Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ| ನಾಲವಾರದ ಪೂಜ್ಯರ ಜನ್ಮದಿನದ...

ಕಲಬುರಗಿ| ನಾಲವಾರದ ಪೂಜ್ಯರ ಜನ್ಮದಿನದ ಅಂಗವಾಗಿ 155ಕ್ಕೂ ಹೆಚ್ಚು ಮಂದಿಗೆ ಉಚಿತ ಕ್ಷೌರ ಸೇವೆ

ವಾರ್ತಾಭಾರತಿವಾರ್ತಾಭಾರತಿ21 Oct 2026 7:40 PM IST
share
ಕಲಬುರಗಿ| ನಾಲವಾರದ ಪೂಜ್ಯರ ಜನ್ಮದಿನದ ಅಂಗವಾಗಿ 155ಕ್ಕೂ ಹೆಚ್ಚು ಮಂದಿಗೆ ಉಚಿತ ಕ್ಷೌರ ಸೇವೆ

ಕಲಬುರಗಿ: ಚಿತ್ತಾಪುರ ತಾಲೂಕಿನ ನಾಲವಾರ ಗ್ರಾಮದ ಸದ್ಗುರು ಶ್ರೀ ಕೋರಿಸಿದ್ದೇಶ್ವರ ಮಠದ ಪೀಠಾಧಿಪತಿಗಳಾದ ಪರಮಪೂಜ್ಯ ಶ್ರೀ ಷ.ಬ್ರ.ಡಾ. ಸಿದ್ಧ ತೋಟೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳ 62ನೇ ಜನ್ಮದಿನದ ಅಂಗವಾಗಿ ಕಲಬುರಗಿ ನಗರದ ಬಿದ್ದಾಪುರ ಕಾಲೋನಿಯಲ್ಲಿರುವ ಅನಾಥ ಮತ್ತು ನಿರ್ಗತಿಕರ ಕೇಂದ್ರದಲ್ಲಿ 155ಕ್ಕೂ ಹೆಚ್ಚು ಅನಾಥರು ಹಾಗೂ ಬೌದ್ಧಿಕ ವಿಕಲಚೇತನರಿಗೆ ಉಚಿತ ಕ್ಷೌರ ಸೇವೆ ಸಲ್ಲಿಸಲಾಯಿತು.

ಜಿಲ್ಲಾ ಹಡಪದ ಅಪ್ಪಣ್ಣ ಸಮಾಜದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಹಾಗೂ ಸಮಾಜಸೇವಕ ಮಲ್ಲಿಕಾರ್ಜುನ ಬಿ. ಹಡಪದ ಸುಗೂರ ಎನ್. ಅವರು ಕಳೆದ 18 ವರ್ಷಗಳಿಂದ ಪೂಜ್ಯರ ಜನ್ಮದಿನದ ಅಂಗವಾಗಿ ವಿಭಿನ್ನ ಸಮಾಜಮುಖಿ ಕಾರ್ಯಗಳನ್ನು ನಡೆಸಿಕೊಂಡು ಬರುತ್ತಿದ್ದಾರೆ. ಅದರಂತೆ ಈ ವರ್ಷವೂ ಉಚಿತ ಕ್ಷೌರ ಸೇವೆ ಸಲ್ಲಿಸುವ ಮೂಲಕ ಮಾನವೀಯತೆ ಮೆರೆದರು.

ಈ ಸಂದರ್ಭದಲ್ಲಿ ಮಾತನಾಡಿದ ಪರಮಪೂಜ್ಯ ಶ್ರೀ ರಾಜಶಿವಯೋಗಿ ಮಹಾಸ್ವಾಮಿಗಳು, “ಪೂಜ್ಯರ ಜನ್ಮದಿನದಂದು ಅನಾಥರು ಹಾಗೂ ಬೌದ್ಧಿಕ ವಿಕಲಚೇತನರಿಗೆ ಉಚಿತ ಕ್ಷೌರ ಸೇವೆ ಸಲ್ಲಿಸುವ ಮೂಲಕ ಮಲ್ಲಿಕಾರ್ಜುನ ಬಿ. ಹಡಪದ ಸುಗೂರ ಎನ್. ಅವರು ನಿಸ್ವಾರ್ಥ ಸಮಾಜಸೇವೆ ಮಾಡುತ್ತಿದ್ದಾರೆ. ಇಂತಹ ಸೇವಾ ಕಾರ್ಯಗಳು ಸಮಾಜಕ್ಕೆ ಮಾದರಿಯಾಗಿವೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ನಾಗಲಿಂಗಯ್ಯ ಹಿರೇಮಠ ಮಹಾಸ್ವಾಮಿಗಳು ಹಾಗೂ ವೀರಶೈವ ಸಮಾಜದ ಮುಖಂಡರು ಮಾತನಾಡಿ, “ಬಡ ಕುಟುಂಬದಲ್ಲಿ ಹುಟ್ಟಿ, ಬಡವರು ಹಾಗೂ ಅನಾಥರ ಸೇವೆಗೆ ತಮ್ಮನ್ನು ಸಮರ್ಪಿಸಿಕೊಂಡಿರುವ ಮಲ್ಲಿಕಾರ್ಜುನ ಬಿ. ಹಡಪದ ಸುಗೂರ ಎನ್. ಅವರ ಕಾರ್ಯ ಶ್ಲಾಘನೀಯ. ಅವರೊಂದಿಗೆ ಸೇವೆಯಲ್ಲಿ ತೊಡಗಿಸಿಕೊಂಡಿರುವ ಎಲ್ಲ ಕಾಯಕ ಬಂಧುಗಳ ಮೇಲೂ ಮಹಾಗುರುವಿನ ಆಶೀರ್ವಾದ ಸದಾ ಇರಲಿ” ಎಂದು ಹಾರೈಸಿದರು.

