Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಕೌಟುಂಬಿಕ ಕಲಹ :...

Kalaburagi | ಕೌಟುಂಬಿಕ ಕಲಹ : ಮಗುವಿನೊಂದಿಗೆ ಗರ್ಭಿಣಿ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

ವಾರ್ತಾಭಾರತಿವಾರ್ತಾಭಾರತಿ25 Jun 2026 9:41 PM IST
share
Kalaburagi | ಕೌಟುಂಬಿಕ ಕಲಹ : ಮಗುವಿನೊಂದಿಗೆ ಗರ್ಭಿಣಿ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

ಕಲಬುರಗಿ: ಕೌಟುಂಬಿಕ ಕಲಹದ ಹಿನ್ನೆಲೆ ಗರ್ಭಿಣಿ ಮಹಿಳೆಯೊಬ್ಬರು ತಮ್ಮ ಒಂದೂವರೆ ವರ್ಷದ ಮಗುವನ್ನು ಬೆನ್ನಿಗೆ ಕಟ್ಟಿಕೊಂಡು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಆಳಂದ ತಾಲೂಕಿನ ಚಿಂಚನಸೂರು ಗ್ರಾಮದಲ್ಲಿ ಗುರುವಾರ ನಡೆದಿದೆ.

ಮೃತರನ್ನು ಅಂಬಿಕಾ ವೀರಭದ್ರಪ್ಪ (25) ಹಾಗೂ ಅವರ ಮಗುವನ್ನು ಆರಾಧ್ಯ ಎಂದು ಗುರುತಿಸಲಾಗಿದೆ.

ಮೂಲಗಳ ಪ್ರಕಾರ, ಅಂಬಿಕಾ ಅವರು ಮೂರು ವರ್ಷಗಳ ಹಿಂದೆ ಚಿಂಚನಸೂರು ಗ್ರಾಮದ ವೀರಭದ್ರ ಅವರೊಂದಿಗೆ ವಿವಾಹವಾಗಿದ್ದರು. ಮದುವೆಯಾದ ನಂತರ ದಂಪತಿಗಳ ನಡುವೆ ಹೊಂದಾಣಿಕೆ ಕೊರತೆಯಿಂದಾಗಿ ಆಗಾಗ ಕೌಟುಂಬಿಕ ಕಲಹಗಳು ನಡೆಯುತ್ತಿದ್ದು, ಇದರಿಂದ ಅಂಬಿಕಾ ಮನನೊಂದಿದ್ದರು ಎನ್ನಲಾಗಿದೆ.

ಗುರುವಾರ ಬೆಳಗ್ಗೆ ಅಂಬಿಕಾ ಮನೆಯಿಂದ ಹೊರಟು ಗ್ರಾಮದ ಬಾವಿಯತ್ತ ತೆರಳಿದ್ದಾರೆ. ಬಾವಿ ಬಳಿ ತಮ್ಮ ಚಪ್ಪಲಿಗಳನ್ನು ಬಿಟ್ಟು, ಮಗುವನ್ನು ಬೆನ್ನಿಗೆ ಕಟ್ಟಿಕೊಂಡೇ ಬಾವಿಗೆ ಹಾರಿರುವುದು ನಂತರ ಬೆಳಕಿಗೆ ಬಂದಿದೆ.

ಬೆಳಗ್ಗೆಯಿಂದ ಅಂಬಿಕಾ ಕಾಣಿಸದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಹುಡುಕಾಟ ನಡೆಸಿದ್ದಾರೆ. ಈ ವೇಳೆ ಬಾವಿ ಸಮೀಪ ಚಪ್ಪಲಿಗಳು ಪತ್ತೆಯಾಗಿದ್ದು, ಅನುಮಾನಗೊಂಡ ಸ್ಥಳೀಯರು ಬಾವಿಯಲ್ಲಿ ಶೋಧ ನಡೆಸಿದಾಗ ತಾಯಿ ಮತ್ತು ಮಗುವಿನ ಮೃತದೇಹಗಳು ಪತ್ತೆಯಾಗಿವೆ.

ಘಟನೆಯ ಕುರಿತು ನರೋಣಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X