Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ರೈತರ ಸಮಗ್ರ ಅಭಿವೃದ್ಧಿಗೆ...

Kalaburagi | ರೈತರ ಸಮಗ್ರ ಅಭಿವೃದ್ಧಿಗೆ ಗ್ರಾಮೀಣ ನಾವೀನ್ಯ ಕೇಂದ್ರಗಳ ಸ್ಥಾಪನೆ: ಎರಡು ಸಂಸ್ಥೆಗಳಿಂದ ಒಪ್ಪಂದ

ಸಾಜಿದ್‌ ಅಲಿ/ವಾರ್ತಾಭಾರತಿಸಾಜಿದ್‌ ಅಲಿ/ವಾರ್ತಾಭಾರತಿ27 Nov 2026 8:23 PM IST
share
Kalaburagi | ರೈತರ ಸಮಗ್ರ ಅಭಿವೃದ್ಧಿಗೆ ಗ್ರಾಮೀಣ ನಾವೀನ್ಯ ಕೇಂದ್ರಗಳ ಸ್ಥಾಪನೆ: ಎರಡು ಸಂಸ್ಥೆಗಳಿಂದ ಒಪ್ಪಂದ

ಕಲಬುರಗಿ: ರೈತರ ಸಮಗ್ರ ಅಭಿವೃದ್ಧಿ ಹಾಗೂ ಗ್ರಾಮೀಣ ಜನರ ಜೀವನಮಟ್ಟ ಸುಧಾರಿಸುವ ಉದ್ದೇಶದಿಂದ ಕೃಷಿ, ಆರೋಗ್ಯ, ಶಿಕ್ಷಣ, ಕೌಶಲ ತರಬೇತಿ, ಉದ್ಯೋಗ ಮತ್ತು ಉದ್ಯಮಶೀಲತೆಗೆ ಸಂಬಂಧಿಸಿದ ಸೇವೆಗಳನ್ನು ಒಂದೇ ಸೂರಿನಡಿ ಒದಗಿಸುವ ಗ್ರಾಮೀಣ ನಾವೀನ್ಯ ಕೇಂದ್ರಗಳನ್ನು ಸ್ಥಾಪಿಸಲು ಶ್ರೀ ಸತ್ಯ ಸಾಯಿ ಮಾನವಾಭ್ಯುದಯ ವಿಶ್ವವಿದ್ಯಾಲಯ (SSSUHE) ಹಾಗೂ ಬೀಯಿಂಗ್ ಫಾರ್ಮರ್ ಫೌಂಡೇಷನ್ ಒಪ್ಪಂದ ಮಾಡಿಕೊಂಡಿವೆ.

ಮುದ್ದೇನಹಳ್ಳಿಯ ಸತ್ಯ ಸಾಯಿ ಗ್ರಾಮದಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಬೀಯಿಂಗ್ ಫಾರ್ಮರ್ ಫೌಂಡೇಷನ್ ಪರವಾಗಿ ಸಾಂಬಶಿವರೆಡ್ಡಿ ಶ್ರೀನಿವಾಸ ಬಾಲಾಜಿ ಹಾಗೂ ವಿಶ್ವವಿದ್ಯಾಲಯದ ಪರವಾಗಿ ಕುಲಪತಿ ಪ್ರೊ. ಶ್ರೀಕಂಠ ಮೂರ್ತಿ ಕೆ. ಒಪ್ಪಂದಕ್ಕೆ ಸಹಿ ಹಾಕಿದರು. ಒನ್ ವರ್ಲ್ಡ್ ಒನ್ ಫ್ಯಾಮಿಲಿ ಮಿಷನ್ ಸಂಸ್ಥಾಪಕ ಸದ್ಗುರು ಶ್ರೀ ಮಧುಸೂದನ ಸಾಯಿ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರ ಖಂಡ್ರೆ ಉಪಸ್ಥಿತರಿದ್ದರು.

ಗ್ರಾಮೀಣ ಪ್ರದೇಶದ ರೈತರು ಮತ್ತು ಜನರಿಗೆ ಕೃಷಿ, ಆರೋಗ್ಯ, ಶಿಕ್ಷಣ, ಉದ್ಯೋಗ ಹಾಗೂ ಉದ್ಯಮಕ್ಕೆ ಸಂಬಂಧಿಸಿದ ಸೇವೆಗಳನ್ನು ಸುಲಭವಾಗಿ ತಲುಪಿಸುವುದು ಈ ಕೇಂದ್ರಗಳ ಪ್ರಮುಖ ಉದ್ದೇಶವಾಗಿದೆ. ಮುಂದಿನ ದಿನಗಳಲ್ಲಿ ಅಂತಾರಾಷ್ಟ್ರೀಯ ಕೃಷಿ ವಿಶ್ವವಿದ್ಯಾಲಯ ಹಾಗೂ ಜಾಗತಿಕ ಕೃಷಿ ನಾವೀನ್ಯ ಕೇಂದ್ರ ಸ್ಥಾಪಿಸುವ ನಿಟ್ಟಿನಲ್ಲಿಯೂ ಎರಡೂ ಸಂಸ್ಥೆಗಳು ಸಹಭಾಗಿತ್ವದಲ್ಲಿ ಕಾರ್ಯನಿರ್ವಹಿಸಲಿವೆ ಎಂದು ಕುಲಪತಿ ಪ್ರೊ. ಶ್ರೀಕಂಠ ಮೂರ್ತಿ ತಿಳಿಸಿದರು.