ಕಲಬುರಗಿ ಜಿಲ್ಲಾ ಹಡಪದ ಅಪ್ಪಣ್ಣ ಸಮಾಜದ ಜಿಲ್ಲಾಧ್ಯಕ್ಷ ಈರಣ್ಣ ಸಿ. ಹಡಪದ ಸಣ್ಣೂರ ಮಾತನಾಡಿ, “ನಮ್ಮ ಸಮಾಜದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಹಾಗೂ ಸಮಾಜಸೇವಕ ಮಲ್ಲಿಕಾರ್ಜುನ ಬಿ. ಹಡಪದ ಸುಗೂರ ಎನ್. ಅವರು ಪರಮಪೂಜ್ಯ ಶ್ರೀ ಷ.ಬ್ರ. ಡಾ. ಸಿದ್ಧ ತೋಟೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳ ಜನ್ಮದಿನದ ಅಂಗವಾಗಿ ವಿವಿಧೆಡೆ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದು ಮೆಚ್ಚುವಂತಹ ಕಾರ್ಯವಾಗಿದೆ. ಮುಂದೆಯೂ ಇಂತಹ ಹತ್ತು ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸಿ ಸಮಾಜದ ಕೀರ್ತಿಯನ್ನು ಮತ್ತಷ್ಟು ಹೆಚ್ಚಿಸಲಿ. ಗುರುವಿನ ಆಶೀರ್ವಾದ ಅವರ ಕುಟುಂಬದವರು ಹಾಗೂ ಅವರೊಂದಿಗೆ ಸೇವೆ ಸಲ್ಲಿಸುತ್ತಿರುವ ಕಾಯಕ ಸಮಾಜದ ಬಂಧುಗಳ ಮೇಲೆ ಸದಾ ಇರಲಿ” ಎಂದು ಹಾರೈಸಿದರು.

ಕಾರ್ಯಕ್ರಮದಲ್ಲಿ ನಿರ್ಗತಿಕರ ಕೇಂದ್ರದ ವೀರೇಶ ಸರ್, ಕಲಬುರಗಿ ಜಿಲ್ಲಾ ಹಡಪದ ಅಪ್ಪಣ್ಣ ಸಮಾಜದ ಗೌರವಾಧ್ಯಕ್ಷ ಬಸವರಾಜ ಹಡಪದ ಸುಗೂರ ಎನ್., ಜಿಲ್ಲಾ ಕಾರ್ಯಾಧ್ಯಕ್ಷ ಭಗವಂತ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಮೇಶ ನೀಲೂರ, ರಾಜ್ಯದ ಮಾಜಿ ಸಂಘಟನಾ ಕಾರ್ಯದರ್ಶಿ ಬಸವರಾಜ ಹಡಪದ ಶಹಾಬಾದ, ಜಿಲ್ಲಾ ಸಹಕಾರ್ಯದರ್ಶಿ ಮಹಾದೇವ ರಾವೂರ, ಕಲಬುರಗಿ ತಾಲೂಕು ಅಧ್ಯಕ್ಷ ಚಂದ್ರಶೇಖರ ತೋನಸನಹಳ್ಳಿ, ಪ್ರಧಾನ ಕಾರ್ಯದರ್ಶಿ ವಿನೋದ ಅಂಬಲಗಾ, ನಾಲವಾರ ಕಸಾಪ ಅಧ್ಯಕ್ಷ ಅಂಜುನಾಥ ಎಸ್. ನಾಯ್ಕಲ್, ಶಂಭುಲಿಂಗ ಹಡಪದ ಯಲಗೋಡ, ವಿಶ್ವನಾಥ ಹಡಪದ ಸುಗೂರ ಎನ್., ಮಲ್ಲಿಕಾರ್ಜುನ ಬೆಳಗುಪ್ಪಿ, ಶಂಕರ ಹಡಪದ ಹರವಾಳ ಸೇರಿದಂತೆ ನಿರ್ಗತಿಕರ ಕೇಂದ್ರದ ಸಿಬ್ಬಂದಿ ಉಪಸ್ಥಿತರಿದ್ದರು.

Tags

Kalaburagihaircutanniversary
share
ವಾರ್ತಾಭಾರತಿ
ವಾರ್ತಾಭಾರತಿ
Next Story
X