ಕಲಬುರಗಿ | ಸಂತ್ರಸ್ತ ಕುಟುಂಬಗಳಿಗೆ ಆಹಾರ ಕಿಟ್ ವಿತರಣೆ

ಕಲಬುರಗಿ : ಚಿತ್ತಾಪುರ ಪಟ್ಟಣದ ಬಾಹರ್ ಪೇಟ್, ಚಿತ್ತಾಪುರ ತಾಲೂಕಿನ ಗುಂಡಗುರ್ತಿ, ಬಳವಡಗಿ ಗ್ರಾಮಗಳಲ್ಲಿ ಮನೆಗಳಲ್ಲಿ ನೀರು ನುಗ್ಗಿದ ಸಂತ್ರಸ್ತ ಕುಟುಂಬಗಳಿಗೆ ಕಲಬುರಗಿ ಲೋಕಸಭಾ ಸದಸ್ಯ ರಾಧಾಕೃಷ್ಣ ದೊಡ್ಡಮನಿ ಅವರು ಕಳುಹಿಸಿರುವ 500 ಆಹಾರ ಧಾನ್ಯದ ಕಿಟ್ ಗಳನ್ನು ಪುರಸಭೆ ಅಧ್ಯಕ್ಷೆ ಅನ್ನಪೂರ್ಣ ಕಲ್ಲಕ್ ಅವರು ವಿತರಣೆ ಮಾಡಿದರು.
ನಂತರ ಮಾತನಾಡಿದ ಅವರು, ಕಲಬುರಗಿ ಲೋಕಸಭಾ ಸದಸ್ಯ ರಾಧಾಕೃಷ್ಣ ದೊಡ್ಡಮನಿ ಅವರು ಸದಾ ಬಡವರ ಏಳಿಗೆಗಾಗಿ ಶ್ರಮಿಸುವ ನಾಯಕರಾಗಿದ್ದಾರೆ. ಬಡವರಿಗೆ ಏನೇ ತೊಂದರೆಯಾದರೇ ಸಾಕು ಕೂಡಲೇ ಅವರಿಗೆ ಪರಿಹಾರ ರೂಪದಲ್ಲಿ ಸಹಾಯ ಮಾಡುವ ಮನಸ್ಸು ಉಳ್ಳವರಾಗಿದ್ದಾರೆ ಎಂದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ನಾಗಯ್ಯ ಹಿರೇಮಠ, ಪುರಸಭೆ ಸದಸ್ಯ ಪ್ರಭು ಗಂಗಾಣಿ, ನಾಗು ಕಲ್ಲಕ್, ಮೈನೋದ್ದಿನ್, ಸುಭಾನ್ ಸೇರಿದಂತೆ ಅನೇಕ ಮುಖಂಡರು ಇದ್ದರು.
Next Story





