Kalaburagi | ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಕಿರಣ ದೇಶಮುಖರಿಗೆ ಅಭಿನಂದನಾ ಸನ್ಮಾನ

ಕಲಬುರಗಿ: ಜಿಲ್ಲಾ ಕಾಂಗ್ರೆಸ್ ನೂತನ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ಡಾ. ಕಿರಣ ದೇಶಮುಖ ಅವರನ್ನು ರಾಜ್ಯ ಅಲ್ಪಸಂಖ್ಯಾತ ಸಮುದಾಯದ ಉಪಾಧ್ಯಕ್ಷ ಲಾಲ್ ಅಹಮದ್ ಬಾಂಬೆ ಸೆಠ್ ಅವರ ನೇತೃತ್ವದಲ್ಲಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸನ್ಮಾನಿಸಿ ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಲಾಲ್ ಅಹಮದ್ ಬಾಂಬೆ ಸೆಠ್, ಡಾ. ಕಿರಣ ದೇಶಮುಖ ಅವರ ನೇತೃತ್ವದಲ್ಲಿ ಕಲಬುರಗಿ ಜಿಲ್ಲಾ ಕಾಂಗ್ರೆಸ್ ಪಕ್ಷ ಮತ್ತಷ್ಟು ಸಂಘಟಿತವಾಗಿ ಬಲಿಷ್ಠವಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಪಕ್ಷದ ತತ್ವ, ಸಿದ್ಧಾಂತ ಹಾಗೂ ಜಾತ್ಯತೀತ ಆಶಯಗಳನ್ನು ಜನರಿಗೆ ತಲುಪಿಸಲು ಎಲ್ಲರೂ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಡಾ. ಕಿರಣ ದೇಶಮುಖ, ತಮ್ಮ ಮೇಲೆ ವಿಶ್ವಾಸವಿಟ್ಟು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಜವಾಬ್ದಾರಿ ನೀಡಿರುವ ಪಕ್ಷದ ಹಿರಿಯ ನಾಯಕರು, ಮುಖಂಡರು ಹಾಗೂ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಿದರು.
ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆಗೆ ಆದ್ಯತೆ ನೀಡಿ, ಎಲ್ಲ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷವನ್ನು ಮತ್ತಷ್ಟು ಬಲಪಡಿಸಲು ಪ್ರಾಮಾಣಿಕವಾಗಿ ಶ್ರಮಿಸುವುದಾಗಿ ಅವರು ತಿಳಿಸಿದರು.
ಸನ್ಮಾನ ಕಾರ್ಯಕ್ರಮದಲ್ಲಿ ಮಜಲ್ ಅಲಂ ಖಾನ್, ವಹಾಜ್ ಬಾಬಾ, ಅಬ್ದುಲ್ ಖಾದಿರ್ ಚೋಂಗೆ, ಖಾಲಿದ್ ಅಹಮದ್ (ಕಾರ್ಪೊರೇಟರ್), ಜಸ್ವೀರ್ ಸಿಂಗ್, ಮೆಹರಾಜ್ ಪಟೇಲ್ ತಾವರ್ಗೇರಾ, ಅಸ್ಲಾಂ ಬಾಜೆ, ರಹೀಂ ಖಾನ್ ಪಠಾಣ್ ಸೇರಿದಂತೆ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.






