Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಜೆಸ್ಕಾಂ ಎಇಇ ಅಮೃತರಾವ್...

Kalaburagi | ಜೆಸ್ಕಾಂ ಎಇಇ ಅಮೃತರಾವ್ ಯಲಾಲ್ ನಿವಾಸ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

ವಾರ್ತಾಭಾರತಿವಾರ್ತಾಭಾರತಿ8 July 2026 11:39 AM IST
share
Kalaburagi | ಜೆಸ್ಕಾಂ ಎಇಇ ಅಮೃತರಾವ್ ಯಲಾಲ್ ನಿವಾಸ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಕಲಬುರಗಿ: ಆದಾಯ ಮೀರಿ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಜೆಸ್ಕಾಂ (ಗುಲ್ಬರ್ಗಾ ವಿದ್ಯುತ್ ಸರಬರಾಜು ಕಂಪೆನಿ ನಿಯಮಿತ) ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (ಎಇಇ) ಅಮೃತರಾವ್ ಯಲಾಲ್ ರ ಮನೆ, ಕಚೇರಿ ಹಾಗೂ ಅವರಿಗೆ ಸಂಬಂಧಿಸಿದ ವಿವಿಧ ಸ್ಥಳಗಳ ಮೇಲೆ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಬುಧವಾರ ಬೆಳಗ್ಗೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.

ಕರ್ನಾಟಕ ಲೋಕಾಯುಕ್ತ ಕಲಬುರಗಿ ಪೊಲೀಸ್ ಅಧೀಕ್ಷಕ ಸಿದ್ಧರಾಜು ಸಿ. ಮಾರ್ಗದರ್ಶನದಲ್ಲಿ ಆರು ವಿಶೇಷ ತಂಡಗಳು ಈ ಕಾರ್ಯಾಚರಣೆ ನಡೆಸಿವೆ.

ಲೋಕಾಯುಕ್ತ ಅಧಿಕಾರಿಗಳು ಕಲಬುರಗಿ ನಗರದ ಜಾಗೃತಿ ಕಾಲನಿಯಲ್ಲಿರುವ ನಿವಾಸ, ಸುಲೆಪೇಟ ನಲ್ಲಿರುವ ಮೂಲ ನಿವಾಸ, ಜಾಗೃತಿ ಕಾಲನಿಯ ಬಸವ ಅಪಾರ್ಟ್ ಮೆಂಟ್ ನಲ್ಲಿರುವ ಸುಮಾರು 40 ಫ್ಲ್ಯಾಟ್ ಗಳು, ಕೊತ್ತಂಬರಿ ಲೇಔಟ್ ನಲ್ಲಿರುವ ಜೆಸ್ಕಾಂ ಕಚೇರಿ, ಜಾಗೃತಿ ಕಾಲನಿಯಲ್ಲಿರುವ ಮಾವನ ಮನೆ, ಹಾಗೂ ಸೇಡಂ ರಸ್ತೆಯ ಫೇಬರ್ ಪ್ಲಾಟಿನಂ ಸ್ಟುಡಿಯೋ ಸೇರಿದಂತೆ ಒಟ್ಟು ಆರು ಸ್ಥಳಗಳಲ್ಲಿ ಏಕಕಾಲಕ್ಕೆ ಶೋಧ ಕಾರ್ಯಾಚರಣೆ ನಡೆಸಿದರು.

ಇದರ ಜೊತೆಗೆ, ನಂದೂರು ಕೈಗಾರಿಕಾ ಪ್ರದೇಶದಲ್ಲಿರುವ ಆಸ್ತಿಗಳು, ಕಲಬುರಗಿ ನಗರದಲ್ಲಿನ ಫ್ಲ್ಯಾಟ್ ಗಳು, ಸೂಳೆಪೇಟೆ ಭಾಗದಲ್ಲಿ ಅಂದಾಜು 15 ಎಕರೆ ಜಮೀನು ಹಾಗೂ ವಾಣಿಜ್ಯ ಮಳಿಗೆಗಳಿಗೆ ಸಂಬಂಧಿಸಿದ ದಾಖಲೆಗಳನ್ನೂ ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಶೋಧ ಕಾರ್ಯಾಚರಣೆ ವೇಳೆ ಆಸ್ತಿ ದಾಖಲೆಗಳು, ಬ್ಯಾಂಕ್ ವ್ಯವಹಾರಗಳು, ಹೂಡಿಕೆಗಳಿಗೆ ಸಂಬಂಧಿಸಿದ ದಾಖಲೆಗಳು ಹಾಗೂ ಇತರೆ ಮಹತ್ವದ ದಾಖಲೆಗಳನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದು, ತನಿಖೆ ಮುಂದುವರಿದಿದೆ.

Tags

KalaburagiLokayukta raid
share
ವಾರ್ತಾಭಾರತಿ
ವಾರ್ತಾಭಾರತಿ
Next Story
X