Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಪ್ರತಿ ಟನ್ ಕಬ್ಬಿಗೆ ₹3,500...

ಕಲಬುರಗಿ | ಪ್ರತಿ ಟನ್ ಕಬ್ಬಿಗೆ ₹3,500 ದರ ನಿಗದಿ ಮಾಡಿ: ನಾಗರಾಜ ಶೇಗಜಿ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ5 Nov 2025 1:35 PM IST
share
PHOTO OF Shegaji

ಕಲಬುರಗಿ| ಪ್ರತಿ ಟನ್ ಕಬ್ಬಿಗೆ ₹3,500 ದರ ನಿಗದಿ ಮಾಡಿ: ನಾಗರಾಜ ಶೇಗಜಿ ಒತ್ತಾಯ

ಕಲಬುರಗಿ: ಆಳಂದ ತಾಲ್ಲೂಕಿನ ಕಬ್ಬು ಬೆಳೆಗಾರರು ಇತ್ತೀಚಿನ ಅತಿವೃಷ್ಟಿಯಿಂದ ಭಾರೀ ಸಂಕಷ್ಟದಲ್ಲಿದ್ದಾರೆ. ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳಲ್ಲಿ ಸುರಿದ ಅತಿವೃಷ್ಟಿಯಿಂದ 3,588 ಹೆಕ್ಟೇರ್ ಕಬ್ಬು ಬೆಳೆ ಹಾನಿಗೊಂಡು, 10,000ಕ್ಕೂ ಹೆಚ್ಚು ಕುಟುಂಬಗಳು ಸಾಲದ ಬಲೆಗೆ ಸಿಲುಕಿಕೊಂಡಿವೆ ಎಂದು ಆಳಂದ ಮಂಡಲ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ನಾಗರಾಜ ಶೇಗಜಿ ಧಂಗಾಪೂರ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಈ ಪರಿಸ್ಥಿತಿಯಲ್ಲಿ ಭೂಸನೂರದ ಎನ್‍ಎಸ್‍ಎಲ್ ಸಹಕಾರಿ ಸಕ್ಕರೆ ಕಾರ್ಖಾನೆ ರೈತರ ಜೀವನಕ್ಕೆ ಆಶಾಕಿರಣವಾಗಿದೆ. ಆದರೆ ರೈತರ ಬೆವರಿನ ಬೆಲೆ ಕಾಣದೆ ಕಾರ್ಖಾನೆ ಪ್ರತಿ ಟನ್ ಕಬ್ಬಿಗೆ ನ್ಯಾಯಸಮ್ಮತ ದರ ನೀಡದಿರುವುದು ತುಂಬಾ ವಿಷಾದನೀಯ. ರೈತರ ಪ್ರತಿ ಟನ್ ಕಬ್ಬಿಗೆ ಕನಿಷ್ಠ ₹3,500 ದರ ನಿಗದಿ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಶೇ.10.25 ಇಳುವರಿ ಆಧಾರದ ಮೇಲೆ ₹3,550 ಎಫ್‍ಆರ್‍ಪಿ ನಿಗದಿ ಮಾಡಿದೆ. ಆದರೆ ಕರ್ನಾಟಕದಲ್ಲಿ ಸರಾಸರಿ ಇಳುವರಿ ಶೇ.9.5 ಮಾತ್ರ ಇದರ ಆಧಾರದ ಮೇಲೆ ಎಫ್‍ಆರ್‌ಪಿ ಪರಿಷ್ಕರಣೆ ಮಾಡಿದಾಗ ಮಾತ್ರ ರೈತನಿಗೆ ಲಾಭ ಸಿಗುತ್ತದೆ. ಕರ್ನಾಟಕ ಕಬ್ಬು ನಿಯಂತ್ರಣ ಮಂಡಳಿಯು ಈ ಪರಿಷ್ಕರಣೆಗೆ ತಕ್ಷಣ ಮುಂದಾಗಬೇಕು ಎಂದು ಆಗ್ರಹಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಈಗಾಗಲೇ ನವೆಂಬರ್ 1ರಿಂದ ಕಬ್ಬು ನುರಿಯುವ ಹಂಗಾಮು ಆರಂಭಗೊಂಡಿದ್ದು, ಸೋಲಾಪುರದ ಸಿದ್ದೇಶ್ವರ, ಲೋಕಮಂಗಲ, ಸಿದ್ದನಾಥ, ಜೈನ್ ಸಕ್ಕರೆ ಕಾರ್ಖಾನೆಗಳು ರೈತರಿಗೆ ₹3,500ಕ್ಕೂ ಹೆಚ್ಚು ದರ ನೀಡುತ್ತಿವೆ. ಸಾಗಣೆ ವೆಚ್ಚ ಪಡೆಯದೇ ನೇರವಾಗಿ ಕಬ್ಬು ಖರೀದಿಸುತ್ತಿವೆ. ಇದರಿಂದ ಅಫಜಲಪುರ ಮತ್ತು ಆಳಂದ ತಾಲ್ಲೂಕಿನ ಕಬ್ಬು ಮಹಾರಾಷ್ಟ್ರಕ್ಕೆ ಸಾಗುತ್ತಿದೆ.

