Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಕಾರುಹುಣ್ಣೆಮೆ ಸಂಭ್ರಮಕ್ಕೆ...

ಕಲಬುರಗಿ | ಕಾರುಹುಣ್ಣೆಮೆ ಸಂಭ್ರಮಕ್ಕೆ ರೈತರು ಸಜ್ಜು : ದುಬಾರಿ ನಡುವೆಯೂ ಎತ್ತುಗಳ ಸಿಂಗರ ಸಾಮಗ್ರಿ ಖರೀದಿ ಭರಾಟೆ

ವಾರ್ತಾಭಾರತಿವಾರ್ತಾಭಾರತಿ27 Jun 2026 8:33 PM IST
share
ಕಲಬುರಗಿ | ಕಾರುಹುಣ್ಣೆಮೆ ಸಂಭ್ರಮಕ್ಕೆ ರೈತರು ಸಜ್ಜು : ದುಬಾರಿ ನಡುವೆಯೂ ಎತ್ತುಗಳ ಸಿಂಗರ ಸಾಮಗ್ರಿ ಖರೀದಿ ಭರಾಟೆ

ಆಳಂದ: ಸೋಮವಾರ ಆಚರಿಸಲಾಗುವ ಕಾರುಹುಣ್ಣಿಮೆ ಹಬ್ಬದ ಹಿನ್ನೆಲೆಯಲ್ಲಿ ಪಟ್ಟಣ ಸೇರಿದಂತೆ ಗ್ರಾಮೀಣ ಭಾಗದಲ್ಲಿ ರೈತರು ಸಾಂಪ್ರದಾಯಿಕ ಸಂಭ್ರಮದ ಸಿದ್ಧತೆಯಲ್ಲಿ ತೊಡಗಿದ್ದಾರೆ.

ಪಟ್ಟಣದ ಮಾರುಕಟ್ಟೆ, ಮುಖ್ಯರಸ್ತೆಯಲ್ಲಿ ಎತ್ತುಗಳನ್ನು ಸಿಂಗರಿಸಲು ಬೇಕಾದ ಗಂಟೆಗಳು, ಬಣ್ಣದ ಹಗ್ಗಗಳು, ಕೊರಳಪಟ್ಟಿಗಳು, ನೆತ್ತಿಯ ಅಲಂಕಾರ, ಕೊಂಬುಗಳಿಗೆ ಬಣ್ಣ, ಹೂವಿನ ಮಾಲೆಗಳು ಸೇರಿದಂತೆ ವಿವಿಧ ಪೂಜಾ ಹಾಗೂ ಅಲಂಕಾರ ಸಾಮಗ್ರಿಗಳ ಖರೀದಿ ಜೋರಾಗಿ ನಡೆಯಿತು.

ಕೃಷಿ ಯಾಂತ್ರೀಕರಣ ಹೆಚ್ಚುತ್ತಿರುವ ಇಂದಿನ ದಿನಗಳಲ್ಲಿ ಉಳುಮೆ ಮತ್ತು ಬಿತ್ತನೆ ಕಾರ್ಯಗಳಿಗೆ ಹೆಚ್ಚಿನ ರೈತರು ಟ್ರಾಕ್ಟರ್‌ಗಳನ್ನೇ ಅವಲಂಬಿಸುತ್ತಿದ್ದರೂ, ಕಾರುಹುಣ್ಣೆ ಹಬ್ಬದ ಸಂದರ್ಭದಲ್ಲಿ ತಮ್ಮ ಕೃಷಿಗೆ ಬೆನ್ನೆಲುಬಾಗಿದ್ದ ಎತ್ತುಗಳು ಹಾಗೂ ಹೈನುಗಾರಿಕೆ ಜಾನುವಾರುಗಳಿಗೆ ವಿಶೇಷ ಪೂಜೆ ಸಲ್ಲಿಸುವ ಸಂಪ್ರದಾಯವನ್ನು ಮಾತ್ರ ಕೈಬಿಡದೆ ಮುಂದುವರಿಸುತ್ತಿದ್ದಾರೆ. ಬೆರಳೆಣಿಕೆಯಷ್ಟು ರೈತರು ಮಾತ್ರ ಈಗಲೂ ಎತ್ತುಗಳನ್ನು ಕೃಷಿ ಕಾರ್ಯಗಳಿಗೆ ಬಳಸುತ್ತಿದ್ದರೂ, ಎಲ್ಲ ರೈತರೂ ಈ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲು ಮುಂದಾಗಿದ್ದಾರೆ.

ಈ ಬಾರಿ ಬಾರದ ಮಳೆ, ಇನ್ನೂ ಬಿಡುಗಡೆಯಾಗದ ಎರಡನೇ ಕಂತಿನ ಬೆಳೆ ವಿಮೆ, ದುಬಾರಿ ಬೆಲೆಯ ಬೀಜ ಮತ್ತು ಗೊಬ್ಬರ, ಹೆಚ್ಚಿದ ಕೃಷಿ ವೆಚ್ಚ, ಇನ್ನೂ ಆರಂಭವಾಗದ ಬಿತ್ತನೆ ಕಾರ್ಯ ರೈತರನ್ನು ಆರ್ಥಿಕ ಸಂಕಷ್ಟಕ್ಕೆ ತಳ್ಳಿದೆ. ಇದರ ನಡುವೆಯೂ ಸಿಂಗರ ಸಾಮಗ್ರಿಗಳ ಬೆಲೆ ಏರಿಕೆಯಾಗಿದ್ದರೂ ಅನಿವಾರ್ಯವಾಗಿ ಖರೀದಿಸಿ ಸಂಪ್ರದಾಯ ಉಳಿಸಿಕೊಳ್ಳುವ ಮನೋಭಾವ ರೈತರಲ್ಲಿ ಕಂಡುಬಂದಿದೆ.

ಕಾರುಹುಣ್ಣೆ ದಿನ ಎತ್ತುಗಳಿಗೆ ಎಣ್ಣೆ ಹಚ್ಚಿ ಸ್ನಾನ ಮಾಡಿಸಿ, ಕೊಂಬುಗಳಿಗೆ ಬಣ್ಣ ಬಳಿದು, ಹೊಸ ಅಲಂಕಾರಗಳಿಂದ ಸಿಂಗರಿಸಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಉತ್ತಮ ಮಳೆ, ಸಮೃದ್ಧ ಬೆಳೆ ಹಾಗೂ ಜಾನುವಾರುಗಳ ಆರೋಗ್ಯಕ್ಕಾಗಿ ರೈತರು ಪ್ರಾರ್ಥಿಸುತ್ತಾರೆ. ಕೃಷಿ ಸಂಸ್ಕೃತಿ ಮತ್ತು ಜಾನುವಾರುಗಳ ಮೇಲಿನ ಕೃತಜ್ಞತೆಯನ್ನು ಸಾರುವ ಈ ಹಬ್ಬ ಗ್ರಾಮೀಣ ಬದುಕಿನ ಅವಿಭಾಜ್ಯ ಅಂಗವಾಗಿದೆ.

Tags

KalaburagiFarmers
share
ವಾರ್ತಾಭಾರತಿ
ವಾರ್ತಾಭಾರತಿ
Next Story
X