Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಜು.5ರಂದು ʼಹಸಿರು ಪಥಕ್ಕೆʼ...

ಕಲಬುರಗಿ | ಜು.5ರಂದು ʼಹಸಿರು ಪಥಕ್ಕೆʼ ಚಾಲನೆ: ಡಿಸಿ ಬಿ.ಫೌಝಿಯಾ ತರನ್ನುಮ್

ವಾರ್ತಾಭಾರತಿವಾರ್ತಾಭಾರತಿ1 July 2025 8:24 PM IST
share
ಕಲಬುರಗಿ | ಜು.5ರಂದು ʼಹಸಿರು ಪಥಕ್ಕೆʼ ಚಾಲನೆ: ಡಿಸಿ ಬಿ.ಫೌಝಿಯಾ ತರನ್ನುಮ್

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದಲ್ಲಿ ಹಸರೀಕರಣ ಹೆಚ್ಚಿಸುವ ಮಹತ್ವಕಾಂಕ್ಷೆಯೊಂದಿಗೆ ಇದೇ ಜುಲೈ 5ಕ್ಕೆ ಆಯವ್ಯಯ ಘೋಷಣೆಯ ಸಸಿ ನೆಡೆಯುವ ಅಭಿಯಾನದ "ಹಸಿರು ಪಥ" ಯೋಜನೆಗೆ ಕಲಬುರಗಿಯಲ್ಲಿ ಚಾಲನೆ ನೀಡಲಾಗುತ್ತಿದ್ದು, ಕಾರ್ಯಕ್ರಮ ಅಚ್ಚುಕಟ್ಟಾಗಿ ನೆರವೇರಲು ಎಲ್ಲಾ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ಸೂಚಿಸಿದ್ದಾರೆ.

ಮಂಗಳವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿದ ಅವರು, ಇದೇ ದಿನದಂದು ರಾಜ್ಯ ಮಟ್ಟದ ವನಮಹೋತ್ಸವ ಕಾರ್ಯಕ್ರಮಕ್ಕೆ ಮತ್ತು ಕಲಬುರಗಿ ನಗರದಾದ್ಯಂತ ಕೆರೆ, ಉದ್ಯಾನವನ, ಪ್ರಮುಖ ವೃತ್ತ, ರಸ್ತೆ ಬದಿಯಲ್ಲಿ ಸಸಿ ನೆಡೆಯುವ "ಹಸಿರು ಕಲಬುರಗಿ" ಅಭಿಯಾನಕ್ಕೂ ಚಾಲನೆ ನೀಡಲಾಗುತ್ತದೆ ಎಂದರು.

ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಡಾ.ಮಲ್ಲಿಕಾರ್ಜುನ ಖರ್ಗೆ, ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐ.ಟಿ-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ಅರಣ್ಯ, ಪರಿಸರ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ ಖಂಡ್ರೆ ಸೇರಿದಂತೆ ಪ್ರದೇಶದ ಸಚಿವರು, ಶಾಸಕರು ಹಾಗೂ ಇತರೆ ಚುನಾಯಿತ ಜನಪ್ರತಿನಿಧಿಗಳು ಆಗಮಿಸುವುದರಿಂದ, ಎಲ್ಲಿಯೂ ಶಿಷ್ಟಾಚಾರದಲ್ಲಿ ಉಲ್ಲಂಘನೆಯಾಗದಂತೆ ಎಚ್ಚರ ವಹಿಸಬೇಕು. ಕಾರ್ಯಕ್ರಮ ಯಶಸ್ಸಿಗೆ ವಿವಿಧ ಸಮಿತಿಗಳನ್ನು ರಚಿಸಿದ್ದು, ಅದರಂತೆ ಅಧಿಕಾರಿಗಳು ಪರಸ್ಪರ ಸಮನ್ವಯತೆ ಸಾಧಿಸಿ ತಮಗೆ ನೀಡಿದ ಜವಾಬ್ದಾರಿಯಂತೆ ಕಾರ್ಯನಿರ್ವಹಿಸಬೇಕು ಎಂದರು.

ಕಲಬುರಗಿ ನಗರದ ಪಿ.ಡಿ.ಎ. ಕಾಲೇಜಿನ ಅವರಣದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದ್ದು, ಅಲ್ಲಿಯೆ ಬೃಹತ್ ಸಸಿ ನೆಡುವ ಅಭಿಯಾನ ಸಹ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮಕ್ಕೆ 6-7 ಸಾವಿರ ಜನರು ಸೇರುವ ನಿರೀಕ್ಷೆ ಇರುವುದರಿಂದ ಜನಸಂದಣಿ ನಿಯಂತ್ರಣಕ್ಕೆ ರಾಜ್ಯ ಪೊಲೀಸ್ ಇಲಾಖೆಯಿಂದ ಇತ್ತೀಚೆಗೆ ಎಸ್.ಓ.ಪಿ ಹೊರಡಿಸಿದ್ದು, ಅದರಂತೆ ಪೊಲೀಸ್ ಇಲಾಖೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು. ಕಾರ್ಯಕ್ರಮಕ್ಕೆ ಸೂಕ್ತ ಭದ್ರತೆ, ಸ್ವಚ್ಛತೆ, ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಬೇಕು ಎಂದರು.

ಡಿ.ಸಿ.ಎಫ್ ಸುಮಿತ್ ಪಾಟೀಲ ಮಾತನಾಡಿದರು.

ಸಭೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತ ಅವಿನಾಶ ಶಿಂಧೆ, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಸಹಾಯಕ ಆಯುಕ್ತೆ ಸಾಹಿತ್ಯ, ನಗರ ಪೊಲೀಸ್ ಉಪ ಆಯುಕ್ತ ಪ್ರವೀಣ ಎಚ್. ನಾಯಕ್, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಜಗದೇವಪ್ಪ ಸೇರಿದಂತೆ ಪೊಲೀಸ್, ಅರಣ್ಯ, ಮಹಾನಗರ ಪಾಲಿಕೆಯ ಅಧಿಕಾರಿಗಳು ಇದ್ದರು.

ಜು.5 ರಂದು ನಗರದಲ್ಲಿ ಅರಣ್ಯ ಇಲಾಖೆಯ ಕಾರ್ಯಕ್ರಮ ನಡೆಯುವ ಪಿ.ಡಿ.ಎ. ಕಾಲೇಜು ಹಿಂಭಾಗದ ಮೈದಾನ ಸ್ಥಳವನ್ನು ಶಾಸಕ ಅಲ್ಲಮಪ್ರಭು ಪಾಟೀಲ್‌ ಅವರೊಂದಿಗೆ ಡಿ.ಸಿ. ಬಿ.ಫೌಝಿಯಾ ತರನ್ನುಮ್ ಅವರು ಭೇಟಿ ನೀಡಿ ಪರಿಶೀಲಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X