Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ವಿದ್ಯುತ್ ಸರಬರಾಜು...

Kalaburagi | ವಿದ್ಯುತ್ ಸರಬರಾಜು ನಿಯಮಾವಳಿ ಕರಡು ಕುರಿತು ಸಾರ್ವಜನಿಕರ ಅಭಿಪ್ರಾಯ ಸಂಗ್ರಹ

ವಾರ್ತಾಭಾರತಿವಾರ್ತಾಭಾರತಿ15 Oct 2026 7:51 PM IST
share
Kalaburagi | ವಿದ್ಯುತ್ ಸರಬರಾಜು ನಿಯಮಾವಳಿ ಕರಡು ಕುರಿತು ಸಾರ್ವಜನಿಕರ ಅಭಿಪ್ರಾಯ ಸಂಗ್ರಹ

ಕಲಬುರಗಿ: ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು (ಕೆಇಆರ್‌ಸಿ) ನೂತನವಾಗಿ ಸಿದ್ಧಪಡಿಸಿರುವ ಕರ್ನಾಟಕ ವಿದ್ಯುಚ್ಛಕ್ತಿ ಸರಬರಾಜು ನಿಯಮಾವಳಿಗಳು (ಇ.ಎಸ್.ಆರ್.)–2026ರ ಕರಡು ಪ್ರತಿ ಕುರಿತು ಗುರುವಾರ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳ ಜಿಲ್ಲಾ ಮಟ್ಟದ ಸಾರ್ವಜನಿಕ ವಿಚಾರಣಾ ಸಭೆ ನಡೆಸಿ, ವಿವಿಧ ಭಾಗೀದಾರರ ಅಭಿಪ್ರಾಯಗಳನ್ನು ಆಲಿಸಿತು.

ಕೆಇಆರ್‌ಸಿ ಅಧ್ಯಕ್ಷ ಪಿ. ರವಿಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಜಿಲ್ಲೆಯ ಗೃಹ ಮತ್ತು ವಾಣಿಜ್ಯ ವಿದ್ಯುತ್ ಗ್ರಾಹಕರು, ರೈತರು, ಕೈಗಾರಿಕೋದ್ಯಮಿಗಳು, ಗುತ್ತಿಗೆದಾರರು ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಪಾಲ್ಗೊಂಡು ಕರಡು ನಿಯಮಾವಳಿಗಳ ಕುರಿತು ತಮ್ಮ ಆಕ್ಷೇಪಣೆಗಳು ಮತ್ತು ಸಲಹೆಗಳನ್ನು ಲಿಖಿತ ಹಾಗೂ ಮೌಖಿಕವಾಗಿ ಸಲ್ಲಿಸಿದರು.

ಸಭೆಯಲ್ಲಿ ಮಾತನಾಡಿದ ಪ್ರಮುಖರು, ಹೊಸ ನಿಯಮಾವಳಿಗಳು ಜಾರಿಗೆ ಬಂದಾಗ ಗ್ರಾಹಕರು ಮತ್ತು ರೈತರ ಹಿತಾಸಕ್ತಿಗಳಿಗೆ ಯಾವುದೇ ಧಕ್ಕೆಯಾಗಬಾರದು ಎಂದು ಆಗ್ರಹಿಸಿದರು. ವಿದ್ಯುತ್ ಸಂಪರ್ಕ ಪಡೆಯುವ ಪ್ರಕ್ರಿಯೆಯನ್ನು ಸರಳಗೊಳಿಸಬೇಕು ಹಾಗೂ ದಂಡ ವಿಧಿಸುವ ನಿಯಮಗಳು ಗ್ರಾಹಕ ಸ್ನೇಹಿಯಾಗಿರಬೇಕು ಎಂದು ಒತ್ತಾಯಿಸಿದರು. ಹೊಸ ಬಿಲ್ಲಿಂಗ್ ಮತ್ತು ಮೀಟರಿಂಗ್ ನಿಯಮಗಳಿಂದ ಕೈಗಾರಿಕೆಗಳ ಮೇಲೆ ಉಂಟಾಗಬಹುದಾದ ಪರಿಣಾಮಗಳ ಕುರಿತು ಉದ್ಯಮಿಗಳು ಆಯೋಗದ ಗಮನ ಸೆಳೆದರು.

ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದ ಬಳಿಕ ಮಾತನಾಡಿದ ಕೆಇಆರ್‌ಸಿ ಅಧ್ಯಕ್ಷ ಪಿ. ರವಿಕುಮಾರ್, 2026ರ ಆಗಸ್ಟ್ 14ರಂದು ಪ್ರಕಟಿಸಲಾದ ಇ.ಎಸ್.ಆರ್.–2026ರ ಕರಡು ಪ್ರತಿ ಇನ್ನೂ ಅಂತಿಮಗೊಂಡಿಲ್ಲ ಎಂದು ತಿಳಿಸಿದರು. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಾರ್ವಜನಿಕ ವಿಚಾರಣೆ ನಡೆಸಿ ಸಂಗ್ರಹಿಸಲಾಗುವ ಪ್ರತಿಯೊಂದು ಸಲಹೆ ಮತ್ತು ಆಕ್ಷೇಪಣೆಯನ್ನೂ ಕೂಲಂಕಷವಾಗಿ ಪರಿಶೀಲಿಸಲಾಗುವುದು. ಬಳಿಕ ಸಾರ್ವಜನಿಕರ ಹಿತಾಸಕ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ಅಗತ್ಯ ಬದಲಾವಣೆಗಳನ್ನು ಮಾಡಿಕೊಂಡು ಅಂತಿಮ ನಿಯಮಾವಳಿಗಳನ್ನು ರೂಪಿಸಲಾಗುವುದು ಎಂದು ಭರವಸೆ ನೀಡಿದರು.

ಸಭೆಯಲ್ಲಿ ಕೆಇಆರ್‌ಸಿ ಆಯೋಗದ ಸದಸ್ಯ (ಕಾನೂನು) ಎಚ್.ಕೆ. ಜಗದೀಶ್, ಕೆಇಆರ್‌ಸಿ ಸಹಾಯಕ ಕಾರ್ಯದರ್ಶಿ ಜಾವೇದ್ ಅಖ್ತರ್, ಪಿ.ಆರ್. ಗೋಪಿನಾಥ್ ಸೇರಿದಂತೆ ಜೆಸ್ಕಾಂ ಅಧಿಕಾರಿಗಳು, ವಿದ್ಯುತ್ ಗ್ರಾಹಕರು, ರೈತರು ಹಾಗೂ ಸಾರ್ವಜನಿಕರು ನೂರಾರು ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X