ಕಲಬುರಗಿ | ಆಸ್ತಿ ವಿಚಾರಕ್ಕೆ ಸಹೋದರರ ಮಧ್ಯೆ ಜಗಳ; ಕೊಲೆಯಲ್ಲಿ ಅಂತ್ಯ

ಕಲಬುರಗಿ: ಆಸ್ತಿ ವಿಚಾರಕ್ಕೆ ಸಹೋದರರ ಮಧ್ಯೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಚಿಂಚೋಳಿ ತಾಲೂಕಿನ ಗಡಿಕೇಶ್ವರ ಗ್ರಾಮದಲ್ಲಿ ನಡೆದಿದೆ.
ರಮೇಶ್ ಕೊಲೆಯಾದ ವ್ಯಕ್ತಿ. ಆಸ್ತಿ ವಿಚಾರಕ್ಕೆ ಸಂಬಂಧಿಸಿ ಸಹೋದರ ಸಂಗಮೇಶ ಹಾಗೂ ಅವರ ಮಕ್ಕಳು ರಮೇಶ್ ಮೇಲೆ ಹಲ್ಲೆ ನಡೆಸಿದ್ದಾರೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡು ರಮೇಶ್ ಸ್ಥಳದಲ್ಲೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
ಸುಲೇಪೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Next Story





