Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಮಹಿಳಾ ಅಸ್ಮಿತೆಗೆ ಸಮಾನತೆ...

ಕಲಬುರಗಿ | ಮಹಿಳಾ ಅಸ್ಮಿತೆಗೆ ಸಮಾನತೆ ಅವಶ್ಯ : ಡಾ.ಸಾರಿಕಾದೇವಿ ಕಾಳಗಿ

ಜಿಲ್ಲಾ ಕಸಾಪ ದಿಂದ ಗುರು ಸಾವಿತ್ರಿ ಪ್ರಶಸ್ತಿ ಪ್ರದಾನ

ವಾರ್ತಾಭಾರತಿವಾರ್ತಾಭಾರತಿ9 March 2025 7:33 PM IST
share
Photo of Program

ಕಲಬುರಗಿ : ಸಮಾಜದಲ್ಲಿನ ಲಿಂಗ ತಾರತಮ್ಯ ನಿವಾರಣೆಗೆ ಕಾನೂನುಗಳ ಪರಿಪಾಲನೆ ಬೇಕು. ಇಂದು ಮಹಿಳಾ ಅಸ್ಮಿತೆಗಾಗಿ ಸಮಾನತೆ ಬಹಳ ಅವಶ್ಯಕವಾಗಿದೆ ಎಂದು ಶರಣಬಸವ ವಿಶ್ವವಿದ್ಯಾಲಯದ ಪ್ರಾಧ್ಯಾಪಕಿ ಡಾ.ಸಾರಿಕಾದೇವಿ ಕಾಳಗಿ ಹೇಳಿದರು.

ಅಂತರ್‌ ರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಅಕ್ಷರದವ್ವ ಸಾವಿತ್ರಿಬಾಯಿ ಫುಲೆ ಜಯಂತಿ ಪ್ರಯುಕ್ತ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ನಗರದ ಕನ್ನಡ ಭವನದಲ್ಲಿ ರವಿವಾರ ಏರ್ಪಡಿಸಿದ ಗುರು ಸಾವಿತ್ರಿ-2025 ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಇಂದು ಸಮ ಸಮಾಜ ಕಟ್ಟಲು ಮಹಿಳಾ ಸಮುದಾಯಕ್ಕೆ ಶಿಕ್ಷಣದ ಅವಕಾಶಗಳು ಹೆಚ್ಚಾಗಿ ದೊರೆಯಬೇಕು,. ಪುರುಷ ಸಮಾಜದಲ್ಲಿ ಸ್ತ್ರೀಯತರಿಗೆ ಅಕ್ಷರದವ್ವ ಸಾವಿತ್ರಿಬಾಯಿ ಫುಲೆ ಅವರ ಆದರ್ಶ ಹಾಗೂ ಹೋರಾಟದ ಮಾರ್ಗಗಳು ಎಲ್ಲರಿಗೂ ಪ್ರೇರಣೆಯಾಗಿವೆ. ಇಂಥ ಸಾಧನೆಯ ಹಿಂದೆ ಜ್ಯೋತಿಬಾ ಫುಲೆ ಅವರ ಶಕ್ತಿ ಮುಖ್ಯವಾಗಿತ್ತು ಎಂದರು.

ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಮಾತನಾಡಿ, ಶಿಕ್ಷಣವೆಂದರೆ ತಿಳಿಯದ, ಅಕ್ಷರಗಳೆಂದರೆ ಗೊತ್ತಿಲ್ಲದ ಕಾಲದಲ್ಲಿ ಶಾಲೆಗಳನ್ನು ತೆರೆದು ಭಾರತದಲ್ಲಿ ಅಕ್ಷರ ಕ್ರಾಂತಿ ಆರಂಭಿಸಿದ ಮೊದಲ ಮಹಿಳೆ ಅಕ್ಷರದವ್ವ ಸಾವಿತ್ರಿಬಾಯಿ ಫುಲೆಯವರಾಗಿದ್ದಾರೆ. ಮಹಿಳಾ ಶಿಕ್ಷಣ, ಮಹಿಳಾ ಹಕ್ಕುಗಳು ಹೀಗೆ ಮಹಿಳಾ ಶೋಷಿತರ ಪರ ಹಲವಾರು ಸುಧಾರಣೆಯ ಕನಸುಗಳನ್ನು ಹೊತ್ತ ಸಾವಿತ್ರಿಬಾಯಿ ಫುಲೆ ಇಂದು ನಮ್ಮ ಮಧ್ಯದಲ್ಲಿ ದೈಹಿಕವಾಗಿ ಇಲ್ಲದಿದ್ದರೂ ಮಹಿಳಾ ಮತ್ತು ಶೋಷಿತ ಸಮುದಾಯದ ಧ್ವನಿಯಾಗಿ ಅವರು ಇಂದಿಗೂ ಜೀವಂತವಾಗಿದ್ದಾರೆ ಎಂದು ಹೇಳಿದರು.

