ಕಲಬುರಗಿ | ಅತಿವೃಷ್ಟಿಯಿಂದ ಬೆಳೆ ಹಾನಿಯಾದ ಪ್ರದೇಶಗಳಿಗೆ ಪರಿಹಾರ ಘೋಷಿಸುವಂತೆ ಆಗ್ರಹಿಸಿ ರೈತರಿಂದ ಪ್ರತಿಭಟನೆ

ಕಲಬುರಗಿ: ಅತಿವೃಷ್ಟಿಯಿಂದ ಉಂಟಾದ ಬೆಳೆಹಾನಿ ಸಮೀಕ್ಷೆ ನಡೆಸಿ ಪರಿಹಾರ ನೀಡುವುದು, ಕಬ್ಬುಬೆಳೆ ವಿಮಾವ್ಯಾಪ್ತಿಗೆ ಸೇರಿಸುವುದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ, ವಿವಿಧ ಸಂಘಟನೆಗಳ ರೈತ ಮುಖಂಡರು, ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಡಿಸಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಈ ವೇಳೆ ಮಾತನಾಡಿದ ರೈತ ಮುಖಂಡ ನಾಗೇಂದ್ರ ಥಂಬೆ ಅವರು, 2024 - 25 ನೇ ಸಾಲಿನ ಮುಂಗಾರು ಹಂಗಾಮಿನ ಬಾಕಿ ಉಳಿದಿರುವ ತೊಗರಿ ಬೆಳೆ ವಿಮೆ ಮೊತ್ತ ಪಾವತಿಸಬೇಕು, ಇತ್ತೀಚೆಗೆ ಸುರಿದ ಭಾರೀ ಮಳೆಯಿಂದಾಗಿ ಹೆಸರು, ಉದ್ದು, ತೊಗರಿ ಸೇರಿದಂತೆ ಅನೇಕ ಬೆಳೆಗಳು ಸಂಪೂರ್ಣ ನೆಲಕಚ್ಚಿವೆ, ಕೂಡಲೇ ಸಮೀಕ್ಷೆ ನಡೆಸಿ ಪರಿಹಾರ ಘೋಷಣೆ ಮಾಡಬೇಕೆಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಉಮಾಪತಿ ಪಾಟೀಲ, ಗುರುಲಿಂಗ ಜಂಗಮ ಪಾಟೀಲ, ರೇವಣಸಿದ್ದಪ್ಪ ಸಾತನೂರ, ಚನ್ನಬಸಪ್ಪ ಪಾಟೀಲ, ಬಸವರಾಜ ಉಪ್ಪಿನ, ಸಿದ್ಧರಾಮ ದೇಸಾಯಿ, ಸಂಜುಕುಮಾರ ಖೋಬರೆ, ಜಗನ್ನಾಥ ವಾರದ, ಮಲಿನಾಥ ಬಿರಾದಾರ ಸೇರಿದಂತೆ ಹಲವರು ಇದ್ದರು.
Next Story





