Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ತೊಗರಿ ಬೆಳೆಯಲ್ಲಿ ಕೀಟ,...

Kalaburagi | ತೊಗರಿ ಬೆಳೆಯಲ್ಲಿ ಕೀಟ, ರೋಗಗಳ ನಿಯಂತ್ರಣಕ್ಕೆ ವೈಜ್ಞಾನಿಕ ಕ್ರಮ ಅನುಸರಿಸಿ: ಡಾ.ಎನ್.ಎಂ.ಸುನಿಲ್ ಕುಮಾರ್

ವಾರ್ತಾಭಾರತಿವಾರ್ತಾಭಾರತಿ23 Oct 2026 7:58 PM IST
share
Kalaburagi | ತೊಗರಿ ಬೆಳೆಯಲ್ಲಿ ಕೀಟ, ರೋಗಗಳ ನಿಯಂತ್ರಣಕ್ಕೆ ವೈಜ್ಞಾನಿಕ ಕ್ರಮ ಅನುಸರಿಸಿ: ಡಾ.ಎನ್.ಎಂ.ಸುನಿಲ್ ಕುಮಾರ್

ಕಲಬುರಗಿ: ತೊಗರಿ ಬೆಳೆಯ ಹೂ, ಮೊಗ್ಗು ಮತ್ತು ಕಾಯಿ ಕಟ್ಟುವ ಹಂತಗಳಲ್ಲಿ ಕೀಟ ಹಾಗೂ ರೋಗಗಳ ಬಾಧೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ರೈತರು ಸೂಕ್ತ ಸಮಯದಲ್ಲಿ ವೈಜ್ಞಾನಿಕ ಸಸ್ಯ ಸಂರಕ್ಷಣಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಕೃಷಿ ಕೀಟಶಾಸ್ತ್ರ ಪ್ರಾಧ್ಯಾಪಕ ಡಾ.ಎನ್.ಎಂ.ಸುನಿಲ್ ಕುಮಾರ್ ಸಲಹೆ ನೀಡಿದರು.

ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ವ್ಯಾಪ್ತಿಯ ಕಲಬುರಗಿ ಕೃಷಿ ಮಹಾವಿದ್ಯಾಲಯದ ಅಂತಿಮ ವರ್ಷದ ವಿದ್ಯಾರ್ಥಿಗಳ ಗ್ರಾಮೀಣ ಕೃಷಿ ಕಾರ್ಯಾನುಭವ ಕಾರ್ಯಕ್ರಮದ ಅಂಗವಾಗಿ, ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಬೈರಾಮಡಗಿ ಗ್ರಾಮದಲ್ಲಿ ಪ್ರಗತಿಪರ ರೈತ ಮಲ್ಲಿನಾಥ್ ಪಾಟೀಲ್ ಅವರ ಸಮಗ್ರ ಕೃಷಿ ಕ್ಷೇತ್ರದಲ್ಲಿ ಆಯೋಜಿಸಿದ್ದ ಸಮಗ್ರ ಕೀಟ ಮತ್ತು ರೋಗ ನಿರ್ವಹಣೆ ಕುರಿತ ಮಾಹಿತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಗ್ರಾಮದಲ್ಲಿ ಬಹುತೇಕ ಮಳೆಯಾಶ್ರಿತ ತೊಗರಿ ಬೆಳೆ ಹೂ ಬಿಡುವ ಹಂತ ತಲುಪಿದೆ. ಈ ಸಂದರ್ಭದಲ್ಲಿ ಬೆಳೆಗೆ ಹಾನಿ ಉಂಟುಮಾಡುವ ಕೀಟಗಳ ಗುರುತಿಸುವಿಕೆ ಹಾಗೂ ಅವುಗಳ ಪರಿಸರಸ್ನೇಹಿ ನಿರ್ವಹಣೆ ಕುರಿತು ರೈತರಿಗೆ ಮಾಹಿತಿ ನೀಡಿದರು. ಎಲೆ, ಹೂವು ಮತ್ತು ಕಾಯಿಗಳಿಗೆ ಹಾನಿ ಉಂಟುಮಾಡುವ ಕೀಟಗಳ ಬಾಧೆಯನ್ನು ಆರಂಭಿಕ ಹಂತದಲ್ಲಿಯೇ ಗುರುತಿಸಿ, ಸೂಕ್ತ ನಿರ್ವಹಣಾ ಕ್ರಮಗಳನ್ನು ಅನುಸರಿಸುವುದು ಮುಖ್ಯ ಎಂದು ತಿಳಿಸಿದರು.

