Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಪೊಲೀಸರ ವಶಕ್ಕೆ ಜಗ್ಗದ...

ಕಲಬುರಗಿ | ಪೊಲೀಸರ ವಶಕ್ಕೆ ಜಗ್ಗದ ರೈತರು: ಮತ್ತೆ ರಸ್ತೆಗಿಳಿದು ಬೃಹತ್ ಧರಣಿ

ಕಬ್ಬು ಟನ್ ಗೆ 5,500 ರೂ. ಬೆಂಬಲ ಬೆಲೆ ನಿಗದಿಗೆ ಆಗ್ರಹ | ಹೋರಾಟಕ್ಕೆ ಮಂಗಳಮುಖಿಯರ ಸಾಥ್

ವಾರ್ತಾಭಾರತಿವಾರ್ತಾಭಾರತಿ17 Oct 2026 1:56 PM IST
share
ಕಲಬುರಗಿ | ಪೊಲೀಸರ ವಶಕ್ಕೆ ಜಗ್ಗದ ರೈತರು: ಮತ್ತೆ ರಸ್ತೆಗಿಳಿದು ಬೃಹತ್ ಧರಣಿ

ಕಲಬುರಗಿ: ಪೊಲೀಸರ ವಶಕ್ಕೆ ಪಡೆಯುವ ಕ್ರಮಕ್ಕೂ ಜಗ್ಗದ ರೈತ ಹೋರಾಟಗಾರರು ಶನಿವಾರ ಮತ್ತೆ ಬೀದಿಗಿಳಿದು ಬೃಹತ್ ಧರಣಿ ನಡೆಸಿದರು. ಡಾ. ಎಂ.ಎಸ್. ಸ್ವಾಮಿನಾಥನ್ ವರದಿಯ ಶಿಫಾರಸುಗಳನ್ನು ಜಾರಿಗೊಳಿಸುವುದು, ಕಬ್ಬಿಗೆ ಪ್ರತಿ ಟನ್ಗೆ 5,500 ರೂ. ಬೆಂಬಲ ಬೆಲೆ ನಿಗದಿಪಡಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರು ಹೋರಾಟ ತೀವ್ರಗೊಳಿಸಿದ್ದಾರೆ.

ನಗರದ ಜೇವರ್ಗಿ ರಸ್ತೆಯ ಮಹರ್ಷಿ ವಾಲ್ಮೀಕಿ ವೃತ್ತದಲ್ಲಿ ಮಂಗಳವಾರದಿಂದ ರೈತರು ಧರಣಿ ನಡೆಸುತ್ತಿದ್ದರು. ಆದರೆ, ಶುಕ್ರವಾರ ಸಂಜೆ ಪೊಲೀಸರು ಧರಣಿ ಸ್ಥಳಕ್ಕೆ ಆಗಮಿಸಿ ಟೆಂಟ್ ಸಮೇತ ರೈತರನ್ನು ವಶಕ್ಕೆ ಪಡೆದಿದ್ದರು. ಪೊಲೀಸರ ಈ ಕ್ರಮಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ರೈತರು, ಹೋರಾಟವನ್ನು ಹತ್ತಿಕ್ಕುವ ಪ್ರಯತ್ನಕ್ಕೆ ಮಣಿಯುವುದಿಲ್ಲ ಎಂದು ಪಟ್ಟು ಹಿಡಿದರು.

ಪೊಲೀಸರು ಟೆಂಟ್ ತೆರವುಗೊಳಿಸಿ ರೈತರನ್ನು ವಶಕ್ಕೆ ಪಡೆದ ಬಳಿಕವೂ ಕೆಲ ರೈತರು ರಸ್ತೆಯ ಪಕ್ಕದಲ್ಲಿ ಮತ್ತೆ ಟೆಂಟ್ ಹಾಕಿ ರಾತ್ರಿಯಿಡೀ ಧರಣಿ ಮುಂದುವರಿಸಿದರು. ಶನಿವಾರ ಬೆಳಗ್ಗೆಯೂ ಜೇವರ್ಗಿ ರಸ್ತೆಯಲ್ಲಿ 15ಕ್ಕೂ ಹೆಚ್ಚು ಟ್ರಾಕ್ಟರ್ ಗಳನ್ನು ತಂದು ಜಮಾಯಿಸಿದ ರೈತರು, ತಮ್ಮ ಹೋರಾಟವನ್ನು ಮುಂದುವರಿಸಿದ್ದಾರೆ.

