Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ವಚನ ಸಾಹಿತ್ಯಕ್ಕೆ ಮರುಜೀವ...

Kalaburagi | ವಚನ ಸಾಹಿತ್ಯಕ್ಕೆ ಮರುಜೀವ ನೀಡಿದ ಮಹಾನ್ ಸಾಧಕ ಫ.ಗು.ಹಳಕಟ್ಟಿ: ಅಭಿನವ ರಾಮಲಿಂಗ ಪಟ್ಟದೇವರು

ವಾರ್ತಾಭಾರತಿವಾರ್ತಾಭಾರತಿ2 July 2026 8:07 PM IST
share
Kalaburagi | ವಚನ ಸಾಹಿತ್ಯಕ್ಕೆ ಮರುಜೀವ ನೀಡಿದ ಮಹಾನ್ ಸಾಧಕ ಫ.ಗು.ಹಳಕಟ್ಟಿ: ಅಭಿನವ ರಾಮಲಿಂಗ ಪಟ್ಟದೇವರು

ಕಲಬುರಗಿ: ಶರಣರ ಅಪಾರ ಜ್ಞಾನಭಂಡಾರವನ್ನು ಸಂಗ್ರಹಿಸಿ, ಸಂಪಾದಿಸಿ ಹಾಗೂ ಮುದ್ರಣದ ಮೂಲಕ ವಿಶ್ವಕ್ಕೆ ಪರಿಚಯಿಸಿದ ಮಹಾನ್ ಸಾಧಕರಾದ ಡಾ. ಫ.ಗು. ಹಳಕಟ್ಟಿಯವರನ್ನು ಖ್ಯಾತ ಸಾಹಿತಿ ಬಿ.ಎಂ. ಶ್ರೀಕಂಠಯ್ಯ ಅವರು “ವಚನ ಪಿತಾಮಹ” ಎಂದು ಕರೆದಿರುವುದು ಅವರ ಅಪೂರ್ವ ಸೇವೆಗೆ ಸಂದ ಗೌರವವಾಗಿದೆ ಎಂದು ಅಕ್ಕಲಕೋಟೆಯ ಶ್ರೀ ಅಭಿನವ ರಾಮಲಿಂಗ ಪಟ್ಟದೇವರು ಹೇಳಿದರು.

ನಗರದ ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಜಿಲ್ಲಾ ಪಂಚಾಯತ್ ಸಂಯುಕ್ತ ಆಶ್ರಯದಲ್ಲಿ ಗುರುವಾರ ನಡೆದ ಡಾ. ಫ.ಗು. ಹಳಕಟ್ಟಿ ಜಯಂತಿ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿ ಅವರು ಮಾತನಾಡಿದರು.

ಧಾರವಾಡದಲ್ಲಿ ಜನಿಸಿದ ಹಳಕಟ್ಟಿಯವರು ವಿಜಯಪುರದಲ್ಲಿ ವಕೀಲ ವೃತ್ತಿ ನಡೆಸುತ್ತಿದ್ದ ವೇಳೆ ಅಲ್ಲಮಪ್ರಭುಗಳ ತಾಡೋಲೆಗಳನ್ನು ಕಂಡದ್ದು ಅವರ ಬದುಕಿನ ದಿಕ್ಕನ್ನೇ ಬದಲಿಸಿತು. ಪೂಜಾ ವಸ್ತುವಾಗಿ ಉಳಿದಿದ್ದ ವಚನಗಳನ್ನು ಸಂಗ್ರಹಿಸಿ, ಪರಿಷ್ಕರಿಸಿ, ಮುದ್ರಿಸುವ ಮೂಲಕ ಬಸವಣ್ಣ ಹಾಗೂ ಶರಣರ ಚಿಂತನೆಗಳನ್ನು ಜನಮಾನಸಕ್ಕೆ ತಲುಪಿಸುವ ಮಹತ್ವದ ಕಾರ್ಯವನ್ನು ಕೈಗೊಂಡರು ಎಂದು ವಿವರಿಸಿದರು.

