ಕಲಬುರಗಿ | ಮನೆಯಲ್ಲಿ ಗುಂಪು ಸೇರಿಸಿ ಜೂಜಾಟ; ಪಿಎಸ್‌ಐ ಹಗರಣದ ಆರೋಪಿ ದಿವ್ಯಾ ಹಾಗರಗಿ, ರಾಜು ಲೇಂಗಟಿ ಸೇರಿದಂತೆ 7 ಮಂದಿಯ ಬಂಧನ

ಕಲಬುರಗಿ : ನಗರದ ಹಳೇ ಜೇವರ್ಗಿ ರಸ್ತೆಯಲ್ಲಿರುವ ಪಿಎಸ್‌ಐ ಹಗರಣ ಪ್ರಕರಣದ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಮನೆ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿ, ದಿವ್ಯಾ ಹಾಗರಗಿ ಸೇರಿದಂತೆ ಏಳು ಮಂದಿಯನ್ನು ಬಂಧಿಸಿದ್ದಾರೆ.
ಪಿಎಸ್‌ಐ ಹಗರಣ ಪ್ರಕರಣದ ಪ್ರಮುಖ ಆರೋಪಿ ದಿವ್ಯಾ ಹಾಗರಗಿ, ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ರಾಜು ಲೆಂಗಟಿ, ಶಿವಶರಣಪ್ಪ ಮಶಾಳ, ರವೀಂದ್ರ ಮಾನಕರ, ಭಗವಾನ ಜಾಕೋರಿ, ಮಲ್ಲಿನಾಥ ಮಂಗಲಗಿ, ಸಂಗಮೇಶ ನಾಗನಹಳ್ಳಿ ಅವರನ್ನು ಬಂಧಿಸಲಾಗಿದೆ ಎಂದು ಸಿಸಿಬಿ ಪೊಲೀಸರು ತಿಳಿಸಿದ್ದಾರೆ.
ದಿವ್ಯಾ ಹಾಗರಗಿ ತನ್ನ ಮನೆಯಲ್ಲಿ ಗುಂಪು ಸೇರಿಸಿ ಜೂಜಾಟ ನಡೆಸುತ್ತಿರುವ ಕುರಿತಾಗಿ ಮಾಹಿತಿ ಪಡೆದ ಸಿಸಿಬಿ ಪೊಲೀಸರು, ಸರ್ಕಾರಿ ನೌಕರ ಸೇರಿದಂತೆ ಏಳು ಮಂದಿಯನ್ನು ಬಂಧಿಸಿದ್ದು, ಸ್ಥಳದಲ್ಲೇ 43 ಸಾವಿರ ರೂಪಾಯಿ ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಈ ಕುರಿತು ಕಲಬುರಗಿ ನಗರದ ಸ್ಟೇಷನ್ ಬಝಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