ತೋಟಗಾರಿಕೆ ಸಹ ಪ್ರಾಧ್ಯಾಪಕ ಡಾ. ಮಲ್ಲಿಕಾರ್ಜುನ ನಿಂಗದಲ್ಲಿ ಅವರು ತೋಟಗಾರಿಕೆ ಇಲಾಖೆಯ ವಿವಿಧ ಯೋಜನೆಗಳು ಹಾಗೂ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು. ಕಡಿಮೆ ಪ್ರಮಾಣದ ನೀರನ್ನು ಬಳಸಿಕೊಂಡು ತರಕಾರಿ ಬೆಳೆಗಳನ್ನು ಬೆಳೆಯುವ ವಿಧಾನಗಳನ್ನು ವಿವರಿಸಿ, ರೈತರು ಲಭ್ಯವಿರುವ ನೀರಿನ ಸಂಪನ್ಮೂಲಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಸಸ್ಯ ರೋಗಶಾಸ್ತ್ರ ಸಹ ಪ್ರಾಧ್ಯಾಪಕ ಡಾ. ಜಹೀರ್ ಅಹಮದ್ ಅವರು ಮಧ್ಯಮ ಅವಧಿಯ ತೊಗರಿ ತಳಿಗಳ ವಿಶೇಷತೆಗಳು ಹಾಗೂ ಹವಾಮಾನ ಬದಲಾವಣೆಯಿಂದ ಬೆಳೆಯಲ್ಲಿ ಕಾಣಿಸಿಕೊಳ್ಳಬಹುದಾದ ವಿವಿಧ ಸಸ್ಯ ರೋಗಗಳ ಕುರಿತು ಮಾಹಿತಿ ನೀಡಿದರು. ಹೂ ಮತ್ತು ಕಾಯಿ ಹಂತದಲ್ಲಿ ಮಂಜು ಸೇರಿದಂತೆ ಪ್ರತಿಕೂಲ ಹವಾಮಾನ ಪರಿಸ್ಥಿತಿಗಳಿಂದ ಉಂಟಾಗಬಹುದಾದ ರೋಗಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸುವಂತೆ ತಿಳಿಸಿದರು.

ಅರಣ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಗಜೇಂದ್ರ ಅವರು ಹೊಲದ ಬದುಗಳಲ್ಲಿ ಬೆಳೆಸಬಹುದಾದ ಬಹುಪಯೋಗಿ ಅರಣ್ಯ ಮರಗಳ ಕುರಿತು ಮಾಹಿತಿ ನೀಡಿದರು. ತೇಗ ಮತ್ತು ಹೆಬ್ಬೇವು ಮೊದಲಾದ ಮರಗಳನ್ನು ಬೆಳೆಸುವುದರಿಂದ ರೈತರಿಗೆ ದೀರ್ಘಾವಧಿಯಲ್ಲಿ ದೊರೆಯಬಹುದಾದ ಪ್ರಯೋಜನಗಳನ್ನು ವಿವರಿಸಿದರು.

ಕಾರ್ಯಕ್ರಮದ ಅಂಗವಾಗಿ ಕೃಷಿ ಮಹಾವಿದ್ಯಾಲಯದ ಅಂತಿಮ ವರ್ಷದ ವಿದ್ಯಾರ್ಥಿಗಳು ಬೈರಾಮಡಗಿ ಗ್ರಾಮದ ವಿವಿಧ ಕೃಷಿ ಕ್ಷೇತ್ರಗಳಿಗೆ ಭೇಟಿ ನೀಡಿ ರೈತರೊಂದಿಗೆ ಸಂವಾದ ನಡೆಸಿದರು. ಬರ ಪರಿಸ್ಥಿತಿಯಲ್ಲಿ ಬೆಳೆಗಳ ನಿರ್ವಹಣೆ, ಜಾನುವಾರು ಸಾಕಾಣಿಕೆ ಹಾಗೂ ಕೃಷಿ ಯಂತ್ರೋಪಕರಣಗಳ ಬಳಕೆ ಕುರಿತು ರೈತರ ಅನುಭವ ಮತ್ತು ಅಭಿಪ್ರಾಯಗಳನ್ನು ಸಂಗ್ರಹಿಸಿದರು. ಈ ಮೂಲಕ ಗ್ರಾಮೀಣ ಪ್ರದೇಶಗಳಲ್ಲಿನ ಕೃಷಿ ಸಮಸ್ಯೆಗಳನ್ನು ಅರಿತುಕೊಳ್ಳಲು ಹಾಗೂ ಪ್ರಾಯೋಗಿಕ ಜ್ಞಾನ ಪಡೆಯಲು ವಿದ್ಯಾರ್ಥಿಗಳಿಗೆ ಅವಕಾಶ ದೊರೆಯಿತು.

ಕೃಷಿ ಮಹಾವಿದ್ಯಾಲಯದ ಡೀನ್ ಡಾ. ಬಿ.ಎಂ. ದೊಡ್ಡಮನಿ, ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರದ ಮುಖ್ಯಸ್ಥ ಡಾ. ಕೆ.ಎಂ. ದೊಡ್ಡಮನಿ ಹಾಗೂ ಕೃಷಿ ವಿಸ್ತರಣಾ ಸಹ ಪ್ರಾಧ್ಯಾಪಕ ಡಾ. ಸಿದ್ರಾಮ್ ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಕ್ರಮ ನಡೆಯುತ್ತಿದೆ. ಎರಡು ತಿಂಗಳ ಅವಧಿಯ ಗ್ರಾಮೀಣ ಕೃಷಿ ಕಾರ್ಯಾನುಭವ ಕಾರ್ಯಕ್ರಮವು ಗಬ್ಬೂರು ಬಿ ಮತ್ತು ಬೈರಾಮಡಗಿ ಗ್ರಾಮಗಳಲ್ಲಿ ಮುಂದುವರಿಯಲಿದೆ.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X