Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ| ಇ.ಎಸ್.ಐ.ಸಿ ಆಸ್ಪತ್ರೆ ಸೇವೆ...

ಕಲಬುರಗಿ| ಇ.ಎಸ್.ಐ.ಸಿ ಆಸ್ಪತ್ರೆ ಸೇವೆ ಇನ್ಮುಂದೆ ಅಸಂಘಟಿಕ ಕಾರ್ಮಿಕರಿಗೂ ಲಭ್ಯ: ಶೋಭಾ ಕರಂದ್ಲಾಜೆ

ವಾರ್ತಾಭಾರತಿವಾರ್ತಾಭಾರತಿ23 Dec 2025 3:10 PM IST
share
ಕಲಬುರಗಿ| ಇ.ಎಸ್.ಐ.ಸಿ ಆಸ್ಪತ್ರೆ ಸೇವೆ ಇನ್ಮುಂದೆ ಅಸಂಘಟಿಕ ಕಾರ್ಮಿಕರಿಗೂ ಲಭ್ಯ: ಶೋಭಾ ಕರಂದ್ಲಾಜೆ

ಕಲಬುರಗಿ: ದೇಶದಲ್ಲಿ ಪ್ರಸ್ತುತ ಇರುವ ಇ.ಎಸ್.ಐ.ಸಿ ಆಸ್ಪತ್ರೆಯಲ್ಲಿ ಸಂಘಟಿತ ಕಾರ್ಮಿಕರಿಗೆ ಮತ್ತು ಅವರ ಅವಲಂಭಿಕತರಿಗೆ ಉಚಿತ ಸೇವೆ ನೀಡುತ್ತಿದ್ದು, ಇನ್ಮುಂದೆ ಕೃಷಿ, ಗಿಗ್, ಗಾರ್ಮೆಂಟ್ಸ ಸೇರಿದಂತೆ ಅಸಂಘಟಿತ ಕಾರ್ಮಿಕ ವರ್ಗದವರಿಗೂ ಇ.ಎಸ್.ಐ.ಸಿ ಆಸ್ಪತ್ರೆ ಸೇವೆ ಉಚಿತವಾಗಿ ಲಭ್ಯವಾಗಲಿದೆ ಎಂದು ಕೇಂದ್ರದ ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

ಮಂಗಳವಾರ ಇ.ಎಸ್.ಐ.ಸಿ ಕಾಲೇಜ್ ಆಡಿಟೋರಿಯಂನಲ್ಲಿ ಆಯೋಜಿಸಿದಕ್ರೀಡಾ ಸಂಕೀರ್ಣ, ಮೇಲ್ಛಾವಣಿಯ ಸೌರ ವಿದ್ಯುತ್ ವ್ಯವಸ್ಥೆ ಮತ್ತು ಅಂತರ್ಜಲ ಮರುಪೂರಣ ಸೌಲಭ್ಯ ಉದ್ಘಾಟಿಸಿ ಮಾತನಾಡಿದ‌ ಅವರು, ಸಂಘಟಿತ ಮತ್ತು ಅಸಂಘಟಿತ ಶ್ರಮಿಕ ವರ್ಗಕ್ಕೆ ಸಾಮಾಜಿಕ ಭದ್ರತೆ ಒದಗಿಸಬೇಕೆಂಬ ಪ್ರಧಾನಮಂತ್ರಿಗಳ ಇಚ್ಛಾಶಕ್ತಿಯಂತೆ ಇಂತಹ ನಿರ್ಧಾರ ತೆಗೆದುಕೊಳ್ಳಲಾಗಿದೆ‌ ಎಂದರು.

ಕಲಬುರಗಿಯ ಇ.ಎಸ್.ಐ.ಸಿ ಕಾಲೇಜು 560 ಹಾಸಿಗೆಯ ಆಸ್ಪತ್ರೆಯಾಗಿದ್ದು, ಕೇವಲ್ ಐ.ಪಿ., ಸಂಘಟಿತ ಕಾರ್ಮಿಕ ವರ್ಗಕ್ಕೆ‌ ಸೀಮಿತವಾಗಿದ್ದರಿಂದ ಪೂರ್ಣ ಪ್ರಮಾಣ ಹಾಸಿಗೆ ಭರದತಿಯಾಗುತ್ತಿಲ್ಲ. ಹೀಗಸಗಿ ಸಿ.ಜಿ.ಎಚ್.ಎಸ್ ಯೋಜನೆ ಈ ಆಸ್ಪತ್ರೆಗೆ ವಿಸ್ತರಣೆ ಹೀಗಿದ್ದಾಗಿಯೂ ಶೇ.50ಕ್ಕಿಂತ ಹೆಚ್ಚಿನ ಬೆಡ್ ತುಂಬುತ್ತಿಲ್ಲ ಎಂದರು.

ಕಾರ್ಮಿಕ ಮಕ್ಕಳಿಗೆ ಅನುಕೂಲವಾಗಲೆಂದೇ ದೇಶದಾದ್ಯಂತ 10 ಮೆಡಿಕಲ್ ಜಾಲೇಜು ತೆರೆಯಲಾಗುತ್ತಿದೆ. ಅದರೆ ಕರ್ನಾಟಕದಲ್ಲಿ ಪ್ರಸ್ತುತ ಎರಡು ಇ.ಎಸ್.ಐ.ಸಿ ಮೆಡಿಕಲ್ ಕಾಲೇಜು ಇರುವುದರಿಂದ ಹೊಸ ಕಾಲೇಜಿಗೆ ಪ್ರಸ್ತಾವನೆ ಇಲ್ಲ ಎಂದ ಅವರು, ಬ್ರಿಟೀಷ್ ಕಾಲದಿಂದ ಬಂದಿದ್ದ 27 ವಿವಿಧ ಕಾಯ್ದೆಗಳನ್ನು ರದ್ದುಪಡಿಸಿ ಹೊಸದಾಗಿ 4 ಕಾರ್ಮಿಕ ಕಾಯ್ದೆ ರೂಪಿಸಿದ್ದು, ಅದು ಕಾರ್ಮಿಕರ ಹಿತ ಕಾಯಲಿದೆ ಎಂದರು.

