Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಗ್ರಾಮೀಣ ಪ್ರದೇಶದ ನಿವೇಶನ...

Kalaburagi | ಗ್ರಾಮೀಣ ಪ್ರದೇಶದ ನಿವೇಶನ ರಹಿತರಿಗೆ ಉಚಿತ ನಿವೇಶನ ಸೌಲಭ್ಯ: ರಾಹುಲ್ ಶರಣಪ್ಪ ಸಂಕನೂರ

ವಾರ್ತಾಭಾರತಿವಾರ್ತಾಭಾರತಿ21 Sept 2026 7:34 PM IST
share
Kalaburagi | ಗ್ರಾಮೀಣ ಪ್ರದೇಶದ ನಿವೇಶನ ರಹಿತರಿಗೆ ಉಚಿತ ನಿವೇಶನ ಸೌಲಭ್ಯ: ರಾಹುಲ್ ಶರಣಪ್ಪ ಸಂಕನೂರ

ಕಲಬುರಗಿ : 2018ರ ವಸತಿ ಮತ್ತು ನಿವೇಶನ ರಹಿತರ ಸಮೀಕ್ಷೆ ಪಟ್ಟಿಯಿಂದ ಹೊರಗುಳಿದಿರುವ ಅರ್ಹ ಫಲಾನುಭವಿಗಳನ್ನು ಸೇರ್ಪಡೆಗೊಳಿಸಲು 2026ರ ಸೆಪ್ಟೆಂಬರ್ 30ರವರೆಗೆ ಅಂತಿಮ ಕಾಲಾವಕಾಶ ನೀಡಲಾಗಿದೆ. ಗ್ರಾಮೀಣ ಆಶ್ರಯ ನಿವೇಶನ ಯೋಜನೆಯಡಿ ಗ್ರಾಮೀಣ ಪ್ರದೇಶದ ನಿವೇಶನ ರಹಿತ ಅರ್ಹ ಫಲಾನುಭವಿಗಳಿಂದ ಉಚಿತ ನಿವೇಶನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಯೋಜನೆಯ ನಿಯಮಗಳ ಪ್ರಕಾರ ಅರ್ಜಿದಾರರು ಕಡ್ಡಾಯವಾಗಿ ಮಹಿಳೆಯಾಗಿರಬೇಕು. ವಿವಾಹಿತ ಅಥವಾ ಏಕ ಮಹಿಳಾ ಒಡೆತನದ ಗೃಹಿಣಿಯರು ಅರ್ಜಿ ಸಲ್ಲಿಸಬಹುದು. ಆದರೆ ಮಾಜಿ ಸೈನಿಕರು, ವಿಧುರರು, ಅಂಗವಿಕಲರು ಹಾಗೂ ಹಿರಿಯ ನಾಗರಿಕರಿದ್ದಲ್ಲಿ ಪುರುಷರೂ ಅರ್ಹರಾಗಿರುತ್ತಾರೆ.

ಅರ್ಜಿದಾರರು ಸಂಬಂಧಪಟ್ಟ ಗ್ರಾಮೀಣ ಪ್ರದೇಶದಲ್ಲೇ ವಾಸವಾಗಿರಬೇಕು. ಕುಟುಂಬವು ಆರ್ಥಿಕ ಹಾಗೂ ಸಾಮಾಜಿಕವಾಗಿ ಹಿಂದುಳಿದಿರಬೇಕು ಮತ್ತು ವಾರ್ಷಿಕ ಆದಾಯ 1,20,000 ರೂ. ಗಿಂತ ಕಡಿಮೆ ಇರಬೇಕು.

ಅರ್ಜಿದಾರರ ಕುಟುಂಬವು ವಸತಿ ಹಾಗೂ ನಿವೇಶನ ರಹಿತವಾಗಿರಬೇಕು. ಅರ್ಜಿದಾರರು ಅಥವಾ ಕುಟುಂಬದ ಯಾವುದೇ ಸದಸ್ಯರ ಹೆಸರಿನಲ್ಲಿ ಕರ್ನಾಟಕದ ಯಾವುದೇ ಭಾಗದಲ್ಲಿ ಸ್ವಂತ ಮನೆ ಅಥವಾ ನಿವೇಶನ ಇರಬಾರದು. ಜೊತೆಗೆ ಬೇರೆ ಯಾವುದೇ ಯೋಜನೆ ಅಥವಾ ಇಲಾಖೆಯಿಂದ ವಸತಿ ಅಥವಾ ನಿವೇಶನ ಸೌಲಭ್ಯ ಪಡೆದಿರಬಾರದು.

ಅರ್ಹ ಫಲಾನುಭವಿಗಳು ಪಡಿತರ ಚೀಟಿ, ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ ಹಾಗೂ ಆದಾಯ ಪ್ರಮಾಣ ಪತ್ರ ಸೇರಿದಂತೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಸೆಪ್ಟೆಂಬರ್ 30, 2026ರೊಳಗೆ ತಮ್ಮ ವ್ಯಾಪ್ತಿಯ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಅರ್ಜಿ ಸಲ್ಲಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X