Kalaburagi | ಪಟಾಕಿ ಕಿಡಿ ತಗುಲಿ ಬೆಂಕಿ ಅವಘಡ

ಕಲಬುರಗಿ: ನಗರದ ಕೆಎನ್ಝೆಡ್ ಫಂಕ್ಷನ್ ಹಾಲ್ ಎದುರಿನ ಶೈಖ್-ಎ-ದಖನ್ ಬೈತುಲ್ ಮಾಲ್ ಸಮೀಪ ಶನಿವಾರ ರಾತ್ರಿ ಪಟಾಕಿ ಕಿಡಿ ತಗುಲಿ ಬೆಂಕಿ ಅವಘಡ ಸಂಭವಿಸಿದೆ.
ಫಂಕ್ಷನ್ ಹಾಲ್ನಲ್ಲಿ ಮದುವೆ ಸಮಾರಂಭದ ಹಿನ್ನೆಲೆಯಲ್ಲಿ ಪಟಾಕಿ ಸಿಡಿಸಲಾಗುತ್ತಿತ್ತು. ಈ ವೇಳೆ ಪಟಾಕಿಯಿಂದ ಹಾರಿದ ಕಿಡಿ ಸಮೀಪದ ಪ್ರದೇಶಕ್ಕೆ ತಗುಲಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ. ತಕ್ಷಣ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ.
ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯಲ್ಲಿ ಯಾವುದೇ ದೊಡ್ಡ ಪ್ರಮಾಣದ ಹಾನಿ ಸಂಭವಿಸಿರುವ ಬಗ್ಗೆ ವರದಿಯಾಗಿಲ್ಲ.
ಈ ಘಟನೆ ಎಂ.ಬಿ. ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
Next Story




