Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಸಂಭ್ರಮದ ಹಾಲುಗಂಬ ಉತ್ಸವ

Kalaburagi | ಸಂಭ್ರಮದ ಹಾಲುಗಂಬ ಉತ್ಸವ

ವಾರ್ತಾಭಾರತಿವಾರ್ತಾಭಾರತಿ5 Sept 2026 9:47 PM IST
share
Kalaburagi | ಸಂಭ್ರಮದ ಹಾಲುಗಂಬ ಉತ್ಸವ

ಕನಕಗಿರಿ: ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಐತಿಹಾಸಿಕ ಪ್ರಸಿದ್ಧ ಕನಕಾಚಲಪತಿ ದೇವಸ್ಥಾನದ ಆವರಣದಲ್ಲಿ ಶನಿವಾರ ರಾತ್ರಿ ಹಾಲುಗಂಬ ಉತ್ಸವ ವಿಜೃಂಭಣೆಯಿಂದ ನಡೆಯಿತು. ಸಾವಿರಾರು ಭಕ್ತರು ಹಾಗೂ ಸಾರ್ವಜನಿಕರು ಉತ್ಸವವನ್ನು ಕಣ್ತುಂಬಿಕೊಂಡರು.

ಉತ್ಸವದ ಅಂಗವಾಗಿ ಅರ್ಚಕ ಮನೆತನದವರು ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿದರು. ಪಟ್ಟಣ ಸೇರಿದಂತೆ ಬಂಕಾಪುರ, ಗುಡದೂರ, ಕರಡಿಗುಡ್ಡ, ಚಿಕ್ಕಮಾದಿನಾಳ, ಉಮಳಿ, ಕಾಟಾಪುರ ಹಾಗೂ ಹಿರೇಮಾದಿನಾಳ ಗ್ರಾಮಗಳ ಯಾದವ (ಗೊಲ್ಲ) ಸಮುದಾಯದವರು ಸಂಪ್ರದಾಯಬದ್ಧವಾಗಿ ಹಾಲುಗಂಬ ಉತ್ಸವ ಆಚರಿಸಿದರು.

ಗೊಲ್ಲ ಸಮುದಾಯದವರು ಹಲವು ದಿನಗಳಿಂದ ಸಂಗ್ರಹಿಸಿದ್ದ ಹಾಲು, ಮೊಸರು ಹಾಗೂ ತುಪ್ಪವನ್ನು ಮಡಿಕೆಗಳಲ್ಲಿ ತುಂಬಿಕೊಂಡು ಎದುರು ಹನುಮಪ್ಪ ದೇವಸ್ಥಾನದ ಆವರಣದಲ್ಲಿ ಜಮಾಯಿಸಿದರು. ಇದಕ್ಕೂ ಮುನ್ನ ಅಶ್ವರೋಹಣ ಉತ್ಸವ ನೆರವೇರಿತು.

ಹಾಲುಗಂಬಕ್ಕೆ ಜಿಡ್ಡುಗಟ್ಟಿದ ಪದಾರ್ಥಗಳು ಹಾಗೂ ಹೈನು ಉತ್ಪನ್ನಗಳನ್ನು ಲೇಪಿಸಲಾಗಿತ್ತು. ಕಂಬದ ಮೇಲಿದ್ದ ವ್ಯಕ್ತಿಯೊಬ್ಬ ಹಾಲು-ಮೊಸರು ಮಿಶ್ರಿತ ಹೈನು ಪದಾರ್ಥವನ್ನು ಕಂಬದ ಮೇಲೆ ಸುರಿಯುತ್ತಿದ್ದಂತೆ ಯುವಕರು ಕಂಬ ಏರಲು ಹರಸಾಹಸ ಪಟ್ಟರು. ಈ ದೃಶ್ಯ ಉತ್ಸವದ ಪ್ರಮುಖ ಆಕರ್ಷಣೆಯಾಗಿದ್ದು, ನೆರೆದಿದ್ದ ಭಕ್ತರ ಗಮನ ಸೆಳೆಯಿತು.

ಉತ್ಸವದಲ್ಲಿ ತಾಲೂಕಿನ ವಿವಿಧ ಗ್ರಾಮಗಳ ಯಾದವ (ಗೊಲ್ಲ) ಸಮುದಾಯದ ಮುಖಂಡರು, ಮಹಿಳೆಯರು ಹಾಗೂ ಸಾವಿರಾರು ಭಕ್ತರು ಭಾಗವಹಿಸಿದ್ದರು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X