Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಆಡಳಿತ ಚುಕ್ಕಾಣಿಯ ಕೈವಶಕ್ಕೆ...

ಕಲಬುರಗಿ | ಆಡಳಿತ ಚುಕ್ಕಾಣಿಯ ಕೈವಶಕ್ಕೆ ಜ್ಞಾನ ಶಕ್ತಿಯೇ ದಾರಿ: ಡಾ.ಶಿವಕುಮಾರ್

'ಹುತಾತ್ಮರ ಸ್ಮರಣೆ ನಮ್ಮ ಹೊಣೆ' ವಿಚಾರ ಸಂಕಿರಣ

ವಾರ್ತಾಭಾರತಿವಾರ್ತಾಭಾರತಿ11 Jan 2025 8:38 PM IST
share
Photo of Program

ಕಲಬುರಗಿ : ಶೋಷಿತರು, ದಲಿತರು ಹಾಗೂ ದುಡಿಯುವ ವರ್ಗದ ಜನರು ಡಾ.ಬಿ.ಆರ್.ಅಂಬೇಡ್ಕರ್ ಹೇಳಿದಂತೆ ಆಡಳಿತ ವರ್ಗದ ಆಯಕಟ್ಟಿನ ಸ್ಥಾನಕ್ಕೆ ಏರದ ಹೊರತು ತಮ್ಮ ಹಿತಕಾಯುವ ನೀತಿ ನಿರೂಪಣೆ ಮಾಡುವುದು ಸುಲಭವಲ್ಲ. ಈ ಅವಕಾಶ ಕೈಗೂಡಬೇಕಾದರೆ ಜ್ಞಾನವೇ ಶಕ್ತಿ ಎಂಬುದನ್ನು ಅರಿಯಬೇಕಿದೆ ಎಂದು ಬೆಂಗಳೂರಿನ ಅಕ್ಕ ಐಎಎಸ್ ಅಕಾಡೆಮಿ ನಿರ್ದೇಶಕ ಡಾ.ಶಿವಕುಮಾರ್ ಹೇಳಿದರು.

ನಗರದ ಪತ್ರಿಕಾ ಭವನದ ಸಾಂಸ್ಕೃತಿಕ ಸಭಾಂಗಣದಲ್ಲಿ ಜಾಗೃತ ಜನವೇದಿಕೆ ರಾಜ್ಯ ಸಮಿತಿ ವತಿಯಿಂದ ಹಮ್ಮಿಕೊಂಡ ಭೀಮಾ ಕೋರೆಗಾಂವ್ 207ನೇ ಶೌರ್ಯ ದಿನ ಆಚರಣೆ ಪ್ರಯುಕ್ತ 'ಹುತಾತ್ಮರ ಸ್ಮರಣೆ: ನಮ್ಮ ಹೊಣೆ' ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕಾರ್ಯಾಂಗ, ನ್ಯಾಯಾಂಗ, ಮಾಧ್ಯಮ ಮತ್ತು ಉದ್ಯಮ ಕ್ಷೇತ್ರದ ಕಡಿವಾಣ ಕೈಯಲ್ಲಿ ಹಿಡಿದವರು ತಮ್ಮ ಅನುಕೂಲಕ್ಕೆ ತಕ್ಕಂತೆ ನೀತಿ ನಿರೂಪಣೆ ಮಾಡುವಂತೆ ಪ್ರಭಾವ ಬೀರಲು ಶಕ್ತರಾಗಿರುತ್ತಾರೆ. ಇಂತಹ ಶಕ್ತಿ ದಲಿತ ಮತ್ತು ಹಿಂದುಳಿತ ಸಮುದಾಯದ ಜನರಿಗೆ ಬಂದಾಗ ಮಾತ್ರ ಅಂಬೇಡ್ಕರ್ ಜಯಂತಿ, ಭೀಮಾ ಕೋರೆಗಾಂವ್ ಶೌರ್ಯ ದಿನ ಆಚರಣೆಗೆ ಅರ್ಥ ಬರುತ್ತದೆ ಎಂದರು.