ಮಧ್ಯಾಹ್ನದ ವೇಳೆಗೆ ನೂರಾರು ರೈತರು ಸ್ಥಳದಲ್ಲಿ ಜಮಾಯಿಸಿ ಮತ್ತೆ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ರಸ್ತೆಯ ಪಕ್ಕಕ್ಕೆ ಸ್ಥಳಾಂತರಿಸಿದ್ದ ಟೆಂಟ್ ಅನ್ನು ಮತ್ತೆ ರಸ್ತೆಯ ಮಧ್ಯಭಾಗದಲ್ಲಿ ಸ್ಥಾಪಿಸಿ ಧರಣಿ ಆರಂಭಿಸಿದರು. ಈ ಮೂಲಕ ಪೊಲೀಸರ ಕ್ರಮಕ್ಕೆ ಜಗ್ಗದೆ ಬೇಡಿಕೆ ಈಡೇರುವವರೆಗೂ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂಬ ಸಂದೇಶವನ್ನು ರೈತರು ರವಾನಿಸಿದರು. ರಸ್ತೆಯ ಪಕ್ಕದಲ್ಲೇ ಅಡುಗೆ ಮಾಡಿ ಪ್ರತಿಭಟನೆ ಮುಂದುವರಿಸಿದ್ದಾರೆ.

ಹೋರಾಟಕ್ಕೆ ಮಂಗಳಮುಖಿಯರ ಬೆಂಬಲ:

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಕಾರ್ಯಾಧ್ಯಕ್ಷ ಸಿದ್ದರಾಮ ದನ್ನೂರ್ ನೇತೃತ್ವದಲ್ಲಿ ನಡೆದ ಧರಣಿಯಲ್ಲಿ ಅಶೋಕ್ ಹೂಗಾರ್, ಮಹೇಶ್ ಸುಬೇದಾರ, ಮಹಾಂತೇಶ ಜಮಾದಾರ್, ಎ.ಎಸ್. ಗುಣಾರಿ, ಸಂತೋಷ್ ಮನಗೊಂಡ, ಪಿಡ್ಡಪ್ಪ ಜಾಲಗಾರ, ಕರೆಪ್ಪ ಕರಗೊಂಡ, ಸಿದ್ದು ಎಸ್.ಎಲ್., ಕನಸು ಸೇವಾ ಸಂಸ್ಥೆಯ ಸಂತೋಷ್ ಎಸ್.ಕೆ., ಶರಣಗೌಡ ಪಾಟೀಲ್, ಉಮಾಪತಿ ಪಾಟೀಲ್ ಸೇರಿದಂತೆ ಹಲವು ರೈತ ಮುಖಂಡರು ಭಾಗವಹಿಸಿದ್ದರು.

ರೈತರ ನ್ಯಾಯಯುತ ಬೇಡಿಕೆಗಳಿಗೆ ಬೆಂಬಲ ಸೂಚಿಸಿ ಮಂಗಳಮುಖಿಯರೂ ಪ್ರತಿಭಟನೆಯಲ್ಲಿ ಪಾಲ್ಗೊಂಡು ಹೋರಾಟಕ್ಕೆ ಸಾಥ್ ನೀಡಿದರು.

ಸ್ವಾಮಿನಾಥನ್ ವರದಿ ಜಾರಿ ಹಾಗೂ ಕಬ್ಬಿಗೆ ಸೂಕ್ತ ಬೆಂಬಲ ಬೆಲೆ ನಿಗದಿ ಸೇರಿದಂತೆ ರೈತರ ಪ್ರಮುಖ ಬೇಡಿಕೆಗಳು ಈಡೇರುವವರೆಗೂ ಹೋರಾಟ ಮುಂದುವರಿಯುವ ಸಾಧ್ಯತೆಯಿದ್ದು, ಕಲಬುರಗಿಯ ಜೇವರ್ಗಿ ರಸ್ತೆಯಲ್ಲಿ ರೈತರ ಪ್ರತಿಭಟನೆ ಮತ್ತೆ ತೀವ್ರಗೊಂಡಿದೆ.

Tags

KalaburagiFarmersMassive Protest
share
ವಾರ್ತಾಭಾರತಿ
ವಾರ್ತಾಭಾರತಿ
Next Story
X