ಮಂಗಳೂರಿನ ಮುದ್ರಣಾಲಯವು ವಚನಗಳ ಮುದ್ರಣಕ್ಕೆ ನಿರಾಕರಿಸಿದರೂ ಹಿಂಜರಿಯದೆ 1923ರಿಂದ 1953ರವರೆಗೆ ‘ವಚನಶಾಸ್ತ್ರ ಸಾರ’, ‘ಮಹಾದೇವಿಯಕ್ಕಗಳ ಗ್ರಂಥ’ ಸೇರಿದಂತೆ ಹಲವು ಕೃತಿಗಳನ್ನು ಪ್ರಕಟಿಸಿದರು. ಬಳಿಕ ವಿಜಯಪುರದಲ್ಲಿ ‘ಹಿತಚಿಂತಕ’ ಮುದ್ರಣಾಲಯ ಸ್ಥಾಪಿಸಿ ವಚನ ಸಾಹಿತ್ಯದ ಪ್ರಸಾರಕ್ಕೆ ತಮ್ಮ ಜೀವನವನ್ನೇ ಸಮರ್ಪಿಸಿಕೊಂಡರು ಎಂದು ತಿಳಿಸಿದರು.

ಸುಮಾರು 17 ವರ್ಷಗಳ ಅವಿರತ ಪರಿಶ್ರಮದಿಂದ 200ಕ್ಕೂ ಹೆಚ್ಚು ಅಪರಿಚಿತ ವಚನಕಾರರನ್ನು ಗುರುತಿಸಿ, 22 ಸಾವಿರಕ್ಕೂ ಅಧಿಕ ವಚನಗಳನ್ನು ಸಂಗ್ರಹಿಸಿ ಕನ್ನಡ ಸಾಹಿತ್ಯ ಲೋಕಕ್ಕೆ ನೀಡಿದ ಕೀರ್ತಿ ಡಾ. ಫ.ಗು. ಹಳಕಟ್ಟಿಯವರಿಗೆ ಸಲ್ಲುತ್ತದೆ ಎಂದು ಪ್ರಶಂಸಿಸಿದರು.

ಹಿರಿಯ ಸಾಹಿತಿ ಅಪ್ಪಾರಾವ್ ಅಕ್ಕೋಣಿ ಮಾತನಾಡಿ, 12ನೇ ಶತಮಾನದ ಶರಣರ ವಚನ ಸಾಹಿತ್ಯಕ್ಕೆ ಮರುಜೀವ ತುಂಬಿದ ಮಹಾನ್ ಚೇತನ ಡಾ. ಫ.ಗು. ಹಳಕಟ್ಟಿಯವರು ಸಾಮಾಜಿಕ, ಶೈಕ್ಷಣಿಕ ಹಾಗೂ ರಾಜಕೀಯ ಕ್ಷೇತ್ರಗಳಲ್ಲಿಯೂ ಗಮನಾರ್ಹ ಸೇವೆ ಸಲ್ಲಿಸಿದ್ದಾರೆ ಎಂದು ಹೇಳಿದರು.

ಬಾಂಬೆ ವಿಧಾನ ಪರಿಷತ್ ಸದಸ್ಯರಾಗಿ ಹಾಗೂ ವಿಜಯಪುರ ನಗರಸಭೆಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಹಳಕಟ್ಟಿಯವರ ಜನಪರ ಕಾರ್ಯವನ್ನು ಗುರುತಿಸಿ ಬ್ರಿಟಿಷ್ ಸರ್ಕಾರ “ರಾವ್ ಬಹದ್ದೂರ್” ಪ್ರಶಸ್ತಿಯನ್ನು ನೀಡಿ ಗೌರವಿಸಿತ್ತು. ಕನ್ನಡದ ಸಾಂಸ್ಕೃತಿಕ ಪರಂಪರೆಯನ್ನು ಸಂರಕ್ಷಿಸಿ ಬೆಳೆಸುವಲ್ಲಿ ಅವರ ಕೊಡುಗೆ ಅನನ್ಯವಾಗಿದೆ ಎಂದು ಹೇಳಿದರು.

ಕಾರ್ಯಕ್ರಮವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪನಿರ್ದೇಶಕಿ ಜಗದೀಶ್ವರಿ ನಾಶಿ ಸ್ವಾಗತಿಸಿದರು.

ವೇದಿಕೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯ ಸಹಾಯಕ ಶಿವಪ್ರಭು ಹಿರೇಮಠ, ಸಮಾಜದ ಮುಖಂಡರಾದ ಶಿವರಾಜ ಅಂಡಗಿ, ಚೆನ್ನಮಲ್ಲಪ್ಪ, ಡಾ. ಬಸವರಾಜ ಚೆನ್ನ, ಸತೀಶ್ ಜಮಖಂಡಿ, ಚಂದ್ರಶೇಖರ, ಸೋಮಶೇಖರ ಬಿ. ಧತ್ತರ್ಗಿ, ಶ್ರವಣಕುಮಾರ, ಸಿದ್ದರೂಢ ಮುನ್ನಳ್ಳಿ, ಚಂದ್ರಕಾಂತ ಮುನ್ನಳ್ಳಿ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X