ಕಲಬುರಗಿ | ಶರಣಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಉಚಿತ ಆರೋಗ್ಯ ಸಮುದಾಯ ಕೇಂದ್ರ ಉದ್ಘಾಟನೆ

ಕಲಬುರಗಿ: ನಗರದಲ್ಲಿರುವ ಶ್ರೀ ಶರಣಬಸವೇಶ್ವರ ದೇವಸ್ಥಾನದಲ್ಲಿ ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಗೆ ಆರೋಗ್ಯ ಸೇವೆ ಮಾಡಲು ಅವಕಾಶ ಸಿಕ್ಕಿರುವುದು ನಮ್ಮ ಪುಣ್ಯ ಎಂದು ಹೈದರಾಬಾದ್ ಕರ್ನಾಟಕದ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಶಶೀಲ್ ಜಿ.ನಮೋಶಿ ಹೇಳಿದರು.
ಅವರು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ, ಮಹಾದೇವಪ್ಪ ರಾಂಪೂರೆ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ ಆಸ್ಪತ್ರೆಯ ವತಿಯಿಂದ ಶ್ರೀ ಶರಣಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಉಚಿತ ಆರೋಗ್ಯ ಸಮುದಾಯ ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರದ ಉದ್ಘಾಟನೆ ಸಮಾರಂಭದಲ್ಲಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು
ಶ್ರೀ ಶರಣಬಸವೇಶ್ವರ ದೇವಸ್ಥಾನಕ್ಕೆ ಶ್ರಾವಣ ಮಾಸದಲ್ಲಿ ನಾಡಿನ ಲಕ್ಷಾಂತರ ಭಕ್ತರು ಭೇಟಿ ನೀಡಿ ಅಪ್ಪನ ಆಶೀರ್ವಾದ ಪಡೆಯಲು ಬರುತ್ತಾರೆ. ಅಂತಹ ಪುಣ್ಯ ಕ್ಷೇತ್ರದಲ್ಲಿ ಭಕ್ತರ ಆರೋಗ್ಯ ದೃಷ್ಟಿಯಿಂದ ಉಚಿತ ಸಮುದಾಯ ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರದ ಅವಶ್ಯಕತೆ ಇತ್ತು, ಇದನ್ನು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೇರ್ಮನ್ ರಾದ ಡಾ.ದಾಕ್ಷಾಯಿಣಿ ಅವ್ವಾಜಿ ಅವರಿಗೆ ನಾವು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಮಹಾದೇವಪ್ಪ ರಾಂಪೂರೆ ವೈದ್ಯಕೀಯ ಮಹಾವಿದ್ಯಾಲಯ, ಹಾಗೂ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ ಆಸ್ಪತ್ರೆಯ ವತಿಯಿಂದ ಉಚಿತ ಸಮುದಾಯ ಹಾಗೂ ಸ್ವಾಸ್ಥ್ಯ ಕೇಂದ್ರವನ್ನು ಪ್ರಾರಂಭಿಸುತ್ತೇವೆ ಎಂದು ಕೇಳಿಕೊಂಡಾಗ ಅವರು ಸಂತೋಷದಿಂದ ಒಪ್ಪಿದರು ಎಂದು ಹೇಳಿದರು.
ಭಕ್ತರ ಆರೋಗ್ಯ ದೃಷ್ಟಿಯಿಂದ ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಒಳ್ಳೆಯ ಕಾರ್ಯವನ್ನು ಮಾಡಿದೆ ಎಂದು ಸಮುದಾಯದ ಕೇಂದ್ರ ಉದ್ಘಾಟನೆ ನೇರವೇರಿಸಿದ ಶ್ರೀ ಶರಣಬಸವೇಶ್ವರ ವಿದ್ಯಾ ವರ್ಧಕ ಸಂಘದ ಕಾರ್ಯದರ್ಶಿಗಳಾದ ಬಸವರಾಜ ದೇಶಮುಖ್ ತಿಳಿಸಿದರು.
ಸಂಸ್ಥೆಯ ಉಪಾಧ್ಯಕ್ಷರಾದ ರಾಜಾ ಭಿ. ಭೀಮಳ್ಳಿ ಮಾತನಾಡಿದದರು.
ಈ ಸಂದರ್ಭದಲ್ಲಿ ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳಾದ ಉದಯಕುಮಾರ್ ಚಿಂಚೋಳಿ, ಆಡಳಿತ ಮಂಡಳಿ ಸದಸ್ಯರು ಹಾಗೂ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ ಆಸ್ಪತ್ರೆಯ ಸಂಚಾಲಕರಾದ ಡಾ.ಕಿರಣ್ ದೇಶಮುಖ್, ರಾಂಪೂರೆ ವೈದ್ಯಕೀಯ ಮಹಾವಿದ್ಯಾಲಯದ ಸಂಚಾಲಕರಾದ ಡಾ.ಶರಣಬಸಪ್ಪ ಹರವಾಳ, ಡಾ.ಗುರುಲಿಂಗಪ್ಪ ಪಾಟೀಲ್ ಡೀನ್ ಡಾ.ಶರಣಗೌಡ ಪಾಟೀಲ್, ವೈಸ್ ಡೀನ್ ಡಾ.ವಿಜಯಕುಮಾರ್ ಕಪ್ಪಿಕೇರಿ, ಡಾ.ಸುನೀಲ್ ದೇಶಮುಖ್ ಹಾಗೂ ಅನೇಕ ವೈದ್ಯಕಿಯ ಸಿಬ್ಬಂದಿ ಉಪಸ್ಥಿತರಿದ್ದರು.







