನಲ್ಲು ಮಹೇಂದ್ರ ರೆಡ್ಡಿ, ಡಾ. ಅರ್ಚನಾ ಕುಜೂರು, ಡಾ. ಅಶೋಕ್ ಕುಮಾರ್, ಡಾ. ಬಾಬು ನಲ್ಲಸ್ವಾಮಿ, ಡಾ. ತೇಜಸ್ವಿ ಲಕ್ಕುಂಡಿ, ಡಾ. ಅನಂತ ಚಿಂಚುರೆ, ಡಾ. ಶಶಿರೇಖಾ ಮಾಳಗಿ, ಡಾ. ಜಗದೀಶ್ ಚಂದ್ರ ಸೇರಿದಂತೆ ವಿವಿಧ ವಿಭಾಗಗಳ ಡೀನ್‌ಗಳು, ವಿಭಾಗ ಮುಖ್ಯಸ್ಥರು, ಬೋಧಕ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Tags

EnvironmentalKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X