Kalaburagi | ಸೆ.10 ರಂದು ಗುಲ್ಬರ್ಗಾ ವಿವಿಯ 47ನೇ ಸಂಸ್ಥಾಪನಾ ದಿನಾಚರಣೆ
ಸಂಸದ ರಾಧಾಕೃಷ್ಣ ದೊಡ್ಡಮನಿ, ಶಾಸಕ ಬಸವರಾಜ ಮತ್ತಿಮಡು ಭಾಗಿ

ಕಲಬುರಗಿ: ಗುಲ್ಬರ್ಗಾ ವಿಶ್ವವಿದ್ಯಾಲಯದ 47ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮವನ್ನು ಸೆಪ್ಟೆಂಬರ್ 10ರಂದು ಗುರುವಾರ ಬೆಳಿಗ್ಗೆ 10.30 ಗಂಟೆಗೆ ವಿಶ್ವವಿದ್ಯಾಲಯದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದೆ.
ಕಾರ್ಯಕ್ರಮದಲ್ಲಿ ಕಲಬುರಗಿ ಲೋಕಸಭಾ ಸದಸ್ಯ ರಾಧಾಕೃಷ್ಣ ದೊಡ್ಡಮನಿ ಮುಖ್ಯ ಅತಿಥಿಗಳಾಗಿ ಹಾಗೂ ಕಲಬುರಗಿ ಗ್ರಾಮೀಣ ಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಗುಲ್ಬರ್ಗಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಶಶಿಕಾಂತ ಎಸ್.ಉಡಿಕೇರಿ ಅಧ್ಯಕ್ಷತೆ ವಹಿಸಲಿದ್ದಾರೆ.
ಸಿಂಡಿಕೇಟ್ ಸದಸ್ಯ ಉದಯಕುಮಾರ ಪಾಟೀಲ್ ಹಾಗೂ ವಿದ್ಯಾವಿಷಯಕ ಪರಿಷತ್ ಸದಸ್ಯ ಪ್ರೊ.ಹೂವಿನಭಾವಿ ಬಾಬಣ್ಣ ಗೌರವ ಉಪಸ್ಥಿತಿ ವಹಿಸಲಿದ್ದಾರೆ. ಕುಲಸಚಿವ ಪ್ರೊ.ರಮೇಶ ಲಂಡನಕರ್, ಮೌಲ್ಯಮಾಪನ ಕುಲಸಚಿವ ಡಾ.ಎನ್.ಜಿ.ಕಣ್ಣೂರ ಮತ್ತು ವಿತ್ತಾಧಿಕಾರಿ ಜಯಾಂಬಿಕ ಸೇರಿದಂತೆ ವಿಶ್ವವಿದ್ಯಾಲಯದ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
Next Story




