ಕಲಬುರಗಿ | ಕೆಲಸದ ಸ್ಥಳಗಳಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ತಡೆಗೆ ʼಆಂತರಿಕ ದೂರು ಸಮಿತಿʼ ರಚನೆ ಕಡ್ಡಾಯ
ಕಲಬುರಗಿ: ಕಲಬುರಗಿ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ವಾಣಿಜ್ಯ ಸಂಸ್ಥೆಗಳು, ಉದ್ದಿಮೆಗಳು, ಕಾರ್ಖಾನೆಗಳು ಪ್ರತಿ ಸಂಸ್ಥೆಯ ಮಾಲಕರು ತಮ್ಮ ಸಂಸ್ಥೆಯಲ್ಲಿ ಕೆಲಸದ ಸ್ಥಳಗಳಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಕಿರುಕುಳ (ತಡೆಗಟ್ಟುವಿಕೆ, ನಿಷೇಧಿಸುವಿಕೆ ಮತ್ತು ನಿವಾರಿಸುವಿಕೆ) ಅಧಿನಿಯಮ-2013ನ್ನು ಅನುಷ್ಠಾನಗೊಳಿಸಿ ಸೆಕ್ಷನ್-4ರನ್ವಯ “ಆಂತರಿಕ ದೂರು ಸಮಿತಿ” ರಚನೆ ಮಾಡಬೇಕೆಂದು ಕಲಬುರಗಿ ಉಪವಿಭಾಗದ ಕಾರ್ಮಿಕ ಅಧಿಕಾರಿಗಳು ತಿಳಿಸಿದ್ದಾರೆ.
ಸರ್ವೋಚ್ಛ ನ್ಯಾಯಾಲಯ ನೀಡಿರುವ ನಿರ್ದೇಶನದಂತೆ 10 ಅಥವಾ 10ಕ್ಕಿಂತ ಹೆಚ್ಚು ಮಹಿಳಾ ಕಾರ್ಮಿಕರನ್ನು ಹೊಂದಿರುವ ಎಲ್ಲಾ ವಾಣಿಜ್ಯ ಸಂಸ್ಥೆಗಳು, ಉದ್ದಿಮೆಗಳು, ಕಾರ್ಖಾನೆಗಳು ಪ್ರತಿ ಸಂಸ್ಥೆಯ ಮಾಲಕರು ತಮ್ಮ ಸಂಸ್ಥೆಯಲ್ಲಿ ಕೆಲಸದ ಸ್ಥಳಗಳಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಕಿರುಕುಳ (ತಡೆಗಟ್ಟುವಿಕೆ, ನಿಷೇಧಿಸುವಿಕೆ ಮತ್ತು ನಿವಾರಿಸುವಿಕೆ) ಅಧಿನಿಯಮ-2013 ಕಡ್ಡಾಯವಾಗಿ ಅನುಷ್ಠಾನಗೊಳಿಸಿ ಕೆಲಸ ಮಾಡುವ ಸ್ಥಳದಲ್ಲಿ ಸೆಕ್ಷನ್-4ರನ್ವಯ ʼಆಂತರಿಕ ದೂರು ಸಮಿತಿʼ ರಚನೆ ಮಾಡುವುದು ಕಡ್ಡಾಯವಾಗಿದೆ.
ಈಗಾಗಲೆ ಆಂತರಿಕ ದೂರು ಸಮಿತಿ ರಚಿಸಿದ ಸಂಸ್ಥೆಯವರು ಹಾಗೂ ಮುಂದೆ ʼಆಂತರಿಕ ದೂರು ಸಮಿತಿʼ ರಚಿಸುವ ಸಂಸ್ಥೆಯವರು ಸಮಿತಿ ರಚನೆ ಮಾಡಿದ ಆದೇಶದ ಪ್ರತಿಯನ್ನು ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿಗೆ ಹಾಗೂ ಕಲಬುರಗಿ ಎಮ್.ಎಸ್.ಕೆ. ಮಿಲ್ ರಸ್ತೆಯ ಸರ್ಕಾರಿ ಐಟಿಐ ಕಾಲೇಜ್ ಆವರಣದಲ್ಲಿರುವ ಕಾರ್ಮಿಕ ಭವನದಲ್ಲಿನ ಕಾರ್ಮಿಕ ಅಧಿಕಾರಿಗಳ ಕಚೇರಿ ವಿಳಾಸಕ್ಕೆ ಸಲ್ಲಿಸಬೇಕೆಂದು ಅವರು ತಿಳಿಸಿದ್ದಾರೆ.