ಇದರ ಪರಿಣಾಮ ರಾಜ್ಯ ಸರ್ಕಾರಕ್ಕೆ ಕೋಟ್ಯಂತರ ತೆರಿಗೆ ನಷ್ಟವಾಗುತ್ತಿದೆ ಮತ್ತು ಸ್ಥಳೀಯ ಕಾರ್ಖಾನೆಗಳು ಪೈಪೋಟಿಯಲ್ಲಿ ಹಿನ್ನಡೆಯುತ್ತಿವೆ. ಆಳಂದ ತಾಲ್ಲೂಕಿನಲ್ಲಿ ಕಳೆದ ಕೆಲ ದಶಕಗಳಲ್ಲಿ ಸುರಿದ ಅತ್ಯಧಿಕ ಮಳೆಯಿಂದಾಗಿ 1,279 ಹೆಕ್ಟೇರ್ ಕಬ್ಬು ಮತ್ತು 2.9 ಲಕ್ಷ ಹೆಕ್ಟೇರ್ ಇತರ ಬೆಳೆಗಳು ಹಾನಿಗೊಂಡು ₹500 ಕೋಟಿ ರೂಪಾಯಿಗಳಷ್ಟು ಆರ್ಥಿಕ ನಷ್ಟ ಉಂಟಾಗಿದೆ. ಈ ಪರಿಸ್ಥಿತಿಯಲ್ಲಿ ರೈತನ ಕಣ್ಣೀರು ಒರೆಸುವ ಕೆಲಸ ಸರ್ಕಾರದ ಕರ್ತವ್ಯವಾಗಬೇಕಿದೆ ಎಂದು ಹೇಳಿದ್ದಾರೆ.

ಎನ್‍ಎಸ್‍ಎಲ್ ಕಾರ್ಖಾನೆಯು ತಕ್ಷಣ ಪ್ರತಿ ಟನ್ ಕಬ್ಬಿಗೆ ₹3,500 ದರ ನಿಗದಿ ಮಾಡಬೇಕು. ಶೇ.9.5 ಇಳುವರಿ ಆಧಾರದಲ್ಲಿ ಎಫ್‍ಆರ್‍ಪಿ ಪರಿಷ್ಕರಿಸಬೇಕು. ಮಳೆ ನಷ್ಟಕ್ಕೆ ರೈತರಿಗೆ ಕನಿಷ್ಠ ₹25,000 ಪ್ರತಿ ಎಕರೆ ಪರಿಹಾರ ನೀಡಬೇಕು. ಕಬ್ಬು ನಿಯಂತ್ರಣ ಮಂಡಳಿಯಲ್ಲಿನ ಹಿತಾಸಕ್ತಿಗಳನ್ನು ತೊಡೆದು, ಪಾರದರ್ಶಕ ನೀತಿ ತರಬೇಕು. ರೈತನ ಬೆವರು ಈ ದೇಶದ ನಾಡಿ ಅವನಿಗೆ ನ್ಯಾಯ ಸಿಗದೆ ಇದ್ದರೆ, ಆಳಂದದ ರೈತರ ಕಣ್ಣೀರಿನ ಶಾಪ ರಾಜ್ಯ ಸರ್ಕಾರಕ್ಕೆ ಹಾಗೂ ಪಟ್ಟಭದ್ರ ಹಿತಾಸಕ್ತಿಗಳಿಗೆ ತಟ್ಟದೇ ಇರುವದಿಲ್ಲ. ಆದ್ದರಿಂದ ರಾಜ್ಯ ಸರ್ಕಾರವು ತಕ್ಷಣ ರೈತರ ಧ್ವನಿಗೆ ಸ್ಪಂದಿಸಲಿ ಇಲ್ಲವಾದಲ್ಲಿ ಮಾಜಿ ಶಾಸಕರಾದ ಸುಭಾಷ್ ಆರ್. ಗುತ್ತೇದಾರ, ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಹರ್ಷಾ ಎಸ್ ಗುತ್ತೇದಾರ ಹಾಗೂ ಬಿಜೆಪಿ ಆಳಂದ ಮಂಡಲ ಅಧ್ಯಕ್ಷ ಮಲ್ಲಿಕಾರ್ಜುನ ಕಂದಗೂಳೆ ನೇತೃತ್ವದಲ್ಲಿ ರೈತರೊಂದಿಗೆ ಬೃಹತ್ ಹೋರಾಟ ಹಮ್ಮಿಕೊಂಡು ರೈತರ ಪಾಲಿನ ಹಕ್ಕಿಗಾಗಿ ಬೀದಿಗಿಳಿಯಲಿದ್ದೇವೆ ಎಂದು ಎಚ್ಚರಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X