ಸಮಾಜ ಅಸಮಾನತೆಯಲ್ಲಿ ಬಳಲುತ್ತಾ ಕ್ಲಿಷ್ಟಕರ ಸನ್ನಿವೇಶದಲ್ಲಿದ್ದಾಗ ಹೆಣ್ಣು ಮಕ್ಕಳಿಗೆ ಶಿಕ್ಷಣವನ್ನು ನಿರಾಕರಿಸಿದ್ದ ಕಾಲಘಟ್ಟದಲ್ಲಿ ಶೋಷಿತರಿಗೆ ಅಕ್ಷರದ ಬೆಳಕು ನೀಡಿದ ಮೊದಲ ಶಿಕ್ಷಕಿ ಸಾವಿತ್ರಿಬಾಯಿ ಫುಲೆ ಯವರಾಗಿದ್ದು, ಇಂಥ ಮಹಾನ್ ಸಮಾಜ ಸುಧಾರಕರನ್ನು ನೆನೆಯುವ ಮತ್ತು ಹೊಸ ಪೀಳಿಗೆಗೆ ಪರಿಚಯಿಸುವ ಕಾರ್ಯ ಪರಿಷತ್ತು ಮಾಡುತ್ತಿದೆ ಎಂದು ಹೇಳಿದರು.

ನಾಲ್ಕನೇ ಹೆಚ್ಚುವರಿ ಕಿರಿಯ ನ್ಯಾಯಾಲಯದ ನ್ಯಾಯಾಧೀಶೆ ಸ್ನೇಹಾ ಪಾಟೀಲ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷೆ ಮಾಲತಿ ರೇಷ್ಮಿ ಮಾತನಾಡಿದರು. ಜಿಲ್ಲಾ ಕಸಾಪ ದ ಗೌರವ ಕಾರ್ಯದರ್ಶಿಗಳಾದ ಶಿವರಾಜ ಅಂಡಗಿ, ಧರ್ಮಣ್ಣ ಎಚ್. ದನ್ನಿ, ಕೋಶಾಧ್ಯಕ್ಷ ಶರಣರಾಜ ಛಪ್ಪರಬಂದಿ, ಮಹಿಳಾ ಪ್ರತಿನಿಧಿಗಳಾದ ಶಕುಂತಲಾ ಪಾಟೀಲ ಜಾವಳಿ, ಜ್ಯೋತಿ ಕೋಟನೂರ, ರವೀಂದ್ರಕುಮಾರ ಭಂಟನಳ್ಳಿ, ರಾಜೇಂದ್ರ ಮಾಡಬೂಳ, ರಮೇಶ ಡಿ ಬಡಿಗೇರ ವೇದಿಕೆ ಮೇಲಿದ್ದರು.

ವಿವಿಧ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಮಹಾಂತೇಶ ಕುಂಬಾರ, ರೇಣುಕಾ ಸರಡಗಿ, ನೀಲಮ್ಮ ಮಾಲಿಪಾಟೀಲ, ಗೀತಾ ಭರಣಿ, ಶಹೆನಾಜ್ ಬೇಗಂ, ಗೋಪಾಲರೆಡ್ಡಿ, ಶಿವಪುತ್ರ ಗುಡ್ಡದ್, ಕವಿತಾ ಶೀಲವಂತ, ಸುರೇಖಾ ಬಮನಳ್ಳಿ, ಅನ್ನಪೂರ್ಣ ನೈಕೋಡಿ, ಲಿಂಗರಾಜ ಪಾಟೀಲ, ಬಿಜಾನಬಿ ಅಬ್ದುಲ್ ನಬಿ ಅವರನ್ನು ಗುರು ಸಾವಿತ್ರಿ ಪ್ರಶಸ್ತಿಯನ್ನು ನೀಡಿ ಸತ್ಕರಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X