Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ರೈತರು ಸಂಘಟಿತವಾಗಿ,...

ಕಲಬುರಗಿ | ರೈತರು ಸಂಘಟಿತವಾಗಿ, ಒಗ್ಗಟ್ಟಿನಿಂದ ಹೋರಾಟ ಮಾಡಬೇಕು : ದಯಾನಂದ ಪಾಟೀಲ್‌

ವಾರ್ತಾಭಾರತಿವಾರ್ತಾಭಾರತಿ11 Aug 2025 10:15 PM IST
share
ಕಲಬುರಗಿ | ರೈತರು ಸಂಘಟಿತವಾಗಿ, ಒಗ್ಗಟ್ಟಿನಿಂದ ಹೋರಾಟ ಮಾಡಬೇಕು : ದಯಾನಂದ ಪಾಟೀಲ್‌

ಕಲಬುರಗಿ: “ರೈತರು ಈ ದೇಶದ ಬೆನ್ನೆಲುಬು. ಆದರೆ, ಅತಿವೃಷ್ಟಿ, ಅನಾವೃಷ್ಟಿ, ಬೆಳೆಗೆ ಸರಿಯಾದ ಬೆಲೆ ದೊರಕದಿರುವುದು, ಉತ್ಪಾದನಾ ವೆಚ್ಚದ ಏರಿಕೆ ಮತ್ತು ಸರ್ಕಾರಿ ಸೌಲಭ್ಯಗಳ ಕೊರತೆಯಂತಹ ಸಮಸ್ಯೆಗಳು ರೈತರನ್ನು ದಿನದಿಂದ ದಿನಕ್ಕೆ ಕಂಗೆಡಿಸುತ್ತಿವೆ. ಇಂತಹ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ರೈತರು ಸಂಘಟಿತವಾಗಿ, ಒಗ್ಗಟ್ಟಿನಿಂದ ಹೋರಾಟ ಮಾಡಲೇಬೇಕು” ಎಂದು ನವ ಕರ್ನಾಟಕ ರೈತ ಸಂಘದ ರಾಜ್ಯಾಧ್ಯಕ್ಷ ದಯಾನಂದ ಪಾಟೀಲ್‌ ಕರೆ ನೀಡಿದರು.

ಆಳಂದ ಪಟ್ಟಣದ ಗುರುಭವನದಲ್ಲಿ ನವ ಕರ್ನಾಟಕ ರೈತ ಸಂಘದ ತಾಲೂಕು ಘಟಕ ಆಯೋಜಿಸಿದ್ದ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

“ದೇಶದಲ್ಲಿ ಶೇ.80ರಷ್ಟು ಜನರು ವಿಷಪೂರಿತ ಆಹಾರ ಸೇವನೆಯಿಂದಾಗಿ ವಿವಿಧ ರೋಗಗಳಿಂದ ಬಳಲುತ್ತಿದ್ದಾರೆ. ಜನರಿಗೆ ಆರೋಗ್ಯಕರ ಆಹಾರ ಪೂರೈಸಲು ಸಾವಯವ ಕೃಷಿ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಆಳಂದ ತಾಲೂಕು ಸಾವಯವ ಕೃಷಿಗೆ ಮಾದರಿಯಾಗುವ ಸಂಕಲ್ಪ ಮಾಡಬೇಕು” ಎಂದರು.

ನಿವೃತ್ತ ಮುಖ್ಯ ಶಿಕ್ಷಕ ಎಸ್.ಬಿ.ಪಾಟೀಲ್‌ ಮಾತನಾಡಿ, “ದೇಶಕ್ಕೆ ಅನ್ನ ನೀಡುವ ರೈತನ ದುಸ್ಥಿತಿಗೆ ಆಳುವ ಸರ್ಕಾರ ಮತ್ತು ಜನಪ್ರತಿನಿಧಿಗಳೇ ಕಾರಣ. ಶಾಶ್ವತ ಪರಿಹಾರ ನೀಡಿ ರೈತರ ಬದುಕು ಹಸನಾಗಿಸುವ ಕೆಲಸ ಮಾಡಬೇಕು. ಒಗ್ಗಟ್ಟಿನಿಂದಲೇ ಸಮಸ್ಯೆ ಮತ್ತು ಸವಾಲುಗಳನ್ನು ಎದುರಿಸಬಹುದು” ಎಂದರು.

ಹೊಸ ತಾಲೂಕು ಅಧ್ಯಕ್ಷರಾಗಿ ಆಯ್ಕೆಯಾದ ಬಸುಲಿಂಗಪ್ಪ ಮುದ್ದಾಣಿ ಮಾತನಾಡಿದರು.

ವೇದಿಕೆಯಲ್ಲಿ ರಾಜ್ಯ ಕಾರ್ಯದರ್ಶಿ ಅಮರ ಝಳಕಿ, ಪ್ರಗತಿಪರ ರೈತ ಸೂರ್ಯಕಾಂತ ರಾಮಜಿ, ಸಂಗಣ್ಣ ಮುದ್ದಡಗಿ, ಮಾಡಿಯಾಳ, ಶ್ರೀಶೈಲ ಚಿಟಗೋಟೆ, ಸಂಗಣ ದುದ್ದಗಿ, ಪ್ರಾಚಾರ್ಯ ಮಲ್ಲಿಕಾರ್ಜುನ ಪೂಜಾರಿ, ವಿಠ್ಠಲ ಮುದ್ದಾಣೆ, ಚನ್ನವೀರ ಜಮಾದಾರ, ನಾಗೇಂದ್ರಪ್ಪ ಪಾಟೀಲ, ಭೀಮಶಾ ಮಾಲಿಪಾಟೀಲ, ಶಿವರಾಜ ನೆಲ್ಲೂರ, ಮಲ್ಲಿಕಾರ್ಜುನ ಬುಜುರ್ಕೆ, ಮಲ್ಲಿನಾಥ ದಣ್ಣೂರ, ಶಿವುಕುಮಾರ ಸೇರಿ, ಶಿವಶೃಣಪ್ಪ ಯಳಸಂಗಿ, ರಘು ಹತ್ತರಕಿ, ಬಾಲಾಜಿ ಹಾಗೂ ವಿವಿಧ ಗ್ರಾಮಗಳ ರೈತರು ಉಪಸ್ಥಿತರಿದ್ದರು.

ನಿಕಟಪೂರ್ವ ಅಧ್ಯಕ್ಷ ಶಿವಲಿಂಗ ಪಾಟೀಲ್‌ ನಿರೂಪಣೆ ನಡೆಸಿದರು. ನಗರಾಧ್ಯಕ್ಷರಾಗಿ ಸೋಮು ಹತ್ತರಕಿ ಹಾಗೂ ಯುವ ಘಟಕದ ಅಧ್ಯಕ್ಷರಾಗಿ ನರೇಂದ್ರ ಕೊರಳ್ಳಿ ಅವರ ಆಯ್ಕೆ ಘೋಷಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X