Kalaburagi | ಜು.8 ರಿಂದ ಉಚಿತ ಕಣ್ಣಿನ ತಪಾಸಣೆ, ಶಸ್ತ್ರ ಚಿಕಿತ್ಸಾ ಶಿಬಿರ

ಕಲಬುರಗಿ : ಕಲಬುರಗಿ ಜಿಲ್ಲೆಯಲ್ಲಿ ಜಿಲ್ಲಾ ಅಂಧತ್ವ ನಿಯಂತ್ರಣ ಕಾರ್ಯಕ್ರಮದಡಿ ಎಲ್ಲಾ ತಾಲೂಕು ಸಾರ್ವಜನಿಕ ಆಸ್ಪತ್ರೆಗಳಲ್ಲಿ, ಸಮೂದಾಯ ಆರೋಗ್ಯ ಕೇಂದ್ರಗಳಲ್ಲಿ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ 2026ರ ಜು.8 ರಿಂದ ಉಚಿತ ಕಣ್ಣಿನ ತಪಾಸಣೆ ಹಾಗೂ ಶಸ್ತ್ರಚಿಕಿತ್ಸೆ ಶಿಬಿರವನ್ನು ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕೆಂದು ಕಲಬುರಗಿ ಜಿಲ್ಲಾ ಅಂಧತ್ವ ನಿಯತ್ರಣಾಧಿಕಾರಿಗಳು ತಿಳಿಸಿದ್ದಾರೆ.
ಅಫಜಲಪುರ ತಾಲೂಕು : ಜು.9 ರಂದು ದೇಸಾಯಿ ಕಲ್ಲೂರ ಪ್ರಾಥಮಿಕ ಆರೋಗ್ಯ ಕೇಂದ್ರ, ಜು.21 ರಂದು ಕರಜಗಿ ಪ್ರಾಥಮಿಕ ಆರೋಗ್ಯ ಕೇಂದ್ರ, ಜು.30 ರಂದು ಸ್ಟೇಶನ್ ಗಾಣಗಾಪುರ ಸಮುದಾಯ ಆರೋಗ್ಯ ಕೇಂದ್ರ.
ಆಳಂದ ತಾಲೂಕು : ಜು.8 ರಂದು ನಿಂಬರ್ಗಾ ಸಮುದಾಯ ಆರೋಗ್ಯ ಕೇಂದ್ರ, ಜು.16 ರಂದು ಆಳಂದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ, ಜು.21 ರಂದು ನಿಂಬರ್ಗಾ ಸಮುದಾಯ ಆರೋಗ್ಯ ಕೇಂದ್ರ.
ಚಿತ್ತಾಪುರ ತಾಲೂಕು : ಜು.9 ರಂದು ವಾಡಿ ಸಮುದಾಯ ಆರೋಗ್ಯ ಕೇಂದ್ರ, ಜು.21 ರಂದು ಚಿತ್ತಾಪುರ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ, ಶಹಾಬಾದ್ ಸಮುದಾಯ ಆರೋಗ್ಯ ಕೇಂದ್ರ ಹಾಗೂ ಮಂಗಲಗಿ ಪ್ರಾಥಮಿಕ ಆರೋಗ್ಯ ಕೇಂದ್ರ.
ಚಿಂಚೋಳಿ ತಾಲೂಕು : ಜು.14 ರಂದು ಚಿಂಚೋಳಿ ಸರ್ಕಾರಿ ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಹಾಗೂ ಜು.23 ರಂದು ಕೊಡ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ.
ಜೇವರ್ಗಿ ತಾಲೂಕು : ಜು.10 ರಂದು ಯಡ್ರಾಮಿ ಸಮುದಾಯ ಆರೋಗ್ಯ ಕೇಂದ್ರ, ಜು.13 ರಂದು ಜೇವರ್ಗಿ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಹಾಗೂ ಜು.30 ರಂದು ವಿರಕ್ತ ಮಠ ಯಡ್ರಾಮಿ.
ಕಲಬುರಗಿ ತಾಲೂಕು : ಜು.15 ರಂದು ಫರತಾಬಾದ್ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಜು.23 ರಂದು ಹಿರೇಸಾವಳಗಿ ಪ್ರಾಥಮಿಕ ಆರೋಗ್ಯ ಕೇಂದ್ರ.