ಇಂದಿಲ್ಲಿ ಜಿಮ್, ವಾಲಿಬಾಲ್, ಕ್ರಿಕೆಟ್ ಮೈದಾನ ತುಂಬಾ ಸಂತೋಷದಿಂದ ಉದ್ಘಾಟಿಸಿದ್ದೇನೆ. ಶಿಕ್ಷಣದ ಜೊತೆದೆ ವ್ಯಕ್ತಿ ವಿಕಸನಕ್ಕೆ ಕ್ರೀಡೆಗಳು ಸಹಕಾರಿಯಾಗಿದೆ. ವಿದ್ಯಾರ್ಥಿಗಳು ಮಾನಸಿಕ ಮತ್ತು ದೈಹಿತ ಸದೃಢತೆಗೆ ಯೋಗ ಮಾಡಬೇಕು ಎಂದು ಸಲಹೆ ನೀಡಿದರು.

ವಿದ್ಯಾರ್ಥಿಗಳೊಂದಿಗೆ ಸಂವಾದ,ಸಿ.ಟಿ-ಸ್ಕ್ಯಾನ್, ಎಂ.ಆರ್.ಐ. ಯಂತ್ರೋಪಕರಣಗಳ ಭರವಸೆ

ಶೋಭಾ ಕರಂದ್ಲಾಜೆ ಅವರು ವೈದ್ಯ, ಪ್ಯಾರಾ ಮೆಡಿಕಲ್, ನರ್ಸಿಂಗ್ ಸೇರಿದಂತೆ ಎಲ್ಲಾ ವರ್ಗದ ವಿದ್ಯಾರ್ಥಿಗಳ ಮತ್ತು ಸಿಬ್ಬಂದಿಗಳೊಮದುಗೆ ಸಮವಾದ ನಡೆಸಿ ಅವರ ಕುಂದುಕೊರತೆ ಅಹವಾಲು ಆಲಿಸಿದರು. ಸಿ.ಟಿ.ಸ್ಕ್ಯಾನ್, ಎಂ.ಆರ್.ಮಶೀನ್, ಕಾಲೇಜಿಗೆ ಸ್ವಂತ ಬಸ್, ನರ್ಸಿಂಗ್ ವಿದ್ಯಾರ್ಥಿಗಳಿಗೆ ಸ್ಟೆಫಂಡ್ ಸೇರಿದಂತೆ ಅನೇಕ‌ ಸಮಸ್ಯೆಗಳು ಸಚಿವರ ಮುಂದಿಟ್ಟರು. .ಟಿ-ಸ್ಕ್ಯಾನ್, ಎಂ.ಆರ್.ಐ. ಯಂತ್ರೋಪಕರಣಗಳ ಶೀಘ್ರವೇ ಒದಗಿಲಾಗುವುದು ಎಂದು‌ ಭರವಸೆ ನೀಡಿದರು.

ಇ.ಎಸ್.ಐ.ಸಿ ಮೆಡಿಕಲ್ ಕಾಲೇಜಿನ ಡೀನ್ ಡಾ.ಕ್ಷೀರಸಾಗರ ಪ್ರಸ್ತಾವಿಕವಾಗಿ ಮಾತನಾಡಿ, ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಕಾಲೇಜು ಪೂರಕ ಕಾರ್ಯಕ್ರಮಗಳು ಹಾಕಿಕೊಂಡಿದೆ. ವಿಶೇಷವಾಗಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಶೈಕ್ಷಣಿಕ ಮತ್ತು ಅಸ್ಪತ್ತೆ ಗುಣಮಟ್ಟದ ಸೇವೆ ಒದಗಿಸಲು ಶ್ರಮಿಸಲಾಗುತ್ತಿದೆ ಎಂದರು.

ಕಲಬುರಗಿ ಗ್ರಾಮೀಣ ಶಾಸಕ ಬಸವರಾಜ ಮತ್ತಿಮೂಡ, ವಿಧಾನ ಪರಿಷತ್ ಶಾಸಕ ಬಿ.ಜಿ.ಪಾಟೀಲ, ಮಾಜಿ ಶಾಸಕ ದತ್ತಾತ್ರೇಯ ಪಾಟೀಲ ರೇವೂರ, ಇ.ಎಸ್.ಐ.ಸಿ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಕಡ್ಲಿಮಟ್ಟಿ, ಉಪ ವೈದ್ಯಕೀಯ ಅಧೀಕ್ಷಕ ಡಾ.ಪದ್ಮಜಾ ಇ.ಎಸ್.ಐ.ಸಿ ಜಂಟಿ‌ ನಿರ್ದೇಶಕ ಎಸ್.ವಿ.ಯುವರಾಜ, ಪ್ರಾದೇಶಿಕ ನಿರ್ದೇಶಕ ಎಂ.ಸುಬ್ರಮಣ್ಯಮ್, ಮುಖಂಡರಾದ ಶಿವರಾಜ ಪಾಟೀಲ ರದ್ದೆವಾಡಗಿ, ಮಹಾದೇವ ಬೆಳಗುಂಪಿ ಸೇರಿದಂತೆ ಬೋಧಕ-ಬೋಧಕೇತರ ವೃಂದ, ವಿದ್ಯಾರ್ಥಿಗಳು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X