ಎನ್.ಎಸ್.ಎಸ್ ವಿಭಾಗೀಯ ಅಧಿಕಾರಿ ಚಂದ್ರಶೇಖರ ದೊಡ್ಡಮನಿ ಮಾತನಾಡಿದರು. ವೇದಿಕೆ ರಾಜ್ಯಾಧ್ಯಕ್ಷ ಮಹೇಶ್ ಕುಲಕರ್ಣಿ ಅಧ್ಯಕ್ಷತೆ ವಹಿಸಿದ್ದರು. ಪ್ರಗತಿಪರ ಚಿಂತಕ ಬಸವರಾಜ ಹೇರೂರ್, ಪಬ್ಲಿಕ್ ಪ್ರಾಸಿಕ್ಯೂಟರ್ ರಾಜಮಹೇಂದ್ರ ಕಿರಣಗಿ, ಇಂಜಿನಿಯರ್ ನಾಗಮೂರ್ತಿ ಶೀಲವಂತ, ಕಮಲಾಪುರ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಶಾಂತಪ್ಪ ಹಾದಿಮನಿ ಹಾಗೂ ಉಪನ್ಯಾಸಕ ಡಾ.ವಿಜಯಕುಮಾರ್ ಸಾಲಿಮನಿ, ನಿವೃತ್ತ ಡಿವೈಎಸ್ಪಿ ವಿಜಯಕುಮಾರ್ ಹೊಸ್ಮನಿ ವೇದಿಕೆಯಲ್ಲಿದ್ದರು.

ಆರಂಭದಲ್ಲಿ ಸಿದ್ಧಾರ್ಥ ಚಿಮ್ಮಾಇದಲಾಯಿ ಹಾಗೂ ಶ್ರೀಧರ ಕ್ರಾಂತಿ ಗೀತೆಗಳನ್ನು ಪ್ರಸ್ತುತಗೊಳಿಸಿದರು. ವೇದಿಕೆ ಖಜಾಂಚಿ ಎ.ಬಿ.ಪಟೇಲ್ ಸೊನ್ನ ಸ್ವಾಗತಿಸಿದರು. ಉಪಾಧ್ಯಕ್ಷ ಮಲ್ಲಿಕಾರ್ಜುನ ಎಸ್.ಗೌರ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪನ್ಯಾಸಕ ರಾಜಶೇಖರ ಹಣಕುಣಿ ನಿರೂಪಿಸಿದರು. ಪ್ರಧಾನ ಕಾರ್ಯದರ್ಶಿ ಡಾ.ಅಂಬಾಜಿ ಮೇಟಿ ವಂದಿಸಿದರು.

ವಿಚಾರ ಸಂಕಿರಣದಲ್ಲಿ ಬಸವರಾಜ ಶಿವಕೇರಿ, ಯಶವಂತ ಶಿಂಧೆ, ಹಣಮಂತ ಬೋಧನಕರ್, ಡಾ.ಕೆ.ಎಸ್.ಬಂಧು ಸಿದ್ದೇಶ್ವರ, ದಯಾನಂದ ದೊಡ್ಮನಿ, ಸುರೇಶ್ ಬಡಿಗೇರ, ಡಾ.ವಿಜಯಕುಮಾರ್ ಹೆಬ್ಬಾಳಕರ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

ಯಹೂದಿಗಳ ವಿರುದ್ಧ ತುಟಿ ಬಿಚ್ಚದ ಅಮೆರಿಕ:

ಯಹೂದಿಗಳು ಜ್ಞಾನದ ಶಕ್ತಿಯಿಂದ ಅಮೆರಿಕದ ಶೇ.50ರಷ್ಟು ಉದ್ಯಮದ ಮೇಲೆ ಹಿಡಿತ ಸಾಧಿಸಿರುವ ಕಾರಣಕ್ಕಾಗಿ ಫೆಲೆಸ್ತೀನ್ ಮೇಲೆ ಇಸ್ರೇಲ್ ಎಷ್ಟೇ ದೌರ್ಜನ್ಯ ನಡೆಸಿದರೂ ಜಗತ್ತಿನ ದೊಡ್ಡಣ್ಣ ಎನಿಸಿಕೊಂಡಿರುವ ಅಮೆರಿಕ ತುಟಿ ಬಿಚ್ಚುತ್ತಿಲ್ಲ ಎಂದು ಡಾ.ಶಿವಕುಮಾರ್ ಉಲ್ಲೇಖಿಸಿದರು.

ಅಮೆರಿಕದ ಉದ್ಯಮ ಕ್ಷೇತ್ರದ ಮೇಲೆ ಇಸ್ರೇಲ್ ಸಾಧಿಸಿರುವ ಪ್ರಾಬಲ್ಯದ ಮುಂದೆ ಜಗತ್ತಿನ ಸೂಪರ್ ಪವರ್ ಎನಿಸಿಕೊಂಡಿರುವ ಅಮೆರಿಕ ಪ್ರತಿಕ್ರಿಯಿಸದೆ ತಣ್ಣಗಿರುವುದನ್ನು ನೋಡಿದರೆ ಜ್ಞಾನದ ಶಕ್ತಿಯ ಮುಂದೆ ಎಂಥವರೂ ಮುದುಡಿಕೊಳ್ಳುತ್ತಾರೆ ಎಂಬುದು ಸಾಬೀತಾಗುತ್ತದೆ ಎಂದು ವ್ಯಾಖ್ಯಾನಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X