ಕೇಂದ್ರಗಳಲ್ಲಿ ಕೃಷಿ ಮತ್ತು ಆಹಾರ ಉತ್ಪನ್ನಗಳ ಅಭಿವೃದ್ಧಿ, ಆಧುನಿಕ ಕೃಷಿ ಪದ್ಧತಿಗಳ ತರಬೇತಿ, ಕೌಶಲ ಅಭಿವೃದ್ಧಿ, ಉದ್ಯೋಗ ಮಾಹಿತಿ ಹಾಗೂ ರೈತ ಸೇವಾ ಕೇಂದ್ರಗಳನ್ನು ಆರಂಭಿಸಲಾಗುತ್ತದೆ. ರೈತರು ತಮ್ಮ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ಕಂಡುಕೊಳ್ಳಲು ಆನ್‌ಲೈನ್ ಮಾರಾಟ ವ್ಯವಸ್ಥೆಯನ್ನೂ ರೂಪಿಸಲಾಗುತ್ತದೆ. ಕೃಷಿ ಉತ್ಪಾದನೆ ಮತ್ತು ಮೌಲ್ಯವರ್ಧನೆಗೆ ಉತ್ತೇಜನ ನೀಡುವ ಮೂಲಕ ರೈತರ ಆರ್ಥಿಕ ಸಬಲೀಕರಣಕ್ಕೆ ಒತ್ತು ನೀಡಲಾಗುತ್ತದೆ.

ಇದರ ಜತೆಗೆ ಗ್ರಾಮೀಣ ಜನರ ಆರೋಗ್ಯ ರಕ್ಷಣೆಗಾಗಿ ಸಾಯಿ ಸ್ವಾಸ್ಥ್ಯ ಕೇಂದ್ರ ಹಾಗೂ ತುರ್ತು ಚಿಕಿತ್ಸಾ ಸೌಲಭ್ಯ ಕಲ್ಪಿಸುವ ಯೋಜನೆಯಿದೆ. ಹಿರಿಯ ನಾಗರಿಕರಿಗೆ ಕೈಗೆಟುಕುವ ದರದಲ್ಲಿ ವಸತಿ ಮತ್ತು ಆರೈಕೆ ವ್ಯವಸ್ಥೆ ರೂಪಿಸುವ ಉದ್ದೇಶವೂ ಈ ಯೋಜನೆಯಲ್ಲಿದೆ.

ಬೀಯಿಂಗ್ ಫಾರ್ಮರ್ ಫೌಂಡೇಷನ್ ಕೃಷಿ ತರಬೇತಿ, ಉದ್ಯಮಶೀಲತೆ ಹಾಗೂ ವಿವಿಧ ಯೋಜನೆಗಳಿಗೆ ದಾನಿಗಳ ಮೂಲಕ ಹಣಕಾಸಿನ ನೆರವು ಒದಗಿಸಲಿದೆ. ವಿಶ್ವವಿದ್ಯಾಲಯವು ಕೇಂದ್ರಗಳ ನಿರ್ವಹಣೆ, ಸಿಬ್ಬಂದಿ ನೇಮಕ, ತರಬೇತಿ ಮತ್ತು ಶೈಕ್ಷಣಿಕ ಸಹಕಾರದ ಜವಾಬ್ದಾರಿಯನ್ನು ನಿರ್ವಹಿಸಲಿದೆ.

Tags

KalaburagiFarmers
share
ಸಾಜಿದ್‌ ಅಲಿ/ವಾರ್ತಾಭಾರತಿ
ಸಾಜಿದ್‌ ಅಲಿ/ವಾರ್ತಾಭಾರತಿ

ಸಾಜಿದ್ ಅಲಿ ಅವರು 12 ವರ್ಷಗಳ ಪತ್ರಿಕೋದ್ಯಮ ಅನುಭವ ಹೊಂದಿದ್ದಾರೆ. ವಾರ್ತಾಭಾರತಿ ಮಂಗಳೂರು ಡೆಸ್ಕ್ ಸೇರಿದಂತೆ ವಿವಿಧ ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸಿರುವ ಇವರು, ಕಳೆದ ಏಳು ವರ್ಷಗಳಿಂದ ವಾರ್ತಾಭಾರತಿ ಡಿಜಿಟಲ್ ವೆಬ್‌ಸೈಟ್‌ನ ಕಲಬುರಗಿ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ಜಿಲ್ಲಾ ವರದಿಗಾರರಾಗಿ ಹಾಗೂ ಕಲ್ಯಾಣ ಕರ್ನಾಟಕ ವಿಭಾಗದ ಕೋಆರ್ಡಿನೇಟರ್ ಆಗಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ

Next Story
X