Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ವಿದ್ಯುತ್ ಖಾಸಗೀಕರಣ...

ಕಲಬುರಗಿ | ವಿದ್ಯುತ್ ಖಾಸಗೀಕರಣ ವಿರೋಧಿಸಿ ರೈತರಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ20 Jun 2026 6:06 PM IST
share
ಕಲಬುರಗಿ | ವಿದ್ಯುತ್ ಖಾಸಗೀಕರಣ ವಿರೋಧಿಸಿ ರೈತರಿಂದ ಪ್ರತಿಭಟನೆ

ಸೇಡಂ: ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದ ಖಾಸಗೀಕರಣಕ್ಕೆ ಅವಕಾಶ ನೀಡಬಾರದು ಹಾಗೂ ಟಾಟಾ ಪವರ್ ಕಂಪೆನಿಗೆ ವಿದ್ಯುತ್ ವಿತರಣಾ ಪರವಾನಗಿ ನೀಡುವ ಪ್ರಸ್ತಾವನೆಯನ್ನು ಕೈಬಿಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ಹಾಗೂ ಭಾರತೀಯ ಕಿಸಾನ್ ಸಂಘದ ತಾಲೂಕು ಘಟಕದ ವತಿಯಿಂದ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಮುಖಾಂತರ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.

ಪ್ರತಿಭಟನೆಯ ಸಂದರ್ಭದಲ್ಲಿ ಮಾತನಾಡಿದ ರೈತ ಸಂಘದ ಮುಖಂಡರು, ವಿದ್ಯುತ್ ಕ್ಷೇತ್ರದ ಖಾಸಗೀಕರಣದಿಂದ ರೈತರಿಗೆ ನೀಡಲಾಗುತ್ತಿರುವ ವಿದ್ಯುತ್ ಸೇವೆಗಳ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದರು. ವಿಶೇಷವಾಗಿ ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಪೂರೈಕೆಯಲ್ಲಿ ತೊಂದರೆ ಉಂಟಾಗುವ ಸಾಧ್ಯತೆ ಇದ್ದು, ರೈತರ ಹಿತಾಸಕ್ತಿಗೆ ಧಕ್ಕೆ ಉಂಟಾಗಬಹುದು ಎಂದು ಹೇಳಿದರು.

ಇದೇ ವೇಳೆ 2025-26ನೇ ಸಾಲಿನಲ್ಲಿ ಅತಿವೃಷ್ಟಿ ಹಾಗೂ ಅನಾವೃಷ್ಟಿಯಿಂದ ತಾಲೂಕು ಸೇರಿದಂತೆ ವಿವಿಧ ಭಾಗಗಳಲ್ಲಿ ರೈತರ ಬೆಳೆಗಳು ವ್ಯಾಪಕ ಹಾನಿಗೊಳಗಾಗಿವೆ. ಆದರೆ ಸರಕಾರ ಇನ್ನೂ ಎರಡು ಕಂತಿನ ಬೆಳೆ ವಿಮೆ ಪರಿಹಾರ ಹಣವನ್ನು ಬಿಡುಗಡೆ ಮಾಡದೆ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಆರೋಪಿಸಿದರು. ಸಂಕಷ್ಟದಲ್ಲಿರುವ ರೈತರಿಗೆ ತಕ್ಷಣವೇ ವಿಮೆ ಹಣ ಬಿಡುಗಡೆ ಮಾಡಿ ನೆರವಾಗಬೇಕು ಎಂದು ಒತ್ತಾಯಿಸಿದರು.

ರೈತರು ದೇಶದ ಬೆನ್ನೆಲುಬು ಎಂಬ ಮಾತು ಕೇವಲ ಭಾಷಣಗಳಿಗೆ ಸೀಮಿತವಾಗದೆ, ಸರಕಾರವು ರೈತರ ಹಿತದೃಷ್ಟಿಯಿಂದ ಕಾರ್ಯನಿರ್ವಹಿಸಬೇಕು. ರೈತರ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಲ್ಪಿಸಿ ಕೃಷಿ ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ ನೀಡಬೇಕು ಎಂದು ಮುಖಂಡರು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಶಾಂತಕುಮಾರ್ ಚನ್ನಕಿ, ಗಂಗಾಧರ ಜಾಧವ್, ಆಮಶೆಟ್ಟಿ ಪಾಟೀಲ್ ಹೆಡ್ಡಳ್ಳಿ, ರವಿ ಪಾಟೀಲ್ ಸೂರವಾರ, ದೊಡ್ಡಪ್ಪಗೌಡ ರಾಮಪ್ಪ ಮದಕಲ್, ಯಡಗಾ, ಭೀಮರಾವ್ ಮಾಲಿ ಪಾಟೀಲ್ ಮಳಖೇಡ, ಮಲ್ಲಿಕಾರ್ಜುನ ಪೂಜಾರಿ, ಮಹೇಶ್ ರೇಮಗೊಂಡ, ಮಹೇಶ್ ಗುತ್ತೇದಾರ್, ಶರಣು ಕಾಳಗಿ, ಚಂದ್ರಕಾಂತ ಕಲ್ಕಮ್, ಕಾಶಿನಾಥ್ ಟೈಗರ್, ಅನೀಲ ಬೋಸರ, ಪರಶುರಾಮ ದೋಡ್ಮನಿ, ಪ್ರಭುರಾವ ಬೋಸಲೆ, ಬಾಲರಾಜ್ ಹೋಳ್ಕರ್ ಸೇರಿದಂತೆ ರೈತ ಸಂಘಟನೆಗಳ ಮುಖಂಡರು ಹಾಗೂ ರೈತರು ಭಾಗವಹಿಸಿದ್ದರು.

Tags

KalaburagiFarmersprotest
share
ವಾರ್ತಾಭಾರತಿ
ವಾರ್ತಾಭಾರತಿ
Next